ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ (Donald Trump) ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರೊಂದಿಗೆ ಮಾತನಾಡಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧವನ್ನು ಉಲ್ಬಣಗೊಳಿಸದಂತೆ ಒತ್ತಾಯಿಸಿದ್ದಾರೆಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.
ಡೆಮಾಕ್ರಟಿಕ್ ಪ್ರತಿಸ್ಪರ್ಧಿ ಕಮಲಾ ಹ್ಯಾರಿಸ್ ವಿರುದ್ಧದ ಚುನಾವಣಾ ವಿಜಯದ ಕೆಲವೇ ದಿನಗಳ ನಂತರ ಟ್ರಂಪ್, ಫ್ಲೋರಿಡಾದ ಮಾರ್-ಎ-ಲಾಗೊ ಎಸ್ಟೇಟ್‌ನಿಂದ ಪುಟಿನ್‌ಗೆ ಕರೆ ಮಾಡಿದ್ದಾರೆ ಎಂದು ವರದಿಯಾಗಿದ್ದಾರೆ. ಇದನ್ನೂ ಓದಿ: ಕ್ಯೂಬಾದಲ್ಲಿ ಒಂದೇ ಗಂಟೆಯಲ್ಲಿ 2 ಪ್ರಬಲ ಭೂಕಂಪ
Advertisement
Advertisement
ಉಕ್ರೇನ್‌ನ ಯುದ್ಧದ ನಿರ್ಣಯವನ್ನು ಶೀಘ್ರದಲ್ಲೇ ಚರ್ಚಿಸಲು ಹೆಚ್ಚಿನ ಮಾತುಕತೆಗೆ ಆಸಕ್ತಿ ಹೊಂದಿದ್ದೇವೆಂದು ಪುಟಿನ್‌ಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಹೋರಾಟವನ್ನು ಶೀಘ್ರವಾಗಿ ಕೊನೆಗೊಳಿಸಬೇಕೆಂದು ಎಂಬುದು ಟ್ರಂಪ್ ಒತ್ತಾಯವಾಗಿತ್ತು.
Advertisement
ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಬುಧವಾರ ಟ್ರಂಪ್ ಅವರೊಂದಿಗೆ ಮಾತನಾಡಿದರು. ರಿಪಬ್ಲಿಕನ್ ಪಕ್ಷದ ಬಿಲಿಯನೇರ್ ಬೆಂಬಲಿಗ ಎಲೋನ್ ಮಸ್ಕ್ ಅವರು ಕರೆಯಲ್ಲಿ ಅವರೊಂದಿಗೆ ಸೇರಿಕೊಂಡಿದ್ದರು. ಇದನ್ನೂ ಓದಿ: ಭಾರತದಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಸಲು ಯುವಕರನ್ನ ಪ್ರಚೋದಿಸುತ್ತಿದ್ದ ಖಲಿಸ್ತಾನಿ ಉಗ್ರ ಕೆನಡಾದಲ್ಲಿ ಬಂಧನ
Advertisement
ಅಧ್ಯಕ್ಷ ಜೋ ಬೈಡನ್ ಅವರು ತಮ್ಮ ಅವಧಿ ಮುಗಿಯುವವರೆಗೂ ಉಕ್ರೇನ್‌ಗೆ ಸಾಧ್ಯವಾದಷ್ಟು ಸಹಾಯವನ್ನು ಕಳುಹಿಸುವುದಾಗಿ ದೃಢಪಡಿಸಿದ್ದಾರೆ.