ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿಸುತ್ತಿರುವುದರಿಂದ ಭಾರತದ (India) ಮೇಲೆ ವಿಧಿಸಲಾದ 50% ಸುಂಕವು ಎರಡೂ ದೇಶಗಳ ನಡುವಿನ ಸಂಬಂಧ ಹದಗೆಡಿಸಿದೆ ಅಂತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಪ್ಪೊಪ್ಪಿಕೊಂಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಟ್ರಂಪ್, ರಷ್ಯಾದಿಂದ ತೈಲ (Russian Oil) ಖರೀದಿಸುತ್ತಿರುವುದರಿಂದ ಭಾರತದ ಮೇಲೆ ವಿಧಿಸಲಾದ 50% ಸುಂಕವು ಎರಡೂ ದೇಶಗಳ ನಡುವಿನ ಸಂಬಂಧ ಹದಗೆಡಿಸಿದೆ. ಭಾರತ ರಷ್ಯಾದ ಅತಿದೊಡ್ಡ ಗ್ರಾಹಕ, ಹಾಗಾಗಿ ಸುಂಕ ವಿಧಿಸಲಾಯ್ತು. ಆದ್ರೆ ಭಾರತದ ಮೇಲೆ 50% ತೆರಿಗೆ ಹಾಕುವುದು ಸುಲಭವಾಗಿರಲಿಲ್ಲ, ಇದರಿಂದಾಗಿಯೇ ಭಾರತದ ಜೊತೆ ಭಿನ್ನಾಭಿಪ್ರಾಯ ಶುರುವಾಯ್ತು. ಈ ಕ್ರಮದಿಂದ ಯುರೋಪಿಯನ್ ರಾಷ್ಟ್ರಗಳ ಮೇಲೂ ಸಮಸ್ಯೆ ಆಗಿದೆ ಎಂದೂ ಅವರು ಹೇಳಿದರು.
ಮುಂದುವರಿದು.. ಇದು ಒಂದು ದೊಡ್ಡ ಹೆಜ್ಜೆಯಾದರೂ ಭಾರತದೊಂದಿಗಿನ ಸಂಬಂಧಗಳನ್ನ ಹಾಳು ಮಾಡಿದೆ. ವ್ಯಾಪಾರ ಯುದ್ಧವು, ಎರಡೂ ದೇಶಗಳ ನಡುವಿನ ಸಂಬಂಧಗಳಲ್ಲಿ ಉದ್ವಿಗ್ನತೆ ಉಂಟುಮಾಡಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಚಾರ್ಲಿ ಕಿರ್ಕ್ ಹತ್ಯೆಯ ಶಂಕಿತ ಆರೋಪಿ ಬಂಧನ: ಡೊನಾಲ್ಡ್ ಟ್ರಂಪ್
ಅಮೆರಿಕಕ್ಕೇ ತಿರುಗುಬಾಣ
ಭಾರತದ ಮೇಲೆ 50% ಸುಂಕ ವಿಧಿಸಿದ ಬಳಿಕ ಅಮೆರಿಕ ವಿರುದ್ಧ ಅಸಮಾಧಾನ ಹೆಚ್ಚಾಗಿದೆ. ಉಕ್ರೇನ್ ಮೇಲಿನ ಯುದ್ಧಕ್ಕಾಗಿ ಪಾಶ್ಚಿಮಾತ್ಯ ದೇಶಗಳು ಈಗಾಗಲೇ ರಷ್ಯಾದ ಮೇಲೆ ನಿರ್ಬಂಧಗಳನ್ನ ಹೇರಿವೆ. ಈ ಪರಿಸ್ಥಿತಿಯಲ್ಲಿ ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತದ ಮೇಲೆ 50% ಆಮದು ಸುಂಕ ವಿಧಿಸಿರೋದು, ಅಮೆರಿಕಕ್ಕೇ ತಿರುಗುಬಾಣ ಬಿಟ್ಟಂತಾಗಿದೆ. ಇದನ್ನೂ ಓದಿ: ಸಮುದ್ರದ ತಳದಲ್ಲಿ ಇದೆಯಂತೆ ಸಿಹಿನೀರು – ಭೂಮಿ ಮೇಲಿನ ಜನರಿಗೆ ಕುಡಿಯೋಕೆ ಸಿಗುತ್ತಾ?
ಪಾಕ್‌ಗಿಂತಲೂ ಭಾರತಕ್ಕೆ ಸುಂಕ ಅಧಿಕ
ಈ ಹಿಂದೆ 25% ಆಮದು ಸುಂಕ ವಿಧಿಸಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, ಭಾರತ ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದ ಬಳಿಕ ಆಗಸ್ಟ್ 27ರಿಂದ ಅನ್ವಯವಾಗುವಂತೆ 50% ಸುಂಕ ವಿಧಿಸಿದರು. ಆದ್ರೆ ಪಾಕಿಸ್ತಾನದ ಆಮದಿನ ಮೇಲೆ ಟ್ರಂಪ್ 19% ಸುಂಕ ಮಾತ್ರ ವಿಧಿಸಿದ್ದಾರೆ. ಆದಾಗ್ಯೂ ಟ್ರಂಪ್ ವ್ಯಾಪಾರ ಸಂಬಂಧಕ್ಕೆ ಉಂಟಾಗಿರುವ ಅಡೆತಡೆಗಳನ್ನು ತೆಗೆದುಹಾಲು ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.
ಯುರೋಪ್ ಒಗ್ಗೂಡುವಂತೆ ಮನವಿ
ಟ್ರಂಪ್ ಅವರ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಮಾತನಾಡಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬಗ್ಗೆ ಟ್ರಂಪ್ ಅವರ ತಾಳ್ಮೆ ಈಗ ಕೊನೆಯಾಗ್ತಿದೆ. ಬ್ಯಾಂಕುಗಳು ಮತ್ತು ತೈಲದ ಮೇಲೆ ಹೊಸ ನಿರ್ಬಂಧ ವಿಧಿಸಬಹುದು. ಅದಕ್ಕಾಗಿ ಯುರೋಪಿಯನ್ ರಾಷ್ಟ್ರಗಳು ಒಗ್ಗೂಡಬೇಕಾಗುತ್ತದೆ ಎಂದು ಇತ್ತೀಚೆಗೆ ಕರೆ ನೀಡಿದ್ದರು. ಇದನ್ನೂ ಓದಿ: ರಷ್ಯಾದ ಕರಾವಳಿಯಲ್ಲಿ ಮತ್ತೆ ಪ್ರಬಲ ಭೂಕಂಪ – ಸುನಾಮಿ ಆತಂಕ