ಬೆಂಗಳೂರು: ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ (BJP) ಪರ ಅಲೆ ಇದೆ. ಆದರೂ ರಾಜ್ಯದಲ್ಲಿ ಕಾಂಗ್ರೆಸ್ (Congress) ಪಕ್ಷವು ಆಡಳಿತ ನಡೆಸುವ ಸಂದರ್ಭದಲ್ಲಿ ನಮ್ಮ ವಿರೋಧಿಗಳನ್ನು ಹಗುರವಾಗಿ ಪರಿಗಣಿಸದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಕಿವಿಮಾತು ಹೇಳಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯದ ನೂತನ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯಲ್ಲೂ ಕೂಡ ವಿವಿಧ ರೀತಿಯ ಸವಾಲುಗಳಿರುತ್ತವೆ. ಆ ಸವಾಲುಗಳನ್ನು ಯಶಸ್ವಿಯಾಗಿ ಮೆಟ್ಟಿ ನಿಂತು ಸಾಧನೆ ಮಾಡಲು ನಮ್ಮ ಎದುರಾಳಿಗಳನ್ನು ನಾವು ಹಗುರವಾಗಿ ಪರಿಗಣಿಸಬಾರದು. ನರೇಂದ್ರ ಮೋದಿಜೀ (Narendra Modi) ಅವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: Ayodhya Ram Mandir- ರಾಮಲಲ್ಲಾ ಪ್ರತಿಷ್ಠಾಪನೆಗೆ ಕೋಲಾರ ಅರ್ಚಕನಿಗೆ ಆಹ್ವಾನ
Advertisement
Advertisement
ಸ್ವಾತಂತ್ರ‍್ಯ ಬಂದ ಬಳಿಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೂಡ ಮನೆ ಬಾಗಿಲಿಗೆ ಸೌಲಭ್ಯಗಳನ್ನು ಬಿಜೆಪಿಯ ಕೇಂದ್ರ ಸರ್ಕಾರ ತಲುಪಿಸಿದೆ. ಇತರ ಯಾವ ಸರ್ಕಾರಗಳೂ ಇಂಥ ಕೆಲಸ ಮಾಡಿರಲಿಲ್ಲ. ರಾಜ್ಯದ ಕಾರ್ಯಕರ್ತರ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸಬೇಕಿದೆ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಬಲ ತುಂಬುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ, ಬಿಬಿಎಂಪಿ ಚುನಾವಣೆ, ವಿಧಾನಪರಿಷತ್ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಮುಂದಕ್ಕೆ ಅಡಿ ಇಡಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಜಿಲ್ಲಾಧ್ಯಕ್ಷರ ನೇಮಕಕ್ಕೆ 60 ಜನರ ತಂಡ ರಚನೆ: ಪಿ.ರಾಜೀವ್
Advertisement
ಅತ್ಯಂತ ಪ್ರಮುಖ ಕಾಲಘಟ್ಟದಲ್ಲಿ ಈ ಹೊಣೆಗಾರಿಕೆ:
ಅತ್ಯಂತ ಪ್ರಮುಖ ಕಾಲಘಟ್ಟದಲ್ಲಿ ನಮಗೆಲ್ಲರಿಗೂ ರಾಜ್ಯ ಪದಾಧಿಕಾರಿಗಳಾಗಿ ಕೆಲಸ ಮಾಡುವ ಜವಾಬ್ದಾರಿ ಲಭಿಸಿದೆ. ನಾವೆಲ್ಲರೂ ಹೊಣೆಯರಿತು ಕರ್ತವ್ಯ ನಿರ್ವಹಿಸಬೇಕು. ನಮಗೆ ಹೊಣೆಗಾರಿಕೆ ಯಾವ ಕಾಲಘಟ್ಟದಲ್ಲಿ ಲಭಿಸಿದೆ ಎಂಬುದು ಅತ್ಯಂತ ಪ್ರಮುಖವಾದುದು. ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ಆಗಬೇಕೆಂಬ ಕಳೆದ ಹಲವಾರು ದಶಕಗಳ ಎಲ್ಲಾ ಹಿಂದೂ ಕಾರ್ಯಕರ್ತರ ಕನಸು, ಹೋರಾಟ ಇದೀಗ ನನಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಜೀ ಅವರ ಅಮೃತಹಸ್ತದಿಂದ ಅದು ಲೋಕಾರ್ಪಣೆ ಆಗಲಿದೆ. ಅದೇ ಕಾಲಘಟ್ಟದಲ್ಲಿ ನಮಗೂ ಜವಾಬ್ದಾರಿ ಲಭಿಸಿದೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಕರವೇ ಹೋರಾಟಕ್ಕೆ ಬೆಂಬಲ ಇದೆ, ಕಾನೂನು ಕೈಗೆತ್ತಿಕೊಳ್ಳೋದು ಸರಿಯಲ್ಲ: ಶಿವರಾಜ್ ತಂಗಡಗಿ
Advertisement
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಂದಾಗಿ ಚುನಾವಣೆ ಎದುರಿಸಿ ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿ ನಮ್ಮ ಎದುರಿಗಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ಕೊಡುವುದು, ಅದಕ್ಕಿಂತ ಹೆಚ್ಚಾಗಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಕೆಲಸ ಕರ್ನಾಟಕದಿಂದ ಆಗಬೇಕಿದೆ. ಕರ್ನಾಟಕ ಕೇವಲ ದಕ್ಷಿಣ ಭಾರತದ ಬಿಜೆಪಿಯ ಭದ್ರಕೋಟೆಯಲ್ಲ. ಅದೊಂದು ಸುಭದ್ರ ಕೋಟೆಯಾಗಿದೆ ಎಂಬ ಸಂದೇಶವನ್ನು ನಾವು ನೀಡಬೇಕಿದೆ ಎಂದರು. ಇದನ್ನೂ ಓದಿ: ಜಾತಿಗಣತಿ ವರದಿ ಲೀಕ್ ಆಗಿಲ್ಲ- ವಿರೋಧ ಮಾಡೋರು ವರದಿ ಓದಲಿ: ಶಿವರಾಜ್ ತಂಗಡಗಿ
ನಮ್ಮ ಮುಂದಿರುವ ಸವಾಲು ದೊಡ್ಡದೇನಲ್ಲ. ಮೋದಿಜೀ ಅವರ ಪರವಾದ ವಾತಾವರಣ ದೇಶ ಮತ್ತು ರಾಜ್ಯದಲ್ಲಿದೆ. ಅಪಾರ ಜನಪ್ರಿಯತೆಯೂ ಅವರಿಗೆ ಇದೆ. ಅವರ ಜನಪ್ರಿಯತೆಯನ್ನು ಮತಗಳನ್ನಾಗಿ ಪರಿವರ್ತಿಸುವುದು ಹೇಗೆ ಎಂಬ ಸವಾಲಿಗೆ ಉತ್ತರ ಕಂಡುಕೊಂಡು ಕಾರ್ಯಪ್ರವೃತ್ತರಾಗುವಂತೆ ಸಲಹೆ ನೀಡಿದರು. ಕೇಂದ್ರದಲ್ಲಿ ಎರಡು ಬಾರಿ ಕಾಂಗ್ರೆಸ್ಸೇತರ ಪಕ್ಷವಾಗಿ ಬಿಜೆಪಿ ಎರಡು ಬಾರಿ ಆಡಳಿತ ನಡೆಸಿದೆ. ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿ ಆಗುವ ಎರಡನೇ ಮಹತ್ತರ ಕಾಲಘಟ್ಟದಲ್ಲೇ ಈ ಹೊಣೆ ನಮ್ಮೆಲ್ಲರ ಹೆಗಲಿಗೇರಿದೆ ಎಂದು ನುಡಿದರು. ದೇಶದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕನ್ನಡ ಪರ ಹೋರಾಟಗಾರರ ಮೇಲಿನ ಕೇಸು ವಾಪಸ್ ಪಡೆಯಿರಿ: ಬಿ.ಕೆ.ಹರಿಪ್ರಸಾದ್
ವಿಶ್ರಾಂತಿ ಪಡೆಯುವ ಪ್ರಶ್ನೆ ಉದ್ಭವ ಆಗಬಾರದು:
ಮುಂದಿನ ಲೋಕಸಭಾ ಚುನಾವಣೆ ಮುಗಿಯುವವರೆಗೆ ನಮಗೆ ಭಾನುವಾರ, ಹಬ್ಬ, ಹರಿದಿನ ಎಂಬುದು ಇರಬಾರದು. ಕುಟುಂಬ ಎಲ್ಲವನ್ನೂ ಬದಿಗಿಡಿ. ಲೋಕಸಭಾ ಚುನಾವಣೆಯ ಗುರಿ ಮುಟ್ಟುವತನಕ ನಾವು ವಿಶ್ರಾಂತಿ ಪಡೆಯುವ ಪ್ರಶ್ನೆ ಉದ್ಭವ ಆಗಬಾರದು. ನರೇಂದ್ರ ಮೋದಿಜೀ ಅವರು ವಿಶ್ರಾಂತಿ ಪಡೆಯದೆ ಕಳೆದ ಒಂಬತ್ತೂವರೆ ವರ್ಷಗಳಿಂದ ನಿರಂತರವಾಗಿ ಹೇಗೆ ದೇಶಸೇವೆ ಮಾಡುತ್ತಿದ್ದಾರೋ ಅದೇ ಮಾದರಿಯಲ್ಲಿ ಒಗ್ಗಟ್ಟಾಗಿ ಒಂದಾಗಿ ಕೆಲಸ ಮಾಡಬೇಕು. ಜಾತಿರಹಿತವಾಗಿ ಬಿಜೆಪಿ, ಹಿಂದುತ್ವದ ಜಾತಿಯಡಿ ಒಂದು ತಂಡವಾಗಿ ಕೆಲಸ ಮಾಡೋಣ ಎಂದು ಮನವಿ ಮಾಡಿದರು. ಇದನ್ನೂ ಓದಿ: ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಬೃಹತ್ ಮಟ್ಟದ ಅಹಿಂದಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್
ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ನೂತನ ಪಧಾದಿಕಾರಿಗಳ ಸಭೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಕುಮಾರ್, ಪಿ. ರಾಜೀವ್, ಪ್ರೀತಮ್ ಗೌಡ, ನಂದೀಶ್ ರೆಡ್ಡಿ ಮತ್ತು ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಸೋಮಾರಿ ಸಿದ್ದ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ