ಚಿತ್ರದುರ್ಗ: ಭಾವಿ ಮುಖ್ಯಮಂತ್ರಿ ಅಂತ ಕರೆಯಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ತರಳಬಾಳು ಶಾಖಾ ಮಠದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ನಾಟಕೋತ್ಸವದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಹೇಳಲು ಮುಂದಾದಾಗ ಸ್ವತಃ ಯಡಿಯೂರಪ್ಪ ತಡೆದರು.
Advertisement
Advertisement
ಬಳಿಕ ಮಾತನಾಡಿದ ಬಿಎಸ್‍ವೈ, ಪದೇ ಪದೇ ಮುಂದಿನ ಮುಖ್ಯಮಂತ್ರಿ ಅಂತಾ ಹೇಳಬೇಡಿ. ಕಾಲ ಬಂದಾಗ ಅದೆಲ್ಲವೂ ತಾನಾಗೇ ಆಗುತ್ತೆ. 104 ಜನ ಶಾಸಕರು ವಿರೋಧ ಪಕ್ಷದಲ್ಲಿದ್ದೂ ಒಳ್ಳೆಯ ಕೆಲಸ ಮಾಡಬಹುದು ಅನ್ನೋದನ್ನು ತೋರಿಸಿ ಎಂದರು.
Advertisement
ಇದೇ ವೇಳೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಸಾಣೇಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಇತ್ತೀಚೆಗೆ ನಡೆದ ಉಪ ಚುನಾವಣೆ ಕುರಿತು ಅಸಮಧಾನ ವ್ಯಕ್ತಪಡಿಸಿದ್ದೂ, ಮೂರು ತಿಂಗಳಿಗಾಗಿ ಚುನಾವಣೆಯ ಅಗತ್ಯವಿತ್ತೆ. ಸಾರ್ವಜನಿಕರ ಹಣವನ್ನು ಈ ರೀತಿ ಪೋಲು ಮಾಡುವ ಬದಲು, ಅಭಿವೃದ್ಧಿ ಕಾರ್ಯಕ್ಕೆ ಬಳಸಿದ್ದರೆ ಆಗುತ್ತಿರಲಿಲ್ಲವೇ. ಇಂತಹ ವಿಚಾರಗಳ ಬಗ್ಗೆ ಜನಪ್ರತಿನಿಧಿಗಳು ಗಮನಹರಿಸಬೇಕು ಅಂತ ಉಪಚುನಾವಣೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
Advertisement
ಬಿಎಸ್ ವೈ ಎಲ್ಲ ರಾಜಕೀಯ ಜಂಜಾಟಗಳನ್ನು ಮರೆತು ಸುಮಾರು 4 ತಾಸು ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಈ ವೇಳೆ ಮಠದಲ್ಲಿ ಅಧ್ಯಯನ ಮಾಡುವ ಮಕ್ಕಳು ಪ್ರದರ್ಶಿಸಿದ ಸುಮಾರು ಒಂದೂವರೆ ಗಂಟೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಂತವಾಗಿ ಕುಳಿತು ವೀಕ್ಷಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews