ವಾಷಿಂಗ್ಟನ್: ಭಾರತದಿಂದ (India) ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ.25 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ್ದಾರೆ. ಈ ಬೆನ್ನಲ್ಲೇ, ಪಾಕಿಸ್ತಾನದೊಂದಿಗೆ ಅಮೆರಿಕ (America) ವ್ಯಾಪಾರ ಒಪ್ಪಂದ ಮಾಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
ದಕ್ಷಿಣ ಏಷ್ಯಾ ರಾಷ್ಟ್ರ ಪಾಕಿಸ್ತಾನದ (Pakistan) ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಮೆರಿಕ ಒಪ್ಪಂದ ಮಾಡಿಕೊಂಡಿದೆ. ಇದನ್ನೂ ಓದಿ: ಭಾರತದ ಮೇಲೆ ಟ್ರಂಪ್ ತೆರಿಗೆ ಸಮರ : ಆ.1 ರಿಂದಲೇ 25% ಸುಂಕ
ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ 25% ರಷ್ಟು ಸುಂಕ ವಿಧಿಸಲಾಗುವುದು. ರಷ್ಯಾದ ಶಸ್ತ್ರಾಸ್ತ್ರಗಳು ಮತ್ತು ಇಂಧನ ಖರೀದಿ ಮಾಡುತ್ತಿರುವುದಕ್ಕೆ ಈ ದಂಡ ವಿಧಿಸಲಾಗುತ್ತಿದೆ ಎಂದು ಟ್ರಂಪ್ ಬುಧವಾರ ಹೇಳಿದ್ದರು. ತಮ್ಮ ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಆ.1 ರಿಂದಲೇ ಭಾರತಕ್ಕೆ ಟ್ಯಾರಿಫ್ ಹಾಕಲಾಗುವುದು ಎಂದು ತಿಳಿಸಿದ್ದರು.
ಭಾರತ ನಮ್ಮ ಸ್ನೇಹಿತ ಎನ್ನುತ್ತಲೇ ಟ್ರಂಪ್ ಟ್ಯಾರಿಫ್ ಹಾಕಿದ್ದಾರೆ. ಭಾರತದ ಜೊತೆ ಮಾತುಕತೆ ನಡೆಯುತ್ತಿದೆ. ವಾರದೊಳಗೆ ಮಾತುಕತೆಗೆ ಸ್ಪಷ್ಟಚಿತ್ರಣ ಸಿಗಲಿದೆ. ಏನಾಗುತ್ತದೆ ಎಂಬದನ್ನು ನೋಡೋಣ ಎಂದು ಟ್ರಂಪ್ ಹೇಳಿದ್ದರು. ಇದನ್ನೂ ಓದಿ: ಭಾರತದ ಜೊತೆ ಟ್ರೇಡ್ ಡೀಲ್ ಫೈನಲ್ ಆಗಿಲ್ಲ; 20-25% ಟ್ಯಾರಿಫ್ ಹಾಕ್ತೀನಿ ಎಂದ ಟ್ರಂಪ್
ಭಾರತ ನಮ್ಮ ಸ್ನೇಹಿತನಾಗಿದ್ದರೂ, ನಾವು ಅವರೊಂದಿಗೆ ಕಡಿಮೆ ವ್ಯವಹಾರ ಮಾಡಿದ್ದೇವೆ. ಏಕೆಂದರೆ ಅವರ ಸುಂಕಗಳು ತುಂಬಾ ಹೆಚ್ಚಿವೆ. ವಿಶ್ವದಲ್ಲೇ ಅತ್ಯಧಿಕವಾಗಿವೆ. ಭಾರತ ಯಾವಾಗಲೂ ತನ್ನ ಮಿಲಿಟರಿ ಉಪಕರಣಗಳ ಬಹುಪಾಲನ್ನು ರಷ್ಯಾದಿಂದ ಖರೀದಿಸುತ್ತದೆ. ಚೀನಾದೊಂದಿಗೆ ರಷ್ಯಾದ ಅತಿದೊಡ್ಡ ಇಂಧನ ಖರೀದಿದಾರರಾಗಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಬೇಕೆಂದು ಎಲ್ಲರೂ ಬಯಸುವ ಹೊತ್ತಲ್ಲಿ, ಭಾರತ ಮತ್ತು ಚೀನಾದ ನಡೆ ಸರಿಯಲ್ಲ ಎಂದು ಟ್ರಂಪ್ ಟ್ರುತ್ ಸೋಶಿಯಲ್ ಪೋಸ್ಟ್ ಹಾಕಿದ್ದರು.