ಮಕ್ಕಳ ಬೆಳವಣಿಗೆಯಲ್ಲಿ ತಾಯಿಯಷ್ಟೇ ತಂದೆಯ ಪಾತ್ರ ಕೂಡ ದೊಡ್ಡದು. ಇಂತಹ ತಂದೆ – ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ ‘ಪರಂವಃ’ (Paramvah). ಸಂತೋಷ್ ಕೈದಾಳ ನಿರ್ದೇಶಿಸಿರುವ ಈ ಚಿತ್ರಕ್ಕಾಗಿ ನಾಗೇಶ್ ಕುಂದಾಪುರ, ಶ್ರೀ ತಲಗೇರಿ ಹಾಗೂ ಶಿವರಾಜ್ ಸೇರಿ ಬರೆದಿರುವ ‘ಭೂರಮೆಲಿ ಮತ್ಯಾರು’ ಎಂಬ ತಂದೆ ಮಗನ ಭಾವನಾತ್ಮಕ ಪಯಣಕ್ಕೆ ಮುನ್ನುಡಿಯಾಗಿರುವ ಈ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.
ಅಪರಾಜಿತ್ ಹಾಗೂ ಜೋಸ್ ಜೋಸ್ಸೆ ಸಂಗೀತ ನೀಡಿದ್ದಾರೆ. ಖ್ಯಾತ ಗಾಯಕ ರಾಜೇಶ್ ಕೃಷ್ಣನ್ (Rajesh Krishnan) ಹಾಡಿದ್ದಾರೆ. ನಟ ರಾಕ್ಷಸ ಡಾಲಿ ಧನಂಜಯ (Dolly Dhananjay) ಚಿತ್ರದ ಈ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಚಿತ್ರದ ನಾಯಕ ವೀರಗಾಸೆ ಕಲಾವಿದ. ಅವರ ಕುಟಂಬವೇ ವೀರಗಾಸೆ ಕುಟುಂಬ. ನಾಯಕನಿಗೆ ತಂದೆಯಂದರೆ ಪ್ರಾಣ. ತಂದೆಗೆ ಮಗನೇ ಜೀವ. ಇಂತಹ ವಿಭಿನ್ನ ಕಥಾಹಂದರ ಹೊಂದಿರುವ ‘ಪರಂವಃ’ ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಮುಕ್ತಾಯವಾಗಿದೆ. ಜುಲೈನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕ ಸಂತೋಷ್ ಕೈದಾಳ (Santosh Kaidala) ತಿಳಿಸಿದ್ದಾರೆ. ಇದನ್ನೂ ಓದಿ:ಚಡ್ಡಿ ಧರಿಸಿ ದೇವಸ್ಥಾನಕ್ಕೆ ಬಂದ ಹುಡುಗಿ: ನೀತಿ ಪಾಠ ಮಾಡಿದ ಕಂಗನಾ
ಪೀಪಲ್ ವಲ್ಡ್ ಫಿಲಂಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಎ.ಎಸ್ ಶೆಟ್ಟಿ ಛಾಯಾಗ್ರಹಣ, ಅಪರಾಜಿತ್ – ಜೋಸ್ ಜೋಸ್ಸೆ ಸಂಗೀತ ನಿರ್ದೇಶನ, ಪೂರ್ಣಚಂದ್ರ ತೇಜಸ್ವಿ ಹಿನ್ನೆಲೆ ಸಂಗೀತ ಹಾಗೂ ವೆಂಕಿ ಯು ಡಿ ವಿ – ವಿಕಾಸ್ ಚಂದ್ರ ಅವರ ಸಂಕಲನ ಈ ಚಿತ್ರಕ್ಕಿದೆ. ಪ್ರೇಮ್ ಸಿಡ್ಗಲ್, ಮೈತ್ರಿ ಜೆ ಕಶ್ಯಪ್, ಗಣೇಶ್ ಹೆಗ್ಗೋಡು, ನಾಜರ್, ಶೃತಿ, ಮುಕುಂದ್, ಅವಿನಾಶ್, ಶಬರೀಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.