ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಭಾರತದ ಮೇಲೆ ತೆರಿಗೆ ಸಮರ ಆರಂಭಿಸಿದ್ದಾರೆ. ಆಗಸ್ಟ್ 1 ರಿಂದ ಭಾರತದಿಂದ (Inidia) ಆಮದಾಗುವ ವಸ್ತುಗಳ ಮೇಲೆ 25% ತೆರಿಗೆ ವಿಧಿಸಲಾಗುವುದು ಘೋಷಿಸಿದ್ದಾರೆ.
ಈ ಸಂಬಂಧ ಟ್ರೂಥ್ ಸಾಮಾಜಿಕ ಜಾಲತಾಣದಲ್ಲಿ ಭಾರತದ ಮೇಲೆ ತೆರಿಗೆ ವಿಧಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಇದನ್ನೂ ಓದಿ: ಯುರೋಪಿಯನ್ ಒಕ್ಕೂಟದೊಂದಿಗೆ ಟ್ರಂಪ್ ಬಿಗ್ ಡೀಲ್ – ಆಮದುಗಳ ಮೇಲೆ 15% ಸುಂಕ
Remember, while India is our friend, we have, over the years, done relatively little business with them because their Tariffs are far too high, among the highest in the World, and they have the most strenuous and obnoxious non-monetary Trade Barriers of any Country. Also, they…
— Trump Truth Social Posts On X (@TrumpTruthOnX) July 30, 2025
ಪೋಸ್ಟ್‌ನಲ್ಲಿ ಏನಿದೆ?
ಭಾರತ ನಮ್ಮ ಸ್ನೇಹಿತನಾಗಿದ್ದರೂ, ನಾವು ವರ್ಷಗಳಲ್ಲಿ ಅವರೊಂದಿಗೆ ತುಲನಾತ್ಮಕವಾಗಿ ಕಡಿಮೆ ವ್ಯವಹಾರ ಮಾಡಿದ್ದೇವೆ ಎಂಬುದನ್ನು ನೆನಪಿಡಿ. ಭಾರತದ ಸುಂಕ ತುಂಬ ಹೆಚ್ಚಿವೆ. ಇದು ವಿಶ್ವದಲ್ಲೇ ಹೆಚ್ಚು.
ಎಲ್ಲರೂ ರಷ್ಯಾ (Russia) ಉಕ್ರೇನ್‌ನಲ್ಲಿ ಮಾಡುತ್ತಿರುವ ಯುದ್ಧವನ್ನು ನಿಲ್ಲಿಸಬೇಕೆಂದು ಹೇಳುತ್ತಿರುವ ಸಮಯದಲ್ಲಿ ಭಾರತ ಯಾವಗಲೂ ತಮ್ಮ ಮಿಲಿಟರಿ ಉಪಕರಣಗಳ ಬಹುಪಾಲು ರಷ್ಯಾದಿಂದ ಖರೀದಿಸಿದೆ ಮತ್ತು ಚೀನಾದೊಂದಿಗೆ (China) ರಷ್ಯಾದಿಂದ ಹೆಚ್ಚು ಇಂಧನ ಖರೀದಿ ಮಾಡುತ್ತಿದೆ. ಈ ಕಾರಣಕ್ಕೆ ಭಾರತದಿಂದ ಆಮದಾಗುವ ವಸ್ತುಗಳ ಮೇಲೆ 25% ತೆರಿಗೆ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ.