ವಾಷಿಂಗ್ಟನ್: ಯೂಟ್ಯೂಬ್ (YouTube) ಹಾಗೂ ಫೇಸ್‌ಬುಕ್‌ಗಳಲ್ಲಿ (Facebook) 2 ವರ್ಷಗಳ ಕಾಲ ಬ್ಯಾನ್ (Ban) ಆಗಿದ್ದ ಅಮೆರಿಕದ (America) ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಖಾತೆಗಳು ಇದೀಗ ಮರಳಿ ಬಂದಿದೆ.
2021ರ ಜನವರಿ 6ರಂದು ಟ್ರಂಪ್ ಬೆಂಬಲಿಗರು ಸರ್ಕಾರಿ ಕಟ್ಟಡಗಳ ಮೇಲೆ ದಾಳಿ ಮಾಡಿದ್ದರು. ಈ ಹಿಂಸಾಚಾರಕ್ಕೆ ಟ್ರಂಪ್ ಪ್ರಚೋದನೆ ನೀಡುವಂತಹ ಪೋಸ್ಟ್‌ಗಳನ್ನು ಹಾಕಿದ್ದಕ್ಕೆ ಅವರ ಯೂಟ್ಯೂಬ್ ಹಾಗೂ ಫೇಸ್‌ಬುಕ್ ಖಾತೆಗಳನ್ನು ಬ್ಯಾನ್ ಮಾಡಲಾಗಿತ್ತು. ಇದೀಗ 2 ವರ್ಷಗಳ ಬಳಿಕ ಅವರ ಖಾತೆಗಳನ್ನು ಮತ್ತೆ ಸ್ಥಾಪಿಸಲಾಗಿದೆ.
Advertisement
Advertisement
ಫೇಸ್‌ಬುಕ್ ಹಾಗೂ ಯೂಟ್ಯೂಬ್‌ಗೆ ಮರಳುತ್ತಲೇ ಟ್ರಂಪ್ ಪೋಸ್ಟ್‌ಗಳನ್ನು ಹಾಕಿದ್ದಾರೆ. ಶುಕ್ರವಾರ ಟ್ರಂಪ್ ಪೋಸ್ಟ್ ಒಂದನ್ನು ಹಾಕಿ, ‘ಐ ಆಮ್ ಬ್ಯಾಕ್’ (ನಾನು ಮರಳಿ ಬಂದಿದ್ದೇನೆ) ಎಂದು ಬರೆದಿದ್ದಾರೆ. ಮಾತ್ರವಲ್ಲದೇ ಇಲ್ಲಿವರೆಗೆ ನಿಮ್ಮನ್ನು ಕಾಯಿಸಿರುವುದಕ್ಕೆ ಕ್ಷಮಿಸಿ ಎಂದು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: `ಕೈ’ ಟಿಕೆಟ್ ಆಕಾಂಕ್ಷಿಯಿಂದ ಸೀರೆ, ತವಾ ವಿತರಣೆ- ಉಡುಗೊರೆ ಸಿಗದ ಮಹಿಳೆಯರು ಗರಂ
Advertisement
ಯೂಟ್ಯೂಬ್ ಶುಕ್ರವಾರ ಟ್ರಂಪ್ ಅವರ ಚಾನಲ್ ಅನ್ನು ಮರಳಿಸಿದ್ದು, ಮೆಟಾ ಪ್ಲಾಟ್‌ಫಾರ್ಮ್ ಈ ವರ್ಷದ ಆರಂಭದಲ್ಲಿ ಅವರ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್ ಖಾತೆಗಳನ್ನು ಮರಳಿಸಿವೆ. ಟ್ವಿಟ್ಟರ್ ಅನ್ನು ಖರೀದಿಸಿದ ಎಲೋನ್ ಮಸ್ಕ್ ಕಳೆದ ವರ್ಷ ನವೆಂಬರ್‌ನಲ್ಲಿಯೇ ಅವರ ಖಾತೆಯನ್ನು ಮರಳಿಸಿದ್ದರು. ಆದರೆ ಟ್ರಂಪ್ ಇಲ್ಲಿಯವರೆಗೆ ಟ್ವಿಟ್ಟರ್‌ನಲ್ಲಿ ಯಾವುದೇ ಪೋಸ್ಟ್‌ಗಳನ್ನು ಹಂಚಿಕೊಂಡಿಲ್ಲ.
Advertisement
ಹಲವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಂದ ಬ್ಯಾನ್ ಆಗಿದ್ದ ಟ್ರಂಪ್ 2021ರ ಅಂತ್ಯದ ವೇಳೆಗೆ ಟ್ರೂತ್ ಸೋಶಿಯಲ್ ಎಂಬ ತಮ್ಮದೇ ಹೊಸ ಪ್ಲಾಟ್‌ಫಾರ್ಮ್ ಅನ್ನು ಸ್ಥಾಪಿಸಿದ್ದರು. ಇದನ್ನು ಅವರು ತಮ್ಮ ಬೆಂಬಲಿಗರೊಂದಿಗೆ ಸಂವಹನ ನಡೆಸಲು ಬಳಸುತ್ತಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಬಾಡೂಟ ರಾಜಕೀಯಕ್ಕೆ ಬಿಸಿ- ನೀತಿ ಸಂಹಿತೆ ಉಲ್ಲಂಘನೆ ಅಡಿ ಕೇಸ್