– ಮಕ್ಕಳಿಂದ ಕ್ಯಾಂಡಿ ಕದಿಯುವಂತೆ ನಮ್ಮ ಉದ್ಯಮ ದೋಚಿದ್ದಾರೆಂದ ಅಮೆರಿಕ ಅಧ್ಯಕ್ಷ
ವಾಷಿಂಗ್ಟನ್: ಭಾರತ ಸೇರಿದಂತೆ ವಿದೇಶಗಳ ಮೇಲಿನ ಟ್ರಂಪ್ ಸುಂಕ ಸಮರ ಮುಂದುವರಿದಿದೆ. ವಿದೇಶಗಳ ಸಿನಿಮಾಗಳ ಮೇಲೆ ಶೇ.100 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಅಮೆರಿಕವು ತನ್ನ ದೇಶದ ಹೊರಗೆ ತಯಾರಾಗುವ ಎಲ್ಲಾ ಚಲನಚಿತ್ರಗಳ ಮೇಲೆ 100% ಸುಂಕವನ್ನು ವಿಧಿಸುತ್ತದೆ ಎಂದು ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ ಘೋಷಿಸಿದ್ದಾರೆ.
ಅಮೆರಿಕದ ಚಲನಚಿತ್ರ ವ್ಯವಹಾರವನ್ನು ವಿದೇಶಗಳ ಸ್ಪರ್ಧಿಗಳು ಆಕ್ರಮಿಸಿಕೊಂಡಿದ್ದಾರೆ. ಮಕ್ಕಳಿಂದ ಕ್ಯಾಂಡಿ ಕದಿಯುವ ರೀತಿಯಲ್ಲಿ ಅಮೆರಿಕದ ಚಲನಚಿತ್ರ ನಿರ್ಮಾಣ ವ್ಯವಹಾರವನ್ನು ಇತರೆ ದೇಶಗಳು ಕದ್ದಿವೆ ಎಂದು ತಿಳಿಸಿದ್ದಾರೆ.
ವಿದೇಶ ಚಲನಚಿತ್ರಗಳ ಮೇಲೆ ಹೆಚ್ಚಿನ ಸುಂಕ ವಿಧಿಸುವ ಪ್ರಕ್ರಿಯೆ ಪ್ರಾರಂಭಿಸಲು ವಾಣಿಜ್ಯ ಇಲಾಖೆ ಮತ್ತು ಯುಎಸ್ ವ್ಯವಹಾರ ಪ್ರತಿನಿಧಿಗೆ ಟ್ರಂಪ್ ಅಧಿಕಾರ ನೀಡಿದ್ದಾರೆ. ಅಮೆರಿಕನ್ ಚಲನಚಿತ್ರೋದ್ಯಮವು ಅತ್ಯಂತ ವೇಗವಾಗಿ ಸಾಯುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಟ್ರಂಪ್ ಕ್ರಮವು ಹಾಲಿವುಡ್‌ಗೆ ಮತ್ತಷ್ಟ ಸಮಸ್ಯೆ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಡಿಸ್ನಿ, ಪ್ಯಾರಾಮೌಂಟ್ ಮತ್ತು ವಾರ್ನರ್ ಬ್ರದರ್ಸ್ ಸೇರಿದಂತೆ ಅನೇಕ ಯುಎಸ್ ಸ್ಟುಡಿಯೋಗಳು ವೆಚ್ಚವನ್ನು ಕಡಿತಗೊಳಿಸಲು ಆಗಾಗ್ಗೆ ವಿದೇಶಗಳಲ್ಲಿ ಚಿತ್ರೀಕರಣ ಮಾಡುತ್ತವೆ. ಇದರಿಂದ ಮತ್ತಷ್ಟು ತೊಂದರೆಯಾಗಲಿದೆ ಎಂದು ತಿಳಿಸಿದ್ದಾರೆ.