ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಮೂಲಕ ಭಾರತೀಯ ಸಿನಿಮಾ ರಂಗದಲ್ಲೇ ಸಂಚಲನ ಸೃಷ್ಟಿ ಮಾಡಿದ್ದ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಮೊನ್ನೆಯಷ್ಟೇ ತಮ್ಮ ಹೊಸ ಸಿನಿಮಾ ‘ದಿ ವ್ಯಾಕ್ಸಿನ್ ವಾರ್’ (The Vaccine War) ಅನ್ನು ಕನ್ನಡದ ಸಿಲೆಬ್ರಿಟಿಗಳಿಗೆ ಪ್ರದರ್ಶನ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಸಹಜವಾಗಿಯೇ ಅವರಿಗೊಂದು ಪ್ರಶ್ನೆ ತೂರಿ ಬಂತು. ನೀವು ವಿವಾದಕ್ಕಾಗಿ (Controversy) ಸಿನಿಮಾ ಮಾಡುತ್ತೀರಿ ಎಂದು ಪ್ರಶ್ನೆ ಮುಂದಿಡಲಾಗಿತ್ತು.
ಈ ಪ್ರಶ್ನೆಗೆ ಉತ್ತರಿಸಿದ ವಿವೇಕ್ ಅಗ್ನಿಹೋತ್ರಿ. ‘ನಾನು ವಿವಾದಕ್ಕಾಗಿ ಸಿನಿಮಾ ಮಾಡುವುದಿಲ್ಲ. ಹಾಗೆ ಮಾಡುವುದೇ ಆಗಿದ್ದರೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಪಾರ್ಟ್ 2 ಮಾಡುತ್ತಿದ್ದೆ. ಒಳ್ಳೆಯ ಉದ್ದೇಶ ಇಟ್ಟುಕೊಂಡು ಸಿನಿಮಾ ಮಾಡುವೆ. ಅದನ್ನು ವಿವಾದ ಮಾಡಲಾಗುತ್ತಿದೆ. ನನ್ನ ಉದ್ದೇಶ ನಿಜ ಸಂಗತಿಯನ್ನು ಹೇಳುವುದು ಅಷ್ಟೇ ಆಗಿದೆ’ ಎಂದರು.
ಇತ್ತೀಚೆಗಷ್ಟೇ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಬಿಡುಗಡೆಯಾದ ಟ್ರೈಲರ್ (Trailer) ನಲ್ಲಿ ಹಲವಾರು ವಿಷಯಗಳನ್ನು ಹೇಳಿದ್ದಾರೆ ನಿರ್ದೇಶಕರು. ಈ ಚಿತ್ರದಲ್ಲಿ ಕನ್ನಡದ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ (Saptami Gowda) ಕೂಡ ನಟಿಸಿದ್ದು, ಈ ಸಿನಿಮಾದಲ್ಲಿ ಅವರು ವಿಜ್ಞಾನಿ ಪಾತ್ರವನ್ನು ನಿರ್ವಹಿಸಿದ್ದಾರೆ.
ಅಗಸ್ಟ್ ತಿಂಗಳಲ್ಲಿ ಟೀಸರ್ ರಿಲೀಸ್ ಆಗಿತ್ತು. ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಕುರಿತ ಪ್ರಯೋಗದ ದೃಶ್ಯದೊಂದಿಗೆ ಆರಂಭವಾಗುವ ಟೀಸರ್ ನಲ್ಲಿ ಭಾರತೀಯ ವಿಜ್ಞಾನಿಗಳು ವ್ಯಾಕ್ಸಿನ್ ಗಾಗಿ ಪಟ್ಟ ಶ್ರಮವನ್ನು ಟೀಸರ್ ನಲ್ಲಿ ಕಟ್ಟಿಕೊಡಲಾಗಿತ್ತು. ಅಲ್ಲದೇ ಕುತೂಹಲ ಮೂಡಿಸುವಂತಹ ಸಾಕಷ್ಟು ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಾಗಿತ್ತು.
ಕೋವಿಡ್ ವ್ಯಾಕ್ಸಿನ್ ಸುತ್ತ ಸಾಗುವ ಕಥೆಯಲ್ಲಿ ಪಲ್ಲವಿ ಜೋಶಿ, ಅನುಪಮ್ ಖೇರ್, ನಾನಾ ಪಾಟೇಕರ್ ಮತ್ತು ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ಕಾಶ್ಮೀರಿ ಫೈಲ್ಸ್ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಬಂಡವಾಳ ಹೂಡಿದ್ದು, ಐ ಆ್ಯಮ್ ಬುದ್ಧ ಸಹಯೋಗದಲ್ಲಿ ಪಲ್ಲವಿ ಜೋಶಿ ಕೂಡ ಸಿನಿಮಾಕ್ಕೆ ಹಣ ಹಾಕಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]