Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ನ್ಯಾಯ ಸಿಗೋವರೆಗೂ ಇಲ್ಲೇ ಊಟ, ಇಲ್ಲೇ ನಿದ್ರೆ – ಮತ್ತೆ ಅಖಾಡಕ್ಕಿಳಿದ ಕುಸ್ತಿಪಟುಗಳು

Public TV
Last updated: April 23, 2023 8:31 pm
Public TV
Share
2 Min Read
wrestlers Sakshee Malikkh and Vinesh Phogat
SHARE

– ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ
– ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ಭೂಷಣ್ ಬಂಧನಕ್ಕೆ ಒತ್ತಾಯ

ನವದೆಹಲಿ: ಮಹಿಳಾ ಕುಸ್ತಿಪಟುಗಳ (Wrestlers) ಮೇಲೆ ಲೈಂಗಿಕ ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಮತ್ತು ಇತರ ತರಬೇತುದಾರರ ವಿರುದ್ಧ ಈ ವರ್ಷದ ಆರಂಭದಲ್ಲಿ ಪ್ರತಿಭಟನೆ ನಡೆಸಿದ್ದ ಭಾರತದ ಕುಸ್ತಿಪಟುಗಳು ಈಗ ಮತ್ತೆ ಅಖಾಡಕ್ಕಿಳಿದಿದ್ದಾರೆ.

ಫೆಡರೇಶನ್ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ 7 ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಆಗಿಲ್ಲ ಎಂದು ಕುಸ್ತಿಪಟುಗಳು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ:ಆಸ್ಪತ್ರೆಯಲ್ಲೇ ಕುಳಿತು ಪ್ರಚಾರದ ರೂಟ್ ಮ್ಯಾಪ್ ಸಿದ್ಧಪಡಿಸಿದ ಹೆಚ್‌ಡಿಕೆ

wrestlers Sakshee Malikkh and Vinesh Phogat 1

ಈ ವಿಷಯದ ಬಗ್ಗೆ ಸರ್ಕಾರದ ಸಮಿತಿಯ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸದಿರುವುದು ಹತಾಶೆಯಾಗಿದೆ. ಮಹಿಳಾ ಕುಸ್ತಿಪಟುಗಳ ಹೇಳಿಕೆಯನ್ನು ದಾಖಲಿಸಿರುವ ವರದಿಯು ಸಾರ್ವಜನಿಕವಾಗಬೇಕೆಂದು ನಾವು ಬಯಸುತ್ತೇವೆ. ಇದು ಸೂಕ್ಷ್ಮ ವಿಷಯವಾಗಿದೆ. ದೂರುದಾರರಲ್ಲಿ ಒಬ್ಬರು ಅಪ್ರಾಪ್ತ ಬಾಲಕಿ. ದೂರುದಾರರ ಹೆಸರುಗಳನ್ನು ಸೋರಿಕೆ ಮಾಡಬಾರದು ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹೇಳಿದ್ದಾರೆ.

ಬ್ರಿಜ್ಭೂಷಣ್ ಅವರನ್ನು ಬಂಧಿಸುವವರೆಗೂ ನಾವು ಇಲ್ಲಿಂದ ಹೊರಡುವುದಿಲ್ಲ ಎಂದು ಕುಸ್ತಿಪಟು ಬಜರಂಗ್ ಪುನಿಯಾ ಹೇಳಿದ್ದಾರೆ. ಪ್ರಕರಣದ ವಿಚಾರವಾಗಿ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ ಎಂದು ವಿನೇಶ್ ಫೋಗಟ್ ಬೇಸರ ವ್ಯಕ್ತಪಡಿಸಿದ್ದಾರೆ.

Brij Bhushan Sharan Singh

ನ್ಯಾಯ ಸಿಗುವವರೆಗೂ ನಮಗೆ ಇಲ್ಲೇ ಊಟ, ಇಲ್ಲೇ ನಿದ್ರೆ. ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಪ್ರತಿಕ್ರಿಯಿಸುತ್ತಿಲ್ಲ. ಕ್ರೀಡಾ ಸಚಿವಾಲಯವೂ ಏನನ್ನೂ ಹೇಳುತ್ತಿಲ್ಲ. ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುತ್ತಿಲ್ಲ. ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ. ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ ಎಂದು ವಿನೇಶ್‌ ಫೋಗಟ್‌ ನೊಂದು ನುಡಿದಿದ್ದಾರೆ.

ಕ್ರೀಡಾ ಸಚಿವಾಲಯವು (Sports Ministry) ಜನವರಿ 23 ರಂದು ಬಾಕ್ಸರ್ ಮೇರಿ ಕೋಮ್ ನೇತೃತ್ವದ ಐವರು ಸದಸ್ಯರ ಉಸ್ತುವಾರಿ ಸಮಿತಿಯನ್ನು ರಚಿಸಿತ್ತು. ಒಂದು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಹೇಳಿತ್ತು. ವರದಿ ಸಲ್ಲಿಕೆಗೆ ಎರಡು ವಾರಗಳ ಗಡುವು ನೀಡಿತ್ತು. ಪ್ರತಿಭಟಿಸಿದ್ದ ಕುಸ್ತಿಪಟುಗಳ ಒತ್ತಾಯದ ಮೇರೆಗೆ ಆರನೇ ಸದಸ್ಯೆಯಾಗಿ ಬಬಿತಾ ಫೋಗಟ್ ಅವರನ್ನು ತನಿಖಾ ಸಮಿತಿಗೆ ಸೇರಿಸಿತ್ತು.

ಸಮಿತಿಯು ತನ್ನ ವರದಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಸಲ್ಲಿಸಿದೆ. ಆದರೆ ಸಚಿವಾಲಯವು ಆ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ. ಆದಾಗ್ಯೂ, ಹಲವಾರು ವಿಚಾರಣೆಗಳ ನಂತರ ಕುಸ್ತಿಪಟುಗಳು WFI ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ (Woman Wrestler) ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. WFI ಅಧಿಕಾರಿಗಳು ಅಥ್ಲೀಟ್‌ಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಭಾರತದ ಇತರ ಅಗ್ರ ಕುಸ್ತಿಪಟುಗಳೊಂದಿಗೆ ನವದೆಹಲಿಯ ಜಂತರ್ ಮಂತರ್‌ನಲ್ಲಿ ವಿನೇಶ್‌ ಫೋಗಟ್‌ ಈ ವರ್ಷದ ಆರಂಭದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ್ದರು. ಡಬ್ಲ್ಯುಎಫ್‌ಐ ಅಧ್ಯಕ್ಷರನ್ನು ತೆಗೆದುಹಾಕುವವರೆಗೆ ನಾವು ಯಾವುದೇ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಹ ಘೋಷಿಸಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಕೇಂದ್ರ ಕ್ರೀಡಾ ಸಚಿವರು ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿ, ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದಾದ ಬಳಿಕ ಕುಸ್ತಿಪಟುಗಳು ಪ್ರತಿಭಟನೆ ಕೈಬಿಟ್ಟಿದ್ದರು. ಇದನ್ನೂ ಓದಿ: ಬಸವ ತತ್ವದಿಂದ ಭಾರತದ ಪ್ರಜಾಪ್ರಭುತ್ವ ಸದೃಢ- ರಾಹುಲ್ ಗಾಂಧಿ

TAGGED:Brij Bhushan Sharan SinghSports MinistryWFIWrestlersಕುಸ್ತಿಪಟುಗಳುಡಬ್ಲ್ಯುಎಫ್‌ಐನವದೆಹಲಿಬ್ರಿಜ್ಭೂಷಣ್ ಶರಣ್ ಸಿಂಗ್ವಿನೇಶ್ ಫೋಗಟ್
Share This Article
Facebook Whatsapp Whatsapp Telegram

Cinema News

Bigg Boss Kannada season 12 date and teaser release soon
ಕಿಚ್ಚನ ಬರ್ತ್‍ಡೇಗೆ ಅಭಿಮಾನಿಗಳಿಗೆ `ಬಿಗ್’ ನ್ಯೂಸ್!
Cinema Latest Sandalwood Top Stories
Virat Kohli 1
ಕೊಹ್ಲಿಯಿಂದ ಫೋಟೋಗೆ ಲೈಕ್ ಗಿಟ್ಟಿಸಿಕೊಂಡ ಹಾಲ್ಗೆನ್ನೆ ಬ್ಯೂಟಿಯ ಫಸ್ಟ್ ರಿಯಾಕ್ಷನ್
Cinema Cricket Latest Sports Top Stories
sudeep 3
ರಾತ್ರಿನೇ ಸಿಗೋಣವಾ ಎಂದ ಕಿಚ್ಚ; ಅಭಿಮಾನಿಗಳಿಗೆ ಸುದೀಪ್‌ ಪತ್ರ
Cinema Latest Sandalwood Top Stories
Madarasi Cinema
ಮದರಾಸಿ ಟ್ರೈಲರ್‌ ರಿಲೀಸ್ – ಮಾಸ್ ಲುಕ್‌ನಲ್ಲಿ ಶಿವಕಾರ್ತಿಕೇಯನ್
Cinema Latest South cinema Top Stories
Mangalapuram 1
ಮಂಗಳಾಪುರಂ ಚಿತ್ರಕ್ಕೆ ಬಿಗ್ ಬಾಸ್ ಖ್ಯಾತಿಯ ಗೌತಮಿ ನಾಯಕಿ
Cinema Latest Sandalwood

You Might Also Like

Water Aerodrome Project
Districts

ಶರಾವತಿ ಹಿನ್ನೀರಲ್ಲಿ ವಾಟರ್ ಏರೊಡ್ರೋಮ್‌ ಯೋಜನೆ – ಸಿಗಂದೂರು ಬಳಿ ಇಳಿಯಲಿದೆ ವಿಮಾನ

Public TV
By Public TV
33 minutes ago
Mysuru 2
Crime

ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ – ಪ್ರಿಯಕರ ಅರೆಸ್ಟ್‌

Public TV
By Public TV
49 minutes ago
Narendra Modi
Court

ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್

Public TV
By Public TV
51 minutes ago
Jodhpur Lecturer Sets Herself Daughter On Fire Note Points To Dowry Harassment
Crime

ವರದಕ್ಷಿಣೆ ಕಿರುಕುಳ – 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Public TV
By Public TV
59 minutes ago
Ganesha
Latest

ಶ್ರೀಮಂತ ಗಣಪನಿಗೆ ಈ ಬಾರಿ 474 ಕೋಟಿ ರೂ. ವಿಮೆ – ಏನಿದ್ರ ವಿಶೇಷತೆ ಅಂತೀರಾ?

Public TV
By Public TV
1 hour ago
01
Latest

ಶ್ರೀಮಂತ ಗಣಪನಿಗೆ ಈ ಬಾರಿ 400 ಕೋಟಿ ರೂ. ವಿಮೆ – ಏನಿದ್ರ ವಿಶೇಷತೆ ಅಂತೀರಾ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?