ಬೆಂಗಳೂರು: ಚುನಾವಣೆ (Election) ದಿನದಂದು ರಾಜ್ಯ ಬಜೆಟ್ (State Budget) ಮಂಡಿಸುವುದು ಸರಿಯಲ್ಲ ಎಂದು ರಾಜ್ಯ ಬಿಜೆಪಿ (BJP) ತಿಳಿಸಿದೆ. ರಾಜಭವನದಲ್ಲಿ ಬುಧವಾರ ಈ ಕುರಿತು ರಾಜ್ಯಪಾಲರಿಗೆ (Governer) ಬಿಜೆಪಿ ನಿಯೋಗವು ಮನವಿ ಸಲ್ಲಿಸಿತು.
ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ (CN Ashwath Narayan), ಚುನಾವಣಾ ಆಯೋಗವು ಬೆಂಗಳೂರಿನ ವಿಧಾನಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಜನವರಿ 23ರಂದು ಚುನಾವಣಾ ದಿನವನ್ನು ನಿಗದಿಪಡಿಸಿದೆ. ಫೆಬ್ರವರಿ 16ರಂದು ದಿನಾಂಕ ನಿಗದಿಯಾಗಿದೆ ಎಂದರು. ಇದನ್ನೂ ಓದಿ: ತಿಂಗಳ ಅಂತ್ಯದಲ್ಲಿ ಜಾತಿ ಜನಗಣತಿ ವರದಿ ಸರ್ಕಾರಕ್ಕೆ ಕೊಡುತ್ತೇವೆ: ಜಯಪ್ರಕಾಶ್ ಹೆಗ್ಡೆ
Advertisement
Advertisement
ಮತದಾನದ ದಿನವೇ ರಾಜ್ಯ ಸರ್ಕಾರದ ಬಜೆಟ್ ಮಂಡನೆ ಆಗಲಿದೆ. ಮಾದರಿ ನೀತಿಸಂಹಿತೆ ಮತ್ತು ಜನಪ್ರತಿನಿಧಿ ಕಾಯ್ದೆ ಪ್ರಕಾರ ಇದು ನ್ಯಾಯಬದ್ಧವಲ್ಲ. ಬಜೆಟ್ ದಿನವೇ ಚುನಾವಣೆ ಮಾಡುವ ಬದಲು ಬಜೆಟ್ ಮಂಡನೆ ದಿನಾಂಕವನ್ನು ಮುಂದಕ್ಕೆ ಹಾಕಲು ಕೋರಲಾಗಿದೆ. ಬಿಜೆಪಿ ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸೂಚನೆ ಕೊಡಲು ಕೋರಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿಯವರು ರಾಮನನ್ನು ಸೀತೆಯಿಂದ ಬೇರ್ಪಡಿಸಿದ್ದಾರೆ: ಸಿದ್ದರಾಮಯ್ಯ
Advertisement
ಬಜೆಟ್ ಮಂಡನೆ ದಿನವನ್ನು ಮುಂದೂಡಬೇಕು. ಚುನಾವಣೆ ದಿನವೇ ಬಜೆಟ್ ಮಂಡಿಸದಂತೆ ಸೂಚಿಸಲು ಕೋರಿದ್ದೇವೆ. ರಾಜ್ಯ ಸರ್ಕಾರಕ್ಕೆ ಈ ಕುರಿತು ಸೂಚಿಸುವುದಾಗಿ ಮಾನ್ಯ ರಾಜ್ಯಪಾಲರೂ ತಿಳಿಸಿದ್ದಾರೆ. ಇದಲ್ಲದೇ ಚುನಾವಣಾ ಆಯೋಗಕ್ಕೂ ಮನವಿ ಕೊಡಲಿದ್ದೇವೆ. ಆ ದಿನ ಬಜೆಟ್ ಮಂಡಿಸಿದರೆ ಅದು ಮತದಾನದ ಮೇಲೆ ಪರಿಣಾಮ ಬೀರಲಿದೆ ಎಂದು ಗಮನಕ್ಕೆ ತರಲಾಗಿದೆ ಎಂದು ವಿವರಣೆ ನೀಡಿದರು. ಇದನ್ನೂ ಓದಿ: ತಮಿಳುನಾಡಿಗೆ ಎಷ್ಟು ನೀರು ಕೊಡಬೇಕೊ ಅದನ್ನ ಕೊಡಲಿಕ್ಕೆ ನಾವು ಬದ್ಧರಿದ್ದೇವೆ: ಡಿ.ಕೆ.ಶಿವಕುಮಾರ್
Advertisement
ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಬಸವರಾಜ್, ಮಾಜಿ ಸಚಿವರು ಮತ್ತು ರಾಜ್ಯ ಉಪಾಧ್ಯಕ್ಷರಾದ ಬೈರತಿ ಬಸವರಾಜ್, ಹರತಾಳು ಹಾಲಪ್ಪ, ಮಾಜಿ ಸಚಿವ ಮುನಿರತ್ನ, ಯುವಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜ್, ಇತರ ಪ್ರಮುಖರು ಜೊತೆಗೂಡಿ ಈ ಮನವಿ ಸಲ್ಲಿಸಿದರು. ಇದನ್ನೂ ಓದಿ: ಇಂಡಿಯಾ ಒಕ್ಕೂಟ ಛಿದ್ರವಾಗಲಿದೆ – ಮಮತಾ ಬಳಿಕ ಮತ್ತಷ್ಟು ನಾಯಕರು ಹೊರಕ್ಕೆ: ಬೊಮ್ಮಾಯಿ