ನಟ ವಿಜಯ್ ಕೃಷ್ಣ (Vijay Krishna) ಹಾಗೂ ಪ್ರಿಯಾಂಕ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ದೂರ ತೀರ ಯಾನ’ (Doora Theera Yaana) ಸಿನಿಮಾದ ‘ಇದೇನಿದು ಸೂಚನೆ’ ಮೊದಲ ಪ್ರೇಮಗೀತೆಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಕವಿರಾಜ್ ಅವರು ಬರೆದಿರುವ ಸಾಹಿತ್ಯಕ್ಕೆ, ಬಕ್ಕೇಶ್ ಹಾಗೂ ಕಾರ್ತಿಕ್ ಸಂಗೀತ ಸಂಯೋಜನೆ ಮಾಡಿದ್ದು, ಖ್ಯಾತ ಗಾಯಕರಾದ ಅರ್ಮಾನ್ ಮಲಿಕ್ ಹಾಡಿದ್ದಾರೆ. ಇದನ್ನೂ ಓದಿ:ಗಾಯಕಿ ಪೃಥ್ವಿ ಭಟ್ ಪ್ರೇಮವಿವಾಹ: ‘ಸರಿಗಮಪ’ ಜ್ಯೂರಿ ಮೇಲೆ ಆರೋಪ
ಮಂಸೋರೆ ಬರೆದಿರುವ ಕಥೆಗೆ ಚೇತನಾ ತೀರ್ಥಹಳ್ಳಿ ಸಂಭಾಷಣೆ ಬರೆದಿದ್ದಾರೆ. ಈ ಸಿನಿಮಾದಲ್ಲಿ ಒಟ್ಟು ಆರು ಹಾಡುಗಳಿದ್ದು, ಬಕ್ಕೇಶ್ ಹಾಗೂ ಕಾರ್ತೀಕ್ ಹಾಡುಗಳನ್ನು ಸಂಯೋಜಿಸಿದ್ದಾರೆ. ಜಯಂತ್ ಕಾಯ್ಕಿಣಿ, ಕವಿರಾಜ್, ಪ್ರಮೋದ್ ಮರವಂತೆ ಹಾಗೂ ಕಿರಣ್ ಕಾವೇರಪ್ಪ ಹಾಡುಗಳನ್ನು ಬರೆದಿದ್ದಾರೆ. ಸಿನಿಮಾದ ಶೀರ್ಷಿಕೆ ಗೀತೆಯನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವುದಾಗಿ ನಿರ್ದೇಶಕ ಮಂಸೋರೆ ತಿಳಿಸಿದ್ದಾರೆ. ಆ ಹಾಡನ್ನು ವಿಶೇಷವಾಗಿ ಪ್ರೇಕ್ಷಕರಿಂದಲೇ ಬಿಡುಗಡೆ ಮಾಡಿಸುವ ಆಲೋಚನೆ ಇದ್ದು, ರಾಜ್ಯದ ಪ್ರಮುಖ ನಗರವೊಂದರಲ್ಲಿ ಬಿಡುಗಡೆ ಮಾಡಲು ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ:ನಗದಿನ ಮೂಲಕ ಸಂಭಾವನೆ – ಮಹೇಶ್ ಬಾಬುಗೆ ಇಡಿ ನೋಟಿಸ್
View this post on Instagram
ಮಂಸೋರೆ ನಿರ್ದೇಶನ ಮಾಡಿರುವ ಈ ಸಿನಿಮಾ ಬೆಂಗಳೂರು, ಉಡುಪಿ, ಕುಂದಾಪುರ, ಗೋಕರ್ಣ, ಮುರುಡೇಶ್ವರ, ಕಾರವಾರ, ಯಲ್ಲಾಪುರ, ದಾಂಡೇಲಿ, ಗೋವಾದಲ್ಲಿ 40 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದ್ದು, ಸಿನಿಮಾ ಡಬ್ಬಿಂಗ್ ಕೆಲಸಗಳು ಭರದಿಂದ ಸಾಗಿದೆ. ಸದ್ಯದಲ್ಲೇ ರಿಲೀಸ್ ಕುರಿತು ಅಪ್‌ಡೇಟ್ ಹೇಳೋದಾಗಿ ನಿರ್ಮಾಪಕರಾದ ದೇವರಾಜ್ ಆರ್. ಅವರು ತಿಳಿಸಿದ್ದಾರೆ.
ಇದೊಂದು ಪ್ರೇಮಕಥೆ ಆಧರಿಸಿದ ಸಿನಿಮಾ ಆಗಿದೆ. ಹರೆಯದ ಇಬ್ಬರು ಪ್ರೇಮಿಗಳು ಬೆಂಗಳೂರಿನಿಂದ ಗೋವಾಗೆ ಪಯಣ ಆರಂಭಿಸುತ್ತಾರೆ. ಆ ಪ್ರಯಾಣದಲ್ಲಿ ತಮ್ಮ ಪ್ರೀತಿಯ ಅರ್ಥ ಹುಡುಕಿಕೊಳ್ಳುವುದು ಮೂಲಕಥೆಯಾಗಿದೆ. ಈ ಸಿನಿಮಾಗೆ ಸರವಣ ಕುಮಾರ್ ಅವರ ಕಲಾನಿರ್ದೇಶನವಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತರಾದ ನಾಗೇಂದ್ರ ಕೆ ಉಜ್ಜನಿ ಅವರು ಸಂಕಲನ ಮಾಡಿದ್ದಾರೆ.