ಉತ್ತರಕಾಂಡ ಚಿತ್ರದಲ್ಲಿ ‘ಮಲ್ಲಿಗೆ’ಯಾದ ದೂದ್ ಪೇಡಾ ದಿಗಂತ್

Public TV
1 Min Read
DIGANTH 3

ಟ ದೂದ್ ಪೇಡಾ ದಿಗಂತ್ (Diganth) ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ ಮಲ್ಲಿಗೆ ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್ ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ.

Diganth 1

ಡಾಲಿ ಧನಂಜಯ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ, ಶಿವರಾಜ್ ಕುಮಾರ್ ಕಾಂಬಿನೇಷನ್ ನ ಉತ್ತರ ಕಾಂಡ (Uttarkanda) ಸಿನಿಮಾದಲ್ಲಿ ಚೈತ್ರಾ ಆಚಾರ್ಯ್ (Chaitra Acharya)  ಕೂಡ ನಟಿಸುತ್ತಿದ್ದಾರೆ. ಚೈತ್ರ ಆಚಾರ್ ಉತ್ತರಕಾಂಡ ತಾರಾಬಳಗಕ್ಕೆ ಸೇರ್ಪಡೆ ಆಗಿದ್ದು, ಇಂದು ಚಿತ್ರೀಕರಣದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅವರು ಲಚ್ಚಿ (Lacchi) ಎಂಬ ಒಂದು ಮುಖ್ಯ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ.

Uttarkanda

ಉತ್ತರಕಾಂಡ’ದ ಮುಹೂರ್ತ 2022ರಲ್ಲಿ ಆಗಿದ್ದು, ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ, ಹಾಗೂ ಚಿತ್ರವು ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಏ.15 ರಿಂದ ಚಿತ್ರೀಕರಣ ಆರಂಭಗೊಂಡಿದ್ದು, ಚಿತ್ರತಂಡದವರು ಉತ್ಸುಕರಾಗಿದ್ದಾರೆ.

ಉತ್ತರಕಾಂಡ ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ರೋಹಿತ್ ಪದಕಿ ಆಕ್ಷನ್ ಕಟ್ ಹೇಳಿದ್ದು, ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ.ಆರ್.ಜಿ.ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.

Share This Article