ವಾಷಿಂಗ್ಟನ್: ಮುಂದಿನ ವಾರ ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡುವುದಾಗಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಿಳಿಸಿದ್ದಾರೆ.
ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಟ್ರಂಪ್ ಮಿಚಿಗನ್‌ನಲ್ಲಿ ಪ್ರಚಾರ ಮಾಡುವಾಗ ಈ ವಿಚಾರ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅದ್ಭುತ ವ್ಯಕ್ತಿ ಎಂದು ಟ್ರಂಪ್ ಬಣ್ಣಿಸಿದ್ದಾರೆ. ಇದನ್ನೂ ಓದಿ: ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಸದಸ್ಯರ ಮೇಲೆ ದಾಳಿ, ಸಾವಿರಾರು ಪೇಜರ್ ಸ್ಫೋಟ – 8 ಸಾವು, 2 ಸಾವಿರಕ್ಕೂ ಹೆಚ್ಚು ಮಂದಿ ಗಂಭೀರ ಗಾಯ
Advertisement
Advertisement
ಮೋದಿ ಅವರು ಮುಂದಿನ ವಾರ ನನ್ನನ್ನು ಭೇಟಿಯಾಗಲು ಬರುತ್ತಾರೆ ಎಂದು ಹೇಳಿದ್ದಾರೆ. ಆದರೆ ಅವರ ಭೇಟಿಯ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಿಲ್ಲ.
Advertisement
ಪ್ರಧಾನಿ ಮೋದಿ ಅವರು ಸೆ.21 ರಿಂದ 23 ರವರೆಗೆ ಯುನೈಟೆಡ್ ಸ್ಟೇಟ್ಸ್‌ಗೆ ಭೇಟಿ ನೀಡಲಿದ್ದು, ಈ ಸಮಯದಲ್ಲಿ ಅವರು ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸುತ್ತಾರೆ. ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ‘ಭವಿಷ್ಯದ ಶೃಂಗಸಭೆ’ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದನ್ನೂ ಓದಿ: ನ್ಯೂಯಾರ್ಕ್‌ನಲ್ಲಿ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸ
Advertisement
ಇದು ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಾಗಿದೆ. ಇದು ವಿಲ್ಮಿಂಗ್ಟನ್, ಡೆಲವೇರ್ನಲ್ಲಿ US ಅಧ್ಯಕ್ಷ ಜೋ ಬೈಡೆನ್ ಭಾಗವಹಿಸಲಿದ್ದಾರೆ. ಅವರು ಭಾನುವಾರ ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಎಐ, ಕ್ವಾಂಟಮ್ ಕಂಪ್ಯೂಟಿಂಗ್, ಸೆಮಿಕಂಡಕ್ಟರ್‌ಗಳು ಮತ್ತು ಜೈವಿಕ ತಂತ್ರಜ್ಞಾನದ ಅತ್ಯಾಧುನಿಕ ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವೆ ಹೆಚ್ಚಿನ ಸಹಯೋಗವನ್ನು ಬೆಳೆಸಲು ಪ್ರಧಾನ ಮಂತ್ರಿ ಯುಎಸ್ ಮೂಲದ ಪ್ರಮುಖ ಕಂಪನಿಗಳ ಸಿಇಒಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಪಿಎಂ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಕೊನೆಯ ಬಾರಿಗೆ 2020 ರ ಫೆಬ್ರವರಿಯಲ್ಲಿ ಭೇಟಿಯಾಗಿದ್ದರು. ಆಗ ಯುಎಸ್ ಅಧ್ಯಕ್ಷರಾಗಿದ್ದ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ್ದರು.