ಬೆಂಗಳೂರು: ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನ ತಣಿಸಲು ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದಾಗಿದ್ದು, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ (CLP Meeting) ಕೊಟ್ಟ ಮಾತಿನಂತೆಯೇ ಪಕ್ಷದ ಶಾಸಕರ ಜಿಲ್ಲಾವಾರು ಸಭೆ ನಡೆಸಿದ್ದಾರೆ.
ಮೊದಲ ದಿನವಾದ ಇಂದು ತುಮಕೂರು, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳ ಶಾಸಕರು, ಉಸ್ತುವಾರಿ ಸಚಿವರ ಜೊತೆ ಪ್ರತ್ಯೇಕ ಚರ್ಚೆ ಮಾಡಿದರು. ಈ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪಾಲ್ಗೊಂಡಿದ್ದರು. ಇದನ್ನೂ ಓದಿ: 8 ಲಕ್ಷ ಲಂಚಕ್ಕೆ ಬೇಡಿಕೆ – ಮಂಡ್ಯ ಕೃಷಿ ಅಧಿಕಾರಿಗಳಿಂದ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ
Advertisement
Advertisement
ಎಲ್ಲಾ ಶಾಸಕರು ಮತ್ತು ಸಚಿವರು ಸಿಎಂ ಬಳಿ ಕ್ಷೇತ್ರದ ಅಭಿವೃದ್ಧಿಗಾಗಿ ಅಗತ್ಯ ಅನುದಾನಕ್ಕೆ ಮನವಿ ಮಾಡಿದರು. ಇದಕ್ಕೆ ಸಿಎಂ ಪ್ರತಿಕ್ರಿಯಿಸಿ, ಹೆಚ್ಚಿನ ಅನುದಾನ ನಿರೀಕ್ಷೆ ಮಾಡಬೇಡಿ. ಆದರೆ ಪ್ರಗತಿಯಲ್ಲಿರುವ ಕಾಮಗಾರಿಗಳಿಗೆ ಹಂತ ಹಂತವಾಗಿ ಅನುದಾನ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಗೆ ಪೂರಕವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
Advertisement
ಅಭಿವೃದ್ಧಿ ಸಭೆಗೆ ಪಕ್ಷಾತೀತವಾಗಿ ಶಾಸಕರನ್ನು ಆಹ್ವಾನಿಸಬೇಕೆಂಬ ಕನಿಷ್ಠ ಜ್ಞಾನವೂ, 14 ಬಾರಿ ಬಜೆಟ್ ಮಂಡಿಸಿರುವ, ಸ್ವಯಂಘೋಷಿತ ಆರ್ಥಿಕ ತಜ್ಞ ಸಿದ್ದರಾಮಯ್ಯನವರಿಗೆ ಇಲ್ಲದಿರುವುದು ದುರದೃಷ್ಟಕರ.
ಅಭಿವೃದ್ಧಿ ಸಭೆಗೆ ಕೇವಲ ಕಾಂಗ್ರೆಸ್ ಶಾಸಕರನ್ನು ಮಾತ್ರ ಆಹ್ವಾನಿಸಿರುವುದು, ಈ ಸಭೆ ಅಭಿವೃದ್ಧಿಗೆ ಸಂಬಂಧಿಸಿರುವುದೋ ಅಥವಾ ಕಲೆಕ್ಷನ್ ಗೆ… pic.twitter.com/zCPah15wXQ
— BJP Karnataka (@BJP4Karnataka) August 7, 2023
Advertisement
ಈ ಸಭೆಗೆ ಕೇವಲ ಕಾಂಗ್ರೆಸ್ ಶಾಸಕರ ಜೊತೆ ಸಿಎಂ ಸಭೆ ನಡೆಸಿದ್ದಕ್ಕೆ ಬಿಜೆಪಿ (BJP) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಭಿವೃದ್ಧಿ ಸಭೆಗೆ ಪಕ್ಷಾತೀತವಾಗಿ ಶಾಸಕರನ್ನು ಆಹ್ವಾನಿಸಬೇಕು ಎಂಬ ಕನಿಷ್ಠ ಜ್ಞಾನವೂ, 14 ಬಾರಿ ಬಜೆಟ್ ಮಂಡಿಸಿರುವ ಸ್ವಯಂಘೋಷಿತ ಆರ್ಥಿಕ ತಜ್ಞ ಸಿದ್ದರಾಮಯ್ಯಗೆ ಇಲ್ಲದಿರುವುದು ದುರಾದೃಷ್ಟಕರ. ಈ ಸಭೆ ಅಭಿವೃದ್ಧಿಗೆ ಸಂಬಂಧಿಸಿರುವುದೋ ಅಥವಾ ಕಲೆಕ್ಷನ್‍ಗೆ ಸಂಬಂಧಿಸಿರುವುದೋ ಎನ್ನುವುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಿಬೇಕು ಎಂದು ಬಿಜೆಪಿ ಆಗ್ರಹಿಸಿದೆ.
Web Stories