ಕೆಲ ತಿಂಗಳು ಜೈಲಲ್ಲಿದ್ರೂ I Don’t Care- ವಿಚಾರಣೆಗೆ ಸಿಬಿಐ ಕಚೇರಿ ತಲುಪಿದ ಸಿಸೋಡಿಯಾ

Public TV
1 Min Read
Manish Sisodia

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದ (Delhi excise policy case) ತನಿಖೆಯ ಭಾಗವಾಗಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರು ಭಾನುವಾರ ಬೆಳಗ್ಗೆ ತಮ್ಮ ನಿವಾಸದಿಂದ ಸಿಬಿಐ ಕಚೇರಿಗೆ ವಿಚಾರಣೆಗೆ ತೆರಳಿದ್ದಾರೆ.

ಕೇಂದ್ರೀಯ ತನಿಖಾ ಸಂಸ್ಥೆ (CBI) ಅವರ ವಿಚಾರಣೆ ನಡೆಸುವುದಕ್ಕೂ ಮುಂಚಿತವಾಗಿ ಸಿಸೋಡಿಯಾ ಅವರ ನಿವಾಸದಿಂದ ಕಚೇರಿಯುದ್ದಕ್ಕೂ ಆಮ್ ಆದ್ಮಿ ಪಕ್ಷದ (AAP) ಬೆಂಬಲಿಗರು ಫಲಕಗಳನ್ನು ಹಿಡಿದುಕೊಂಡು ಅವರೊಂದಿಗೆ ಮೆರವಣಿಗೆ ತೆರಳಿದ್ದಾರೆ. ಸಿಬಿಐ ಕಚೇರಿ ಆವರಣದ ಸುತ್ತಲೂ ಬೆಂಬಲಿಗರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳಾಗದಂತೆ ಸ್ಥಳದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Manish Sisodia 1

ಸಿಬಿಐ ಮನೀಶ್ ಸಿಸೋಡಿಯಾ ಅವರಿಗೆ ಫೆಬ್ರವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಕರೆ ನೀಡಿತ್ತು. ಆದರೆ ಅವರು ರಾಜ್ಯ ಬಜೆಟ್‌ನಲ್ಲಿ ನಿರತರಾಗಿದ್ದರಿಂದ ಅದನ್ನು ಮುಂದೂಡಲಾಗಿತ್ತು. ಭಾನುವಾರ ವಿಚಾರಣೆಗೆ ತೆರಳುವುದಕ್ಕೂ ಮುನ್ನ ಸಿಸೋಡಿಯಾ ತಾವು ಕೆಲ ತಿಂಗಳು ಜೈಲಿಗೆ ಹೋಗಲು ಸಿದ್ಧ ಎಂದು ಹೇಳಿದ್ದಾರೆ. ಇದನ್ನೂ ಓದಿ: PublicTV Explainer: ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!

ಇಂದು ನಾನು ಮತ್ತೊಮ್ಮೆ ಸಿಬಿಐ ವಿಚಾರಣೆಗೆ ತೆರಳುತ್ತಿದ್ದೇನೆ. ನಾನು ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತೇನೆ. ಲಕ್ಷಾಂತರ ಮಕ್ಕಳ ಪ್ರೀತಿ ಹಾಗೂ ಕೋಟ್ಯಂತರ ದೇಶ ವಾಸಿಗಳ ಆಶೀರ್ವಾದ ನನ್ನೊಂದಿಗಿದೆ. ನಾನು ಕೆಲವು ತಿಂಗಳು ಜೈಲಿನಲ್ಲಿ ಇರಬೇಕಾಗಿ ಬಂದರೂ ನನಗೆ ಚಿಂತೆಯಿಲ್ಲ ಎಂದು ಸಿಸೋಡಿಯಾ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

Manish Sisodia 2

ಸಿಬಿಐ ವಿಚಾರಣೆಯ ಬಳಿಕ ಸಿಸೋಡಿಯಾ ಅವರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರಿಗೆ ಲಕ್ಷಗಳ ರೂಪದಲ್ಲಿ ನೆರವಿನ ಹಸ್ತಚಾಚಿದ ನಟ ಅನುಪಮ್ ಖೇರ್

Share This Article
Leave a Comment

Leave a Reply

Your email address will not be published. Required fields are marked *