ಬೆಂಗಳೂರು: ಶಿವಾಜಿನಗರದ ಮೆಟ್ರೋ ನಿಲ್ದಾಣಕ್ಕೆ (Shivaji Nagar Metro Station) ಸೇಂಟ್ ಮೇರಿ (Saint Mary) ಹೆಸರಿಡುವಂತೆ ಮನವಿ ಸಲ್ಲಿಕೆಗೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿರೋಧ ವ್ಯಕ್ತಪಡಿಸಿದ್ದಾರೆ. ‘ಪಬ್ಲಿಕ್ ಟಿವಿ’ (PUBLiC TV) ಮಾಡಿದ್ದ ವರದಿಯನ್ನು ಲಿಂಕ್ ಮಾಡಿ ಎಕ್ಸ್ (X)ಖಾತೆಯಲ್ಲಿ ವಿರೋಧಿಸಿದ್ದಾರೆ.
ಪೋಸ್ಟ್‌ನಲ್ಲಿ ಏನಿದೆ?
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ವಿರೋಧ ವ್ಯಕ್ತಪಡಿಸಿದ ಅವರು, ಒಂದು ಸಂಸ್ಕೃತಿಯನ್ನು ಹೇಗೆ ನಾಶ ಮಾಡಬಹುದು ಎಂಬುದಕ್ಕೆ ಇದೆ ಉದಾಹರಣೆಯಾಗಿದೆ. ಹಿಂದೂಗಳ ಆರಾಧ್ಯದೈವ, ಔರಂಗಜೇಬನ ಹುಟ್ಟಡಗಿಸಿದ ಗಂಡುಗಲಿ, ಮಹಾಪರಾಕ್ರಮಿ ಶಿವಾಜಿ ಮಹಾರಾಜರು ತಮ್ಮ ಬಾಲ್ಯವನ್ನು ಕಳೆದಂತ ಶಿವಾಜಿನಗರದ ಮೆಟ್ರೋಗೆ ಸಂತ ಮೇರಿ ಹೆಸರನ್ನು ಇಡಬೇಕಂತೆ.ಇದನ್ನೂ ಓದಿ: ರಾಹುಲ್ ಗಾಂಧಿ ಪಪ್ಪು ಅಲ್ಲ, ದೂರದೃಷ್ಟಿ ಹೊಂದಿರುವ ವ್ಯಕ್ತಿ: ಸ್ಯಾಮ್ ಪಿತ್ರೋಡಾ
Advertisement
Advertisement
ಇತಿಹಾಸವನ್ನು ಅರಿಯದ ಮೂಢರಷ್ಟೇ ಈ ರೀತಿ ಸಲಹೆ ಕೊಡಬಲ್ಲರು. 150 ವರ್ಷಗಳ ಇತಿಹಾಸವಿರುವ ಏಕಾಂಬರೇಶ್ವರ ಸ್ವಾಮಿಯ ದೇವಸ್ಥಾನ, ಮುತ್ಯಾಲಮ್ಮ ದೇವಸ್ಥಾನ, ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನ, ಅಂಗಾಲ ಪರಮೇಶ್ವರಿ ಅಮ್ಮನವರ ದೇವಸ್ಥಾನಗಳು ಶಿವಾಜಿನಗರದಲ್ಲಿದೆ.
Advertisement
ಒಂದು ಸಂಸ್ಕೃತಿಯನ್ನು ಹೇಗೆ ನಾಶ ಮಾಡಬಹುದು ಎಂಬುದಕ್ಕೆ ಇದೆ ಉದಾಹರಣೆ. ಹಿಂದೂಗಳ ಆರಾಧ್ಯದೈವ, ಔರಂಗಜೇಬನ ಹುಟ್ಟಡಗಿಸಿದ ಗಂಡುಗಲಿ, ಮಹಾಪರಾಕ್ರಮಿ ಶಿವಾಜಿ ಮಹಾರಾಜರು ತಮ್ಮ ಬಾಲ್ಯವನ್ನು ಕಳೆದಂತ ಶಿವಾಜಿನಗರದ ಮೆಟ್ರೋ ಗೆ ಸಂತ ಮೇರಿ ಹೆಸರನ್ನು ಇಡಬೇಕಂತೆ.
ಇತಿಹಾಸ ಅರಿಯದ ಮೂಢರಷ್ಟೇ ಈ ರೀತಿ ಸಲಹೆ ಕೊಡಬಲ್ಲರು. 150 ವರ್ಷಗಳ ಇತಿಹಾಸವಿರುವ… pic.twitter.com/SPTJWES0FC
— Basanagouda R Patil (Yatnal) (@BasanagoudaBJP) September 9, 2024
Advertisement
ಓಲೈಕೆ ರಾಜಕಾರಣಕ್ಕೆ, ಹೆಚ್ಚು ವೋಟು ಬೀಳುತ್ತಿರುವ ಸಮುದಾಯವನ್ನು ಸಂತುಷ್ಟಗೊಳಿಸಲು ಈ ರೀತಿ ವ್ಯರ್ಥ ಪ್ರಯತ್ನಗಳು ಬೇಕಾಗಿಲ್ಲ. ನಮ್ಮ ಸಂಸ್ಕೃತಿ, ಪರಂಪರೆ, ಧರ್ಮದ ಹೆಸರನ್ನು ಉಳಿಸಿದವರನ್ನೆಲ್ಲ ಬಿಟ್ಟು, ರಾಜಕೀಯ ಕಾರಣಕ್ಕಾಗಿ ಮೇರಿಯಮ್ಮನ ಹೆಸರು ನಾಮಕರಣ ಮಾಡುವ ಅವಶ್ಯಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಹೊಸ ರಿಯಾಲಿಟಿ ಶೋಗೆ ‘ಬಿಗ್ ಬಾಸ್’ ವಿನ್ನರ್ ಕಾರ್ತಿಕ್ ಹೋಸ್ಟ್
ಏನಿದರ ಹಿನ್ನೆಲೆ?
ನಿನ್ನೆಯಷ್ಟೇ (ಸೆ.08) ರಂದು ಶಿವಾಜಿನಗರದ ಸಂತ ಮೇರಿ ಜಯಂತ್ಯುತ್ಸವ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಿದ್ದರು. ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿಸ್ ಮೆಟ್ರೋ ಸ್ಟೇಷನ್ ಎಂದು ನಾಮಕರಣ ಮಾಡಬೇಕು. ಇದರಿಂದ ಪುಣ್ಯಕ್ಷೇತ್ರ ಮೇರಿ ಚರ್ಚೆಗೆ ಹೆಚ್ಚು ಜನರು ಬರಲು ಅನುಕೂಲ ಆಗುತ್ತದೆ ಎಂದು ಅಲ್ಲಿನ ಫಾದರ್ ಸಿಎಂಗೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ಶಾಸಕ ಯತ್ನಾಳ್ ವಿರೋಧ ವ್ಯಕ್ತಪಡಿಸಿದ್ದಾರೆ.