ಕೋಲ್ಕತ್ತಾ: ನಾನು ಬುಡಕಟ್ಟು ಜನರಿಗಾಗಿ ಕೆಲಸ ಮಾಡಲು ಬಯಸುತ್ತೇನೆ ಮತ್ತು ದೆಹಲಿ ಲಡ್ಡುಗಳನ್ನು ತಿನ್ನಬೇಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಬುಡಕಟ್ಟು ಜನಾಂಗದ ನಾಲ್ಕು ರಾಜಕೀಯ ಪಕ್ಷಗಳನ್ನು ಭೇಟಿ ಮಾಡಿದ್ದೇನೆ. ಎಲ್ಲರೊಂದಿಗೆ ಒಟ್ಟಾಗಿ ಕೆಲಸ ಮಾಡಬೇಕೆಂದು ನಾನು ಬಯಸುತ್ತೇನೆ. ಗುಡ್ಡಗಾಡು ಪ್ರದೇಶದಲ್ಲಿರುವ ಜನರಿಗಾಗಿ ಕೆಲಸ ಮಾಡಬೇಕು. ಆದರೆ ದೆಹಲಿಯ ಲಡ್ಡು ತಿನ್ನಬೇಡಿ ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ‘Lockup’ ಶೋಗೆ ಬರುವಂತೆ ವಿಲ್ ಸ್ಮಿತ್‍ಗೆ ಆಫರ್ ಕೊಟ್ಟ ಕ್ವಿನ್ ಕಂಗನಾ
Advertisement
Advertisement
ಇದೇ ವೇಳೆ ಬೆಲೆ ಏರಿಕೆಯ ಬಗ್ಗೆ ಜನರ ದಾರಿತಪ್ಪಿಸಲು, ಅವರು ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದ್ದಾರೆ. ಚುನಾವಣೆಯ ಸಮಯದಲ್ಲಿ ಅವರು ದೇಶದ ರಕ್ಷಕರು ಎಂದು ಹೇಳಿಕೊಳ್ಳುತ್ತಾರೆ, ಆದರೆ ಅದು ನಿಜವಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ವೀಡಿಯೋ ನೋಡಿ ಸುಸ್ತಾದ ಅಭಿಮಾನಿಗಳು – ಕೊಡಗಿನ ಬೆಡಗಿಯ ಜಿಮ್ ಕಸರತ್ತು
Advertisement
Advertisement
ಉತ್ತರ ಬಂಗಾಳಕ್ಕೆ ಐದು ದಿನಗಳ ಕಾಲ ಮಮತಾ ಬ್ಯಾನರ್ಜಿ ಅವರು ಪ್ರವಾಸ ಕೈಗೊಂಡಿದ್ದು, ಸೋಮವಾರ ಜಿಜೆಎಂ ನಿಯೋಗ, ಹ್ಯಾಮ್ರೋ ಪಕ್ಷದ ಸದಸ್ಯರೊಂದಿಗೆ ಸಭೆ ನಡೆಸಿದರು.