ಬೆಂಗಳೂರು: ನನ್ನನ್ನು ಟ್ರೋಲ್ ಮಾಡಲು ನೀವು ಯಾವುದೇ ತೊಂದರೆ ತೆಗೆದುಕೊಳ್ಳಬೇಡಿ. ನನ್ನನ್ನು ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದು ಮಾಜಿ ಸಂಸದೆ ನಟಿ ರಮ್ಯಾ ಕಾಂಗ್ರೆಸ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
Good copy paste job. ???????? https://t.co/wadGYe5RtT
— Divya Spandana/Ramya (@divyaspandana) May 11, 2022
Advertisement
ಪಿಎಸ್‍ಐ ನೇಮಕಾತಿ ಅಕ್ರಮ ಹಗರಣದಲ್ಲಿ ರಕ್ಷಣೆ ಪಡೆಯಲು ಎಂ.ಬಿ. ಪಾಟೀಲ್ ಅವರು ಸಚಿವ ಅಶ್ವತ್ ನಾರಾಯಣ್ ಅವರನ್ನು ಭೇಟಿಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದರು. ಈ ವಿಚಾರವಾಗಿ ರಮ್ಯಾ ಅವರು, ರಾಜಕೀಯ ಪಕ್ಷದವರು ಪಕ್ಷಾತೀತವಾಗಿ ಭೇಟಿಯಾಗುತ್ತಾರೆ. ಎಲ್ಲಾ ಕಾರ್ಯಕ್ರಮಗಳಿಗೂ ಹೋಗುತ್ತಾರೆ, ಸಂಬಂಧಿಗಳು ಸಹ ಆಗಿದ್ದಾರೆ. ಆದರೆ ಡಿಕೆಶಿವಕುಮಾರ್ ಅವರ ಹೇಳಿಕೆ ಅಚ್ಚರಿ ತಂದಿದೆ. ಎಂ.ಬಿ. ಪಾಟೀಲ್ ಕಾಂಗ್ರೆಸ್ ಪಕ್ಷದ ಕಟ್ಟಾಳು. ಕಾಂಗ್ರೆಸ್ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬಾರದೇ ಎಂದು ಪ್ರಶ್ನಿಸಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಒಂದೇ ಘಟಕವಾಗಿ ಚುನಾವಣೆ ಎದುರಿಸಬೇಕಲ್ಲವೇ? ಡಿಕೆಶಿಗೆ ನಟಿ ರಮ್ಯಾ ಪ್ರಶ್ನೆ
Advertisement
So the ‘office’ has circulated these messages among the congress leaders & volunteers asking them troll me. Save yourself the trouble- I’ll do it myself. @srivatsayb @DKShivakumar
— Divya Spandana/Ramya (@divyaspandana) May 11, 2022
Advertisement
ಇದೀಗ ಇದಕ್ಕೆ ಪ್ರತಿಯಾಗಿ ರಮ್ಯಾ ವಿರುದ್ಧ ಟ್ರೋಲ್ ಮಾಡುವಂತೆ ಕೈ ಕಾರ್ಯಕರ್ತರಿಗೆ ಕಚೇರಿಯಿಂದಲೇ ಸಂದೇಶ ರವಾನಿಸಲಾಗಿದೆ ಎಂದು ರಮ್ಯಾ ಆರೋಪಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಕಚೇರಿಯಿಂದ ನನ್ನನ್ನು ಟ್ರೋಲ್ ಮಾಡುವಂತೆ ಸಂದೇಶವನ್ನು ರವಾನಿಸಲಾಗಿದ್ಯಂತೆ, ನನ್ನನ್ನು ಟ್ರೋಲ್ ಮಾಡುವ ತೊಂದರೆಯನ್ನು ನೀವು ತೆಗೆದುಕೊಳ್ಳಬೇಡಿ. ನನ್ನನ್ನು ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದು ಟ್ರೋಲ್ ಮಾಡಿರುವ ಸರಣಿ ಸ್ಕ್ರೀನ್ ಶಾಟ್‍ಗಳನ್ನು ಹಂಚಿಕೊಳ್ಳುವುದರ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬಂಧನಕ್ಕೆ ತೆರಳಿದ್ದ ವೇಳೆ ಹೈಡ್ರಾಮಾ- ಹೊಸ ಮೊಬೈಲ್ ಬಿಸಾಕಿದ ದಿವ್ಯಾ ಹಾಗರಗಿ