– ಪೊಲೀಸರ ವಿಚಾರಣೆಯಲ್ಲಿ ಸತ್ಯ ಕಕ್ಕಿದ ಪತ್ನಿ

ಬೆಂಗಳೂರು: ಚಿಕ್ಕಬಾಣಾವರದಲ್ಲಿ (Chikkabanavara) ನಡೆದ ಗಂಡ (Husband) ಹಾಗೂ ಮಗುವಿನ (Son) ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಪ್ರಕರಣದ ತನಿಖೆ ವೇಳೆ ಮೃತ ಅಭಿನಂದನ್ ಅವರ ಪತ್ನಿ ಹರಿಣಿ ಪೊಲೀಸರ ಮುಂದೆ ಸತ್ಯ ಬಾಯ್ಬಿಟ್ಟಿದ್ದಾಳೆ. ಪ್ರಿಯಕರ ವಿನಯ್ ಜೊತೆ ಸೇರಿ ಗಂಡ ಹಾಗೂ ಮಗನನ್ನು ತಾನೇ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಹರಿಣಿ ಅಸಲಿ ಕಹಾನಿ ತೆರೆದಿಟ್ಟಿದ್ದಾಳೆ.
ಘಟನೆ ನಡೆದ ರಾತ್ರಿ ಸುಮಾರು 11 ಗಂಟೆ ವೇಳೆಗೆ ಹರಿಣಿ ತನ್ನ ಪ್ರಿಯಕರ ವಿನಯ್‌ನನ್ನು ಮನೆಗೆ ಕರೆಸಿಕೊಂಡಿದ್ದಳು. ಇದೇ ವೇಳೆ ಹರಿಣಿ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಿದ್ದಾಳೆ. ಬಳಿಕ ಇಬ್ಬರೂ ಸೇರಿ ಅಭಿನಂದನ್‌ನನ್ನು ಕೊಲೆ ಮಾಡಲು ಮುಂದಾಗಿದ್ದಾರೆ. ಮನೆಯಲ್ಲಿದ್ದ ಸೌಟ್‌ನಿಂದ ಅಭಿನಂದನ್ ತಲೆಗೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಈ ವೇಳೆ ಪುತ್ರ ಯದುವೀರ್ ಘಟನೆಯನ್ನು ನೋಡಿದ್ದು, ಮುಂದೆ ತಮಗೆ ತೊಂದರೆಯಾಗಬಹುದು ಎಂದು ಭಾವಿಸಿದ ಹರಿಣಿ ಹಾಗೂ ವಿನಯ್, ಮಗುವನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಇದನ್ನೂ ಓದಿ: 2029ರ ಲೋಕಸಭಾ ಚುನಾವಣೆಗೆ ಮೋದಿ ಬೆಂಬಲಿಸಲು ಸರ್ಕಾರಿ ಹುದ್ದೆಗೆ ಪೊಲೀಸ್ ಕಾನ್‌ಸ್ಟೆಬಲ್ ರಾಜೀನಾಮೆ
ಕೊಲೆ ಬಳಿಕ ಸಾಕ್ಷ್ಯ ನಾಶಪಡಿಸಲು ಹರಿಣಿ ಮನೆಯಲ್ಲಿದ್ದ ರಕ್ತದ ಕಲೆಗಳನ್ನು ತೊಳೆದಿದ್ದಾಳೆ. ಅಭಿನಂದನ್ ಅವರ ರಕ್ತದ ಕಲೆಗಳು ಬಿದ್ದಿದ್ದ ಬಟ್ಟೆಗಳನ್ನು ಬದಲಾಯಿಸಿ, ಅವುಗಳನ್ನು ರಾತ್ರೋರಾತ್ರಿ ತೊಳೆದು ಹಾಕಿದ್ದಳು. ನಂತರ ಮಗುವನ್ನು ಮೇಲೆ ಮಲಗಿಸಿ ಉಸಿರುಗಟ್ಟಿಸಿ ಸಾಯಿಸಿದ್ದಾನೆ ಎಂಬಂತೆ ಬಿಂಬಿಸಲು ಯತ್ನಿಸಿರುವುದಾಗಿ ಹರಿಣಿ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ. ಇದನ್ನೂ ಓದಿ: ಚಾಮರಾಜನಗರದಲ್ಲಿ ಮೂವರ ಎನ್‌ಕೌಂಟರ್ ಕೇಸ್ – ಅರಣ್ಯಾಧಿಕಾರಿಗಳಿಂದ ವಸ್ತು ಜಪ್ತಿ, ಹಲವು ಅನುಮಾನ
ತಮ್ಮ ಪ್ಲಾನ್‌ನಂತೆ ಕೊಲೆ ನಡೆಸಿದ ಬಳಿಕ ವಿನಯ್ ಅಲ್ಲಿಂದ ಪರಾರಿಯಾಗಿದ್ದಾನೆ. ಇದೀಗ ಚಿಕ್ಕಬಾಣಾವರ ಪೊಲೀಸರು ಆತನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಇದನ್ನೂ ಓದಿ: ಸಾಲವೆಂಬ ಪರ್ವತಗಳ ಸುಳಿಯಲ್ಲಿ ಹಿಮಾಚಲ – ವಿಧವಾ & ಅನಾಥ ಕಲ್ಯಾಣ ಸೆಸ್‌ಗಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆ
