ನವದೆಹಲಿ: ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ವಿಮಾನ ಪ್ರಯಾಣ ದರದ ಮೇಲಿನ ಮಿತಿಗಳನ್ನು ಇದೀಗ ಸರ್ಕಾರ ಕೊನೆಗೊಳಿಸಲು ನಿರ್ಧರಿಸಿದ್ದು, ಆಗಸ್ಟ್ 31 ರಿಂದ ಪ್ರಯಾಣಿಕರಿಗೆ ಶುಲ್ಕ ವಿಧಿಸಲು ವಿಮಾನಯಾನ ಸಂಸ್ಥೆಗಳಿಗೆ ಮುಕ್ತ ಅವಕಾಶ ಕಲ್ಪಿಸಿಕೊಡಲು ಕೇಂದ್ರ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ.
Advertisement
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೈನಂದಿನ ಬೇಡಿಕೆ ಮತ್ತು ವಿಮಾನ ಇಂಧನ (ಎಟಿಎಫ್) ಬೆಲೆಗಳನ್ನು ಎಚ್ಚರಿಕೆಯಿಂದ ವಿಶ್ಲೇಷಿಸಿದ ನಂತರ ವಿಮಾನ ಪ್ರಯಾಣ ದರದ ಮೇಲಿನ ಮಿತಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನಿಧಾನವಾಗಿ ವಿಮಾನಗಳಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆ ಕಾಣುತ್ತಿದೆ. ದೇಶೀಯ ಸಂಚಾರಕ್ಕೆ ವಿಮಾನಗಳು ಸಿದ್ಧವಾಗಿದೆ ಎಂದು ನಮಗೆ ವಿಶ್ವಾಸವಿದೆ. ಹಾಗಾಗಿ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಶುಲ್ಕ ವಿಧಿಸಲು ಮುಕ್ತ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಜಗತ್ತಿನಲ್ಲಿ 5 ವರ್ಷ ಕದನ ವಿರಾಮಕ್ಕೆ ಮೋದಿ ಸಮಿತಿ ರಚಿಸಿ: ಮೆಕ್ಸಿಕೋ ಅಧ್ಯಕ್ಷ
Advertisement
The decision to remove air fare caps has been taken after careful analysis of daily demand and prices of air turbine fuel. Stabilisation has set in & we are certain that the sector is poised for growth in domestic traffic in the near future. https://t.co/qxinNNxYyu
— Jyotiraditya M. Scindia (@JM_Scindia) August 10, 2022
Advertisement
ವಿಮಾನಗಳ ದೇಶೀಯ ಕಾರ್ಯಾಚರಣೆಗಳ ಪ್ರಸ್ತುತ ಸ್ಥಿತಿಯನ್ನು ಗಮನಿಸಿದ ಬಳಿಕ 2022ರ ಆಗಸ್ಟ್ 31 ರಿಂದ ಅನ್ವಯವಾಗುವಂತೆ ಶುಲ್ಕದ ಮಿತಿಯನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ ಎಂದು ವಿಮಾನಯಾನ ಸಚಿವಾಲಯ ಬುಧವಾರ ಆದೇಶಿಸಿದೆ. ಕೊರೊನಾ ಆರಂಭಗೊಂಡು ವಿಮಾನಯಾನ ನಿರ್ಬಂಧದ ಬಳಿಕ 2020ರ ಮೇ 25 ರಂದು ವಿಮಾನಯಾನ ಸಂಸ್ಥೆಗಳು ಪುನರಾರಂಭಗೊಂಡಾಗ ವಿಮಾನಯಾನದ ಅವಧಿಯನ್ನು ಅವಲಂಬಿಸಿ ಸಚಿವಾಲಯವು ದೇಶೀಯ ವಿಮಾನ ದರಗಳ ಮೇಲೆ ಕಡಿತ ಮತ್ತು ಮಿತಿಗಳನ್ನು ವಿಧಿಸಿತ್ತು. ಇದನ್ನೂ ಓದಿ: 4 ವರ್ಷಗಳಿಂದ ಸ್ಥಗಿತವಾಗಿದ್ದ ಮೈ ಶುಗರ್ ಕಾರ್ಖಾನೆ ಇಂದಿನಿಂದ ಆರಂಭ