ಚಂಡೀಗಢ: ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದ್ದು, ಭಗವಂತ್ ಮಾನ್ ಅವರು ತಮ್ಮ ಶಾಸಕರಿಗೆ ಅಹಂಕಾರಿಗಾಗಬೇಡಿ, ಮತದಾರರನ್ನು ಗೌರವಿಸಿ ಎಂದು ಸಂದೇಶವನ್ನು ಸಾರಿದರು.
ಮೊಹಾಲಿಯಲ್ಲಿ ನಡೆದ ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಅಹಂಕಾರಿಯಾಗಬೇಡಿ ಎಂದು ನಾನು ನಿಮ್ಮೆಲ್ಲರಲ್ಲಿ ಮನವಿ ಮಾಡುತ್ತೇನೆ. ನಿಮಗೆ ಮತ ಹಾಕಿದವರಿಗಾಗಿ ಕೆಲಸ ಮಾಡಿ. ನೀವು ಪಂಜಾಬಿನ ಶಾಸಕರು. ಅವರು ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಭೂದಾಖಲೆಗಳನ್ನು ‘ರೈತನ ಮನೆ ಬಾಗಿಲಿಗೆ’ ತಲುಪಿಸುವುದು ಒಂದು ಅತ್ಯುತ್ತಮ ಸೇವೆ: ಆರ್.ಅಶೋಕ್
Advertisement
Advertisement
ಮತ ಕೇಳಲು ಹೋದ ಎಲ್ಲ ಸ್ಥಳಗಳಿಗೆ ನಾವು ಕೆಲಸ ಮಾಡಬೇಕು. ಎಲ್ಲ ಶಾಸಕರು ಚಂಡೀಗಢದಲ್ಲಿ ಉಳಿಯದೆ ಅವರು ಆಯ್ಕೆಯಾದ ಪ್ರದೇಶಗಳಲ್ಲಿ ಕೆಲಸ ಮಾಡಬೇಕು. ಎಂಎಲ್‍ಎಗಳು ತಾವು ಆಯ್ಕೆಯಾದ ಕ್ಷೇತ್ರಗಳಲ್ಲಿ ಸರಿಯಾಗಿ ಕೆಲಸ ಮಾಡಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.
Advertisement
I’ve invited party convener Arvind Kejriwal for the swearing-in ceremony. Now swearing-in will not be held in ‘Mahals’ but in villages of freedom fighters.We’ll take oath in the village of Shaheed Bhagat Singh on Mar 16 as a tribute to him: AAP’s Punjab CM candidate Bhagwant Mann pic.twitter.com/v4Fmi22uO3
— ANI (@ANI) March 11, 2022
Advertisement
ಪಂಜಾಬ್ ಚುನಾವಣೆಯಲ್ಲಿ ಎಎಪಿಯ ಭರ್ಜರಿ ಗೆಲುವನ್ನು ಸಾಧಿಸಿದ ಬಳಿಕ, ಭಗವಂತ್ ಮಾನ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಶುಕ್ರವಾರ ರಾಷ್ಟ್ರ ರಾಜಧಾನಿಗೆ ತೆರಳಿದ್ದರು. ಮಾರ್ಚ್ 16 ರಂದು ಹೊಸ ಪಂಜಾಬ್ ಕ್ಯಾಬಿನೆಟ್‍ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಭಗವಂತ್ ಮಾನ್ ಆಹ್ವಾನಿಸಿದ್ದಾರೆ.
ಪಂಜಾಬ್‍ನಲ್ಲಿ ತಮ್ಮ ಪಕ್ಷ ಗೆದ್ದಿರುವ ಬಗ್ಗೆ ಭಗವಂತ್ ಮಾನ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ರಚಿಸಲು ಅಗತ್ಯವಿರುವ 117 ಸ್ಥಾನಗಳಲ್ಲಿ 92 ಸ್ಥಾನಗಳನ್ನು ಗೆದ್ದಿದ್ದಾರೆ. ಇದನ್ನೂ ಓದಿ: ತಾವು ಆಯ್ಕೆಯಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿ, ರಾಜಧಾನಿಯಲ್ಲಿ ಅಲ್ಲ: ಭಗವಂತ್ ಮಾನ್