ಬೆಂಗಳೂರು: ಶೀಲ ಶಂಕಿಸಿ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ (Bengaluru) ಆರ್‌ಬಿಐ ಲೇಔಟ್ ಸಮೀಪದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಮರದ ತುಂಡಿನಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಪತಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಡಬಲ್ ಮರ್ಡರ್ ಮಾಡಿದ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಹುಬ್ಬಳ್ಳಿಯಿಂದ ಅಹಮದಾಬಾದ್, ಚೆನ್ನೈಗೆ ವಿಮಾನ: ಕೇಂದ್ರ ಸಚಿವರ ಸಮಾಲೋಚನೆ
ಕೋಣನಕುಂಟೆ (Konanakunte) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಣ್ತೆರೆದ ನ್ಯಾಯದೇವತೆ – ಇಲ್ಲಿಯವರೆಗೂ ಕಣ್ಣಿಗೆ ಕಟ್ಟಿದ್ದ ಬಟ್ಟೆ ತೆರವುಗೊಳಿಸಿದ ಸುಪ್ರೀಂ ಕೋರ್ಟ್