LatestNational

ಇವಿಎಂಗಳ ಮೇಲೆ ಅನುಮಾನ ಮೂಡುತ್ತಿದೆ – ತೆಲಂಗಾಣ ಕೈ ಮುಖಂಡ

ಹೈದರಾಬಾದ್: ತೆಲಂಗಾಣದಲ್ಲಿ ಭರ್ಜರಿಯಾಗಿ ಟಿಆರ್‍ಎಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದ ಬೆನ್ನಲ್ಲೆ ಇಲೆಕ್ಟ್ರಾನಿಕ್ ವೋಟಿಂಗ್ ಯಂತ್ರಗಳ ಮೇಲೆಯೇ ಅನುಮಾನ ಮೂಡುತ್ತಿದೆ ಎಂದು ಕಾಂಗ್ರೆಸ್ ಸಮಿತಿ ವಕ್ತಾರ ಉತ್ತಮ್ ಕುಮಾರ್ ರೆಡ್ಡಿ ಶಂಕೆ ವ್ಯಕ್ತಪಡಿಸಿದ್ದಾರೆ.

ತೆಲಂಗಾಣದಲ್ಲಿ ಟಿಆರ್‍ಎಸ್ ನಾಗಲೋಟ ಕುರಿತು ಪ್ರತಿಕ್ರಿಯಿಸಿರುವ ಅವರು, ಇಲೆಕ್ಟ್ರಾನಿಕ್ ವೋಟಿಂಗ್ ಮಿಷಿನ್ ಗಳ ಮೇಲೆ ನಮಗೆ ಅನುಮಾನವಿದೆ. ವಿವಿ ಪ್ಯಾಟ್ ಗಳಲ್ಲಿ ನಮೂದಾಗಿರುವ ದಾಖಲೆಗಳನ್ನು ಸಹ ಪರಿಶೀಲನೆ ನಡೆಸಬೇಕು. ಇವಿಎಂ ಹ್ಯಾಕ್ ಮಾಡಿರುವ ಗುಮಾನಿಯಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಚುನಾವಣಾ ನಿಯಂತ್ರಣಾಧಿಕಾರಿಗಳಿಗೆ ದೂರನ್ನು ನೀಡುತ್ತಾರೆಂದು ಹೇಳಿದ್ದಾರೆ.

ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಟಿಆರ್‍ಎಸ್ ನಾಯಕರು ಯಾವ ಕ್ಷೇತ್ರಗಳಲ್ಲಿ ಯಾರು ಗೆಲ್ಲುತ್ತಾರೆ? ಯಾರು ಸೋಲುತ್ತಾರೆ ಎಂಬುದು ಹೇಳಲು ಹೇಗೆ ಸಾಧ್ಯ. ಈ ಬಗ್ಗೆ ಭಾರತೀಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ದಾಖಲಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ತೆಲಂಗಾಣದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‍ಎಸ್) ನಿರೀಕ್ಷೆಯಂತೆ ಅಧಿಕಾರಕ್ಕೆ ಏರುವುದು ಖಚಿತವಾಗಿದೆ. ಹಾಲಿ ಅಧಿಕಾರದಲ್ಲಿರುವ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್‍ಎಸ್ ಮತ್ತೆ ಅಧಿಕಾರ ಉಳಿಸಿಕೊಳ್ಳುತ್ತದೆ ಎಂದಿದ್ದ ಚುನಾವಣೋತ್ತರ ಸಮೀಕ್ಷೆ ನಿಜವಾಗಿದೆ.ಸದ್ಯದ ಮಾಹಿತಿಗಳ ಪ್ರಕಾರ ಟಿಆರ್‍ಎಸ್ 90 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇವಿಎಂಗಳ ಮೇಲೆ ಅನುಮಾನ ಮೂಡುತ್ತಿದೆ - ತೆಲಂಗಾಣ ಕೈ ಮುಖಂಡ

 

ಕಾಂಗ್ರೆಸ್ ಹಾಗೂ ಟಿಡಿಪಿ ಮೈತ್ರಿ ಕೂಟ 20 ಸ್ಥಾನಗಳಲ್ಲಿ ಮಾತ್ರವೇ ಮುನ್ನಡೆ ಸಾಧಿಸಿದೆ. ಇನ್ನು ಬಿಜೆಪಿ 02 ಕ್ಷೇತ್ರ ಹಾಗೂ ಎಐಎಂಎಂ 06 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಇದನ್ನೂ ಓದಿ: ನಿರೀಕ್ಷೆಯಂತೆ ತೆಲಂಗಾಣದಲ್ಲಿ ಕೆಸಿಆರ್ ಅಧಿಕಾರಕ್ಕೆ – ಟಿಆರ್‏ಎಸ್ ಜಯಕ್ಕೆ ಕಾರಣ ಏನು?

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Related Articles

Leave a Reply

Your email address will not be published. Required fields are marked *