ವಾಷಿಂಗ್ಟನ್: ಮುಂಬರುವ ಅಮೆರಿಕ ಅಧ್ಯಕ್ಷೀಯ (US President) ಚುನಾವಣೆಗೆ ಸ್ಪರ್ಧಿಸುವುದಾಗಿ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸ್ಪಷ್ಟಪಡಿಸಿದ್ದಾರೆ.
ಅಮೆರಿಕದಲ್ಲಿ ಮುಂದಿನ ಅಧ್ಯಕ್ಷೀಯ ಚುನಾವಣೆ (Election) 2024ರಲ್ಲಿ ನಡೆಯಲಿದೆ, ಈ ಚುನಾವಣೆಗೆ ಸ್ಪರ್ಧಿಸುವುದಾಗಿ ಟ್ರಂಪ್ ಘೋಷಿಸಿದ್ದು, ಈ ಮೂಲಕ ಅಧಿಕೃತವಾಗಿ ಘೋಷಿಸಿದ ಮೊದಲ ಅಭ್ಯರ್ಥಿ ಆಗಿದ್ದಾರೆ. ಇದನ್ನೂ ಓದಿ: ನಾಯಿ ದಾಳಿಗೊಳಗಾದ ಮಹಿಳೆಗೆ 2 ಲಕ್ಷ ರೂ. ಪರಿಹಾರ
Advertisement
Advertisement
ಅಮೆರಿಕದ ಮಧ್ಯಂತರ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಟ್ರಂಪ್ ತಮ್ಮ ಉಮೇದುವಾರಿಕೆಗೆ ನಾನು ಸಿದ್ಧ ಎಂದು ಹೇಳಿಕೆ ನೀಡಿದ್ದರು, ಈಗಿನಿಂದಲೇ ಚುನಾವಣೆಗೆ ಗೆಲ್ಲಲೇಬೇಕು ಎಂಬ ಪ್ಲಾನ್ ಹಾಕಿಕೊಂಡು ಮುನ್ನಡೆಯಲು ಮುಂದಾಗಿದ್ದಾರೆ. ಟ್ರಂಪ್ 2016ರಲ್ಲಿ ರಿಪಬ್ಲಿಕ್ ಪಕ್ಷದಿಂದ ಸ್ಪರ್ಧಿಸಿ ಅಧ್ಯಕ್ಷರಾಗಿ ನೇಮಕವಾಗಿದ್ದರು. ಆದರೆ 2020ರ ಚುನಾವಣೆಯಲ್ಲಿ ಎರನೇ ಬಾರಿಗೆ ಜೋ ಬೈಡನ್ ವಿರುದ್ಧ ಸೋಲನ್ನನುಭವಿಸಿದ್ದರು. ಇದನ್ನೂ ಓದಿ: ಪೋಲೆಂಡ್ ಮೇಲೆ ರಷ್ಯಾ ಕ್ಷಿಪಣಿ ದಾಳಿ – ಇಬ್ಬರು ಸಾವಿನ ಬೆನ್ನಲ್ಲೇ ಅಮೆರಿಕ ತುರ್ತು ಸಭೆ