ಎರಡು ವರ್ಷಗಳ ನಿಷೇಧದ ಬಳಿಕ ಟ್ರಂಪ್ ಫೇಸ್‍ಬುಕ್, ಇನ್‍ಸ್ಟಾಗ್ರಾಂ ಖಾತೆ ಮರುಸ್ಥಾಪನೆ

ವಾಷಿಂಗ್ಟನ್: ಅಮೆರಿಕದ (America) ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಫೇಸ್‍ಬುಕ್ (Facebook) ಮತ್ತು ಇನ್‍ಸ್ಟಾಗ್ರಾಂ (Instagram) ಖಾತೆಯನ್ನು ಬ್ಯಾನ್ ಮಾಡಿದ್ದ ಮೇಟಾ (Meta) ಸಂಸ್ಥೆ ಇದೀಗ 2 ವರ್ಷಗಳ ನಿಷೇಧದ ಬಳಿಕ ಮರುಸ್ಥಾಪನೆಗೆ ಅವಕಾಶ ನೀಡುವುದಾಗಿ ತಿಳಿಸಿದೆ.
ಅಮೆರಿಕ ಸಂಸತ್ ಭವನದ ಮೇಲೆ 2021ರ ಜನವರಿ 6 ರಂದು ನಡೆದ ದಂಗೆಗೆ ಸಂಬಂಧಿಸಿದಂತೆ ಟ್ರಂಪ್ ಮಾಡಿದ್ದ ಫೇಸ್‍ಬುಕ್ ಪೋಸ್ಟ್‌ಗಳು ಪ್ರಚೋದನಕಾರಿಯಾಗಿದ್ದವು ಎಂಬ ಕಾರಣಕ್ಕೆ ಫೇಸ್‍ಬುಕ್ ಸಂಸ್ಥೆ ಟ್ರಂಪ್ ಖಾತೆಯನ್ನು 2 ವರ್ಷಗಳ ಕಾಲ ಬ್ಯಾನ್ ಮಾಡಿತ್ತು. ಇದರೊಂದಿಗೆ ಇನ್‍ಸ್ಟಾಗ್ರಾಂ ಖಾತೆಯನ್ನು ಬ್ಯಾನ್ ಮಾಡಿತ್ತು. ಡೊನಾಲ್ಡ್ ಟ್ರಂಪ್ ಫೇಸ್‍ಬುಕ್ ಖಾತೆ 2 ವರ್ಷ ಬ್ಯಾನ್
ಇದೀಗ ನಾವು ಮುಂದಿನ ಕೆಲ ದಿನಗಳಲ್ಲಿ ಟ್ರಂಪ್ ಅವರ ಫೇಸ್‍ಬುಕ್ ಮತ್ತು ಇನ್‍ಸ್ಟಾಗ್ರಾಂ ಖಾತೆಗಳನ್ನು ಮರುಸ್ಥಾಪಿಸಲು ಅವಕಾಶ ನೀಡುತ್ತಿದ್ದೇವೆ ಎಂದು ಮೆಟಾದ ಜಾಗತಿಕ ವ್ಯವಹಾರಗಳ ಅಧ್ಯಕ್ಷ ನಿಕ್ ಕ್ಲೆಗ್ (Nick Clegg) ತಿಳಿಸಿದ್ದಾರೆ. ಪುನರಾವರ್ತಿತ ಅಪರಾಧಗಳನ್ನು ತಡೆಯಲು ಹೊಸ ಮಾನದಂಡಗಳೊಂದಿಗೆ ಖಾತೆಯನ್ನು ಮರಸ್ಥಾಪಿಸಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದ್ದಾರೆ. ತನ್ನದೇ ಹೊಸ ಸಾಮಾಜಿಕ ಮಾಧ್ಯಮ ‘TRUTH Social’ ಆರಂಭಿಸಿದ ಟ್ರಂಪ್
https://twitter.com/alx/status/1618370591408664576
ಹಿಂಸಾಚಾರಕ್ಕೆ ಪ್ರಚೋದನಕಾರಿಯಾಗಿ ಮಾಡಿದ ಪೋಸ್ಟ್‌ಗೆ ಸಂಬಂಧಿಸಿದಂತೆ ಸಂಸ್ಧೆಯು ತೆಗೆದುಕೊಂಡಿರುವ ನಿರ್ಧಾರದ ಪ್ರಕಾರ ಡೊನಾಲ್ಡ್ ಟ್ರಂಪ್ ಅವರ ಖಾತೆಯನ್ನು 2023ರ ಜನವರಿವರೆಗೆ ಬ್ಯಾನ್ ಮಾಡಲಾಗಿದೆ ಎಂದು 2 ವರ್ಷಗಳ ಹಿಂದೆ ನಿಕ್ ಕ್ಲೆಗ್ ಬ್ಲಾಗ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು. ಇದೀಗ ಮತ್ತೆ ಮರುಸ್ಥಾಪಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದ್ದಾರೆ.
ಟ್ರಂಪ್ ಅವರ ಫೇಸ್‍ಬುಕ್ ಖಾತೆಯನ್ನು 2 ವರ್ಷ ಬ್ಯಾನ್ ಮಾಡಿದ್ದರೆ, ಟ್ವಿಟ್ಟರ್ (Twitter) ಮಾತ್ರ ಶಾಶ್ವತವಾಗಿ ಖಾತೆಯನ್ನು ರದ್ದುಮಾಡಿದೆ. 88 ಮಿಲಿಯನ್ ಫಾಲೋವರ್ಸ್ ಹೊಂದಿದ ಟ್ವಿಟ್ಟರ್ ಖಾತೆ ಈಗಾಗಲೇ ಬ್ಯಾನ್ ಆಗಿದೆ.
Live Tv
Join our Whatsapp group by clicking the below link
https://chat.whatsapp.com/E6YVEDajTzH06LOh77r25k