ನವದೆಹಲಿ: ಭಾರತದ ಪ್ರಧಾನಿಯಾಗಿ ದೀರ್ಘ ಅವಧಿ ಸೇವೆ ಸಲ್ಲಿಸಿರುವ ನರೇಂದ್ರ ಮೋದಿ (Narendra Modi) ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅಭಿನಂದನೆ ಸಲ್ಲಿಸಿದ್ದಾರೆ.
ಸೋಷಿಯಲ್ ಮೀಡಿಯಾ ಟ್ರೂತ್‌ನಲ್ಲಿ ಟ್ರಂಪ್ ಪೋಸ್ಟ್ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ನನ್ನ ಆತ್ಮೀಯ ಸ್ನೇಹಿತ. ಮಹಾನ್ ನಾಯಕ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ದೀರ್ಘಕಾಲ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ – NDA ಸರ್ಕಾರ ದೇಶದ ಭವಿಷ್ಯವನ್ನೇ ಬದಲಾಯಿಸಿದೆ: ಮೋದಿ
‘ಭಾರತದ ಪ್ರಧಾನಿಯಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಅವರು ಒಬ್ಬ ಮಹಾನ್ ವ್ಯಕ್ತಿ ಎಂದು ಟ್ರಂಪ್ ಪೋಸ್ಟ್ ಹಂಚಿಕೊಂಡಿದ್ದಾರೆ.
ಪ್ರಧಾನಿ ಮೋದಿ ಬಲಶಾಲಿ, ಆರೋಗ್ಯವಂತ ಮತ್ತು ಬುದ್ಧಿವಂತ ವ್ಯಕ್ತಿ. ಅವರಿಗೆ ಮುಂದಿನ ವರ್ಷಗಳಲ್ಲೂ ಶ್ರೇಷ್ಠತೆ ಮತ್ತು ಯಶಸ್ಸು ಸಿಗಲಿ ಎಂದು ಟ್ರಂಪ್ ಹಾರೈಸಿದ್ದಾರೆ. ಇದನ್ನೂ ಓದಿ: ನೆಹರೂ ದಾಖಲೆ ಮುರಿದ ಮೋದಿ – ಪ್ರಧಾನಿಗಳಿಗೆ ಕೇಂದ್ರ ಸಚಿವ ಹೆಚ್‌ಡಿಕೆ ಅಭಿನಂದನೆ
Thank you, President Trump, for your warm wishes.
I look forward to working with you to further advance the India-US Comprehensive Global Strategic Partnership, for the benefit of both our nations and the world.@POTUS@realDonaldTrump pic.twitter.com/4W09WzT4Ju
— Narendra Modi (@narendramodi) June 10, 2026
ಮೋದಿ ಅವರು ಪ್ರಧಾನಿಯಾಗಿ ಸುದೀರ್ಘ 4,399 ದಿನಗಳನ್ನು ಪೂರೈಸುವ ಮೂಲಕ, ಭಾರತದ ಮೊದಲ ಚುನಾಯಿತ ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನು ಮುರಿದಿದ್ದಾರೆ.
ಟ್ರಂಪ್ ಅವರ ಶುಭಾಶಯಗಳಿಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ. ಭಾರತ-ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಮುನ್ನಡೆಸಲು ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ ಎಂದು ಮೋದಿ ತಿಳಿಸಿದ್ದಾರೆ. ಟ್ರಂಪ್ ಜೊತೆಗೆ ಹಲವಾರು ವಿಶ್ವ ನಾಯಕರು ಪ್ರಧಾನಿ ಮೋದಿಗೆ ಶುಭಾಶಯ ತಿಳಿಸಿದ್ದಾರೆ.
