ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ಏರತೊಡಗಿದ್ದು, ಮೋದಿ ಪಕ್ಷಕ್ಕೆ ಮತ ಹಾಕಬೇಡಿ ಎಂದು ಆಂಧ್ರದ ಉಪ ಮುಖ್ಯಮಂತ್ರಿ ಬಹಿರಂಗವಾಗಿಯೇ ಕರೆ ನೀಡಿದ್ದಾರೆ.
ಭಾನುವಾರವಷ್ಟೇ ತಮಿಳುನಾಡಿನ ನಾನ್ ತಮಿಳಿಯನ್ ಸಂಘಟನೆ ರಾಜ್ಯದಲ್ಲಿರುವ ತಮಿಳುಗರಿಗೆ ಬಿಜೆಪಿಗೆ ಮತ ನೀಡದಂತೆ ಕರೆ ನೀಡಿತ್ತು. ಇದರ ಬೆನ್ನಲ್ಲೇ ಇಂದು ಆಂಧ್ರ ಉಪ ಮುಖ್ಯಮಂತ್ರಿ ಕೆ.ಇ.ಕೃಷ್ಣಮೂರ್ತಿ ಯವರು ಮೋದಿ ವಿರುದ್ಧ ಮಾತನಾಡಿ, ಮೋದಿ ಪಕ್ಷವಾದ ಬಿಜೆಪಿಗೆ ಮತ ನೀಡಬೇಡಿ ಎಂದು ಕರ್ನಾಟಕದಲ್ಲಿ ನೆಲೆಸಿರುವ ತೆಲುಗು ಪ್ರಜೆಗಳಿಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಹಣಿಯಲು ರಾಜ್ಯ ಕಾಂಗ್ರೆಸ್‍ಗೆ `ಚಂದ್ರ’ದೆಸೆ!
Advertisement
Advertisement
ಧಾರ್ಮಿಕ ಕಾರ್ಯನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಅವರು ವೈಟ್‍ಫೀಲ್ಡ್ ನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ನಿರ್ಮಾಣ ಫಂಡ್, ಕಡಪ ಸ್ಟೀಲ್ ಬ್ರಿಡ್ಜ್, ವೈಜಾಕ್ ರೈಲ್ವೇ ಜೋನ್ ಯೋಜನೆ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ನೆರವೇರಿಸುವುದಾಗಿ ತಿರುಪತಿ ತಿಮ್ಮಪ್ಪನ ಸನ್ನಿದಾನದಲ್ಲಿ ತಿಳಿಸಿದ್ದರು. ಆದರೆ ಅವರು ನೀಡಿದ್ದ ಯಾವುದೇ ಭರವಸೆ ಈಡೇರಿಸಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿ ಹಣಿಯಲು ರಾಜ್ಯ ಕಾಂಗ್ರೆಸ್‍ಗೆ `ಚಂದ್ರ’ದೆಸೆ!
Advertisement
ಯಾವುದೇ ಭರವಸೆಯನ್ನು ಈಡೇರಿಸದ ಕಾರಣ ಬಿಜೆಪಿ ಜೊತೆ ಸಮಿಶ್ರ ಮಾಡಿಕೊಂಡಿದ್ದ ತೆಲುಗು ದೇಶಂ ಪಾರ್ಟಿ ಎನ್‍ಡಿಎ ಒಕ್ಕೂಟದಿಂದ ಹೊರ ಬಂದಿದೆ. ಬಿಜೆಪಿ ಪಕ್ಷವನ್ನು ನಂಬಿ ತಾವು ಮೋಸ ಹೋದಂತೆ ಮತ್ತೆ ಯಾರೂ ಮೋಸ ಹೋಗಬಾರದೆಂದು ಹರಿಹಾಯ್ದಿದ್ದಾರೆ.
Advertisement