ತನ್ನ ಹೆಸರಿನಲ್ಲಿ ಕರೆ ಹಾಗೂ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಎಂದು ಕಾಂತಾರ (Kantara) ಚಿತ್ರ ಖ್ಯಾತಿಯ ನಟಿ ರುಕ್ಮಿಣಿ ವಸಂತ್ (Rukmini Vasanth) ಬೆಂಗಳೂರು ಪೊಲೀಸರಿಗೆ (Bengaluru Police) ದೂರು ನೀಡಿದ್ದಾರೆ.
ಕರೆ ಮಾಡುತ್ತಿರುವ ಸಂಖ್ಯೆಯನ್ನೂ ಬಹಿರಂಗವಾಗಿ ಪೋಸ್ಟ್ ಮಾಡಿರುವ ರುಕ್ಮಿಣಿ, ನನ್ನ ಹೆಸರಿನಲ್ಲಿ ನಕಲಿ ಕರೆ ಮತ್ತು ಮಸೇಜ್ ಮಾಡುತ್ತಿದ್ದಾರೆ. ಅದಕ್ಕೆ ಉತ್ತರಿಸಬೇಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾಂತಾರ ಚಾಪ್ಟರ್-1 ಚಿತ್ರ 5 ವಾರಗಳಲ್ಲಿ ಗಳಿಸಿದ್ದೆಷ್ಟು ಮೊತ್ತ?
🚨 Important Alert & Awareness Message 🚨
It has come to my attention that an individual using the number 9445893273 is impersonating me and reaching out to various people under false pretenses.
I want to clarify that this number does not belong to me, and any messages or calls…
— rukmini (@rukminitweets) November 7, 2025
ನನ್ನ ಹೆಸರಿನಲ್ಲಿ 9445893273 ಸಂಖ್ಯೆಯಿಂದ ಇತರರಿಗೆ ಕರೆ ಮತ್ತು ಮೆಸೇಜ್ ಮಾಡಲಾಗುತ್ತಿದೆ. ಈ ಮೊಬೈಲ್ ಸಂಖ್ಯೆಯಿಂದ ಬರುವ ಕರೆ ಅಥವಾ ಸಂದೇಶಕ್ಕೆ ಪ್ರತಿಕ್ರಿಯೆ ನೀಡಬೇಡಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಉದಯಪುರದ ಅರಮನೆಯಲ್ಲಿ ಫೆ.26ಕ್ಕೆ ರಶ್ಮಿಕಾ-ವಿಜಯ್ ಕಲ್ಯಾಣ?

