ರಾಯಚೂರು: ಮಾಜಿ ಶಾಸಕ, ನಟ ರೆಬೆಲ್ ಸ್ಟಾರ್ ಅಂಬರೀಶ್ ಮನೆಗೆ ಕುಮಾರಸ್ವಾಮಿ ಭೇಟಿ ನೀಡಿದ್ದ ವಿಚಾರ ನನಗೆ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಬರೀಶ್ ಮನೆಗೆ ಕುಮಾರಸ್ವಾಮಿ ಭೇಟಿ ನೀಡಿದ್ದ ವಿಚಾರ ನನಗೆ ಗೊತ್ತಿಲ್ಲ. ಅವರು ಹಳೆಯ ಸ್ನೇಹಿತರು, ಉತ್ತಮ ಒಡನಾಟ ಹೊಂದಿದ್ದಾರೆ. ಅವರು ಪಕ್ಷ ಸೇರುವ ಬಗ್ಗೆ ಚರ್ಚೆ ಆಗಿಲ್ಲ. ಕಾಂಗ್ರೆಸ್, ಬಿಜೆಪಿ ಯಾವ ಪಕ್ಷದಲ್ಲಿ ಇದ್ದರು ನಮ್ಮ ಜೊತೆ ಉತ್ತಮ ಸಂಬಂಧ ಹೊಂದಿದ್ದರು ಎಂದು ಹೆಚ್.ಡಿ. ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ರೆಬೆಲ್ ಸ್ಟಾರ್ ಅಂಬರೀಶ್ ಭೇಟಿ ಬಗ್ಗೆ ಹೆಚ್‍ಡಿಕೆ ಪ್ರತಿಕ್ರಿಯೆ
Advertisement
ಇದೇ ವೇಳೆ ನಾವು ಯಾರ ಪರವೂ ಇಲ್ಲ, ಜನರ ಪರ ಇದ್ದೇವೆ. ಮೋದಿ ಬಂದಾಗ ನಾವು ಬರಬಾರದೇ? ನಮ್ಮ ಕಾರ್ಯಕರ್ತರನ್ನು ಉದ್ದೇಶಿಸಿ ನಾವು, ಅವರ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಪ್ರಚಾರ ಮಾಡುತ್ತಾರೆ. ಯಾರಿಗೆ ಬಹುಮತ ಎಂಬುದನ್ನು ಜನ ನಿರ್ಧರಿಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಅಂಬಿ-ಹೆಚ್‍ಡಿಕೆ ಭೇಟಿ: ಪಾಪ ಮೀಟ್ ಆಗ್ಲಿ ಬಿಡಿ ಬೇಡ ಅಂದೋರು ಯಾರು?-ಸಿಎಂ
Advertisement
ಈ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಅಂಬರೀಶ್ ಅವರಿಗೆ ದೇವೇಗೌಡರು ಮತ್ತು ನಮ್ಮ ಬಗ್ಗೆ ಅಭಿಮಾನ ಇದೆ. ನಿನ್ನೆ ಭೇಟಿ ಮಾಡಿ ಚರ್ಚಿಸಿದ್ದೇನೆ. ನನ್ನನ್ನು ತಮ್ಮನಿಗಿಂತಲೂ ಹೆಚ್ಚಾಗಿ ಪ್ರೀತಿಸುತ್ತಾರೆ. ಜನಹಿತಕ್ಕಾಗಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎನ್ನುವುದು ಅವರ ಅಭಿಲಾಷೆ. ರಾಜ್ಯದಲ್ಲಿಯ ರಾಜಕೀಯ ಆಗುಹೋಗು ಗಮನಿಸಿ ಸೂಕ್ತ ತೀರ್ಮಾನಕೈಗೊಳ್ಳುತ್ತಾರೆ ಎನ್ನುವ ಭರವಸೆ ಇದೆ. ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎನ್ನುವ ಭಾವನೆ ಅವರ ಮನಸ್ಸಿನಲ್ಲಿದೆ ಅಂತ ಹೇಳಿದ್ದರು.
Advertisement