ಬೆಂಗಳೂರು: ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಡಬಲ್ ಮೋಸ ಮಾಡಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.
ಮೇಕೆದಾಟು 2.0 ಪಾದಯಾತ್ರೆಯನ್ನು ಪಾಲ್ಗೊಂಡ ಅವರು, ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ, ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಡಬಲ್ ಮೋಸ ಮಾಡಿದೆ. 2013ಕ್ಕೂ ಮುಂಚೆ ಬಿಜೆಪಿ ಅಧಿಕಾರದಲ್ಲಿದ್ದಾಗ ಮೇಕೆದಾಟು ಯೋಜನೆಗೆ ಏನೂ ಮಾಡಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಿದ್ದರಾಮಯ್ಯ ಯೋಜನೆಗೆ ಡಿಪಿಆರ್ ಮಾಡಿದರು. ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ಸಿಎಂ ಆಗುವುದರಲ್ಲಿಯೇ ವಸ್ತುಸ್ಥಿತಿ ಬದಲಾಗಲಿ ಎನ್ನುವುದು ಜನರ ಆಶಯ. ಬೊಮ್ಮಾಯಿ ಸರ್ವಪಕ್ಷ ಸಭೆ ಕರೆಯುತ್ತೇವೆ ಅಂತ ಹೇಳಿ ಕರೆದಿಲ್ಲ. ಆ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡಿದ್ದಾರೆ. ಸರ್ವಪಕ್ಷ ಸಭೆಯಿಂದ ಮೇಕೆದಾಟು ಯೋಜನೆ ಆರಂಭ ಆಗಲ್ಲ ಎಂದಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು: ಆರ್.ಅಶೋಕ್
ತಮಿಳುನಾಡಿಗೆ ಮೇಕೆದಾಟು ಬಗ್ಗೆ ಮಾತಾಡುವ ಅಧಿಕಾರ ಇಲ್ಲ. ತಮಿಳುನಾಡಿಗೆ ಬಿಜೆಪಿ ಸಾಕಷ್ಟು ನೀರು ಕೊಡುತ್ತಿದೆ. ನಾವು ಬಿಬಿಎಂಪಿ ಎಲೆಕ್ಷನ್ ದೃಷ್ಟಿಯಲ್ಲಿಟ್ಟುಕೊಂಡು ಪಾದಯಾತ್ರೆ ಮಾಡುತ್ತಿಲ್ಲ. ಮುಂದಿನ ಐವತ್ತು ವರ್ಷ ಈ ಯೋಜನೆಯಿಂದ ಬೆಂಗಳೂರಿಗೆ ನೀರು ಸಿಗುತ್ತದೆ. ಇದು ಬೆಂಗಳೂರಿಗೆ ಮಾತ್ರ ಸೀಮಿತ ಅಲ್ಲ. ರಾಜ್ಯವೂ ಈ ಯೋಜನೆಯಿಂದ ಅಭಿವೃದ್ಧಿ ಆಗುತ್ತದೆ.
ಮೇಕೆದಾಟು ಪಾದಯಾತ್ರೆ ಜನಾಂದೋಲನ ಆಗಿ ಪರಿಣಮಿಸಿದೆ. ಈ ಜನಾಂದೋಲನವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸುವ ಕಾಲ ಬಂದಿದೆ. ಪಾದಯಾತ್ರೆ ಸಿದ್ದರಾಮಯ್ಯ, ಡಿಕೆಶಿ ಸೇರಿ ಎಲ್ಲ ನಮ್ಮ ನಾಯಕರ ನೇತೃತ್ವದಲ್ಲಿ ನಡೆಯುತ್ತಿದೆ. ಪಾದಯಾತ್ರೆಯನ್ನು ನಾವು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಬೈಡನ್ ದೌರ್ಬಲ್ಯದಿಂದಲೇ ಈ ಅನಾಹುತವಾಗಿದೆ: ಟ್ರಂಪ್