– ಬಂಧನವಾದ ಕೆಲವೇ ಗಂಟೆಗಳಲ್ಲಿ ಟ್ರಂಪ್ ಮತ್ತೆ ಬಿಡುಗಡೆ
ನ್ಯೂಯಾರ್ಕ್: ನೀಲಿಚಿತ್ರ ನಟಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ (America) ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಬಂಧಿಸಿದ ಕೆಲವೇ ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದಾರೆ.
ಮ್ಯಾನ್ ಹಾಟನ್ ಜಿಲ್ಲಾ ಅಟಾರ್ನಿಯ ಕೋರ್ಟ್ ಸಭಾಂಗಣದಲ್ಲಿ ಟ್ರಂಪ್ ಶರಣಾದರು. ಬಳಿಕ ಅವರನ್ನು ಬಂಧಿಸಿದ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ಬಳಿಕ ಅವರನ್ನು ಬಿಡುಗಡೆಗೊಳಿಸಲಾಯಿತು.
Advertisement
Advertisement
ಈ ವೇಳೆ ಟ್ರಂಪ್ ವಿರುದ್ಧ ಲೈಂಗಿಕ ಪ್ರಕರಣ ಮುಚ್ಚಿಡಲು ಹಣ ನೀಡಿದ್ದು, ಸೇರಿದಂತೆ ಹಣ ವಂಚನೆಯ 34 ದೋಷಾರೋಪಗಳನ್ನು ಹೊರಿಸಲಾಯಿತು. ಕಾನೂನು ಸಲಹಾ ಸಿಬ್ಬಂದಿ ಜೊತೆ ಬಂದಿದ್ದ ಟ್ರಂಪ್, ನಾನು ತಪ್ಪು ಮಾಡಿಲ್ಲ. 34 ಆರೋಪಗಳಲ್ಲಿ ನಾನು ನಿರಪರಾಧಿ ಎಂದಿದ್ದಾರೆ.
Advertisement
ಸುಮಾರು ಒಂದು ಗಂಟೆ ಕಾಲ ವಿಚಾರಣೆ ನಡೆಯಿತು. ವಿಚಾರಣೆಯ ನಂತರ ಟ್ರಂಪ್, ತಮ್ಮ ವಾಹನದಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದರು. ಈ ಮೂಲಕ ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್ ಆರೋಪ ಪ್ರಕರಣದ ವಿಚಾರಣೆ ಎದುರಿಸಿ ಬಂಧನಕ್ಕೆ ಒಳಗಾದ ಮೊದಲ ಅಮೆರಿಕದ ಮಾಜಿ ಅಧ್ಯಕ್ಷರಾಗಿದ್ದಾರೆ. ಇದನ್ನೂ ಓದಿ: Swiggy, Zomatoಗೆ ಕೌಂಟರ್ – ಹೋಟೆಲ್ ಅಸೋಸಿಯೇಷನ್‍ನಿಂದ ಹೊಸ ಆ್ಯಪ್‌ಗೆ ಸಿದ್ಧತೆ
Advertisement
ಕೋರ್ಟ್ ಹಾಲ್‍ಗೆ ಕರೆದೊಯ್ಯುವ ಮೊದಲು ಟ್ರಂಪ್ ಅವರ ಬೆರಳಚ್ಚುಗಳ ಮಾದರಿಯನ್ನು ಪೊಲೀಸರು ಪಡೆದರು. ಹೆಸರು, ವಯಸ್ಸು, ಎತ್ತರ, ತೂಕ ಒಳಗೊಂಡಂತೆ ವ್ಯಕ್ತಿಗತ ಮಾಹಿತಿ ಪಡೆದರು. ಅವರ ವಿರುದ್ಧ ಯಾವುದಾದರೂ ವಾರೆಂಟ್ ಬಾಕಿ ಇದೆಯೇ ಎಂದು ಪರಿಶೀಲಿಸಿದರು. ಇದನ್ನೂ ಓದಿ: ಹತ್ತು ವರ್ಷದಿಂದ ನಾಪತ್ತೆಯಾಗಿದ್ದ ನಟೋರಿಯಸ್ ರೌಡಿಶೀಟರ್‌ಗಳ ಬಂಧನ
ಏನಿದು ಕೇಸ್: ಟ್ರಂಪ್ ಅವರು ಈ ಹಿಂದೆ ಪೋರ್ನ್ ಸ್ಟಾರ್ ಸ್ಟಾರ್ಮಿ ಡೇನಿಯಲ್ (ನಿಜವಾದ ಹೆಸರು ಸ್ಟೆಫನಿ ಕ್ಲಿಫರ್ಡ್) ಅವರೊಂದಿಗೆ ಸಂಬಂಧ ಹೊಂದಿದ್ದರು ಎನ್ನಲಾಗಿದೆ. 2016ರ ಚುನಾವಣೆ ವೇಳೆ ಈ ಸಂಬಂಧ ಬಹಿರಂಗಪಡಿಸುವುದನ್ನು ತಡೆಯಲು ಟ್ರಂಪ್ ಆಕೆಗೆ 1,30,000 ಡಾಲರ್ (ಸುಮಾರು 1,07,00,000 ರೂ.) ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ.