ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯಪಾಲರನ್ನು ಭೇಟಿ ಮಾಡಿ ಬಿಲ್‌ಗೆ ಸಹಿ ಹಾಕದಂತೆ ಬಿಜೆಪಿ (BJP) ನಿಯೋಗ ಮನವಿ ಸಲ್ಲಿಸಿದೆ.ಇದನ್ನೂ ಓದಿ: ಬೆಂಗಳೂರು-ಮೈಸೂರು ಹೈವೇಯಲ್ಲಿ ಟ್ರಾಮಾ ಸೆಂಟರ್ ಪ್ರಾರಂಭಕ್ಕೆ ಕ್ರಮ: ಸತೀಶ್ ಜಾರಕಿಹೊಳಿ
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಮಸೂದೆಗೆ ಸಹಿ ಹಾಕದಂತೆ ಮನವಿ ಮಾಡಿದರು.
ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಆರ್.ಅಶೋಕ್, ನಿಯಮಾನುಸಾರವಿಲ್ಲದೆ ಅಂಗೀಕರಿಸಿರುವ ಗ್ರೇಟರ್ ಬೆಂಗಳೂರು ಬಿಲ್ ಪರಿಷ್ಕರಿಸುವಂತೆ ಮನವಿ ಮಾಡಿದ್ದೇವೆ. ಬೆಂಗಳೂರನ್ನು ಒಡೆಯಬಾರದು. ಈ ವಿಚಾರವನ್ನ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ರಾಜ್ಯಪಾಲರು ಸಹ ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಕೀಳು ಬುದ್ಧಿಯ ಕಾಂಗ್ರೆಸ್‌ಗೆ ಪಾಠ ಕಲಿಸುತ್ತೇವೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಪ್ರಾಯೋಜಕರು ಮಕ್ಕಳಿಗೆ ಬಾತ್, ಹೋಳಿಗೆ ಕೊಟ್ಟಿದ್ದರು, ಇದಕ್ಕೆ ಕ್ರಮ ಆಗಬೇಕು – ನರೇಂದ್ರಸ್ವಾಮಿ