DavanagereDistrictsKarnatakaLatestLeading NewsMain Post

ಹೊನ್ನಾಳಿ ಚಂದ್ರು ಸಾವಿನ ಸುತ್ತ 5 ಅನುಮಾನ

ಕೊಲೆಯೋ? ಆತ್ಮಹತ್ಯೆಯೋ? ಅಪಘಾತದಿಂದ ಉಂಟಾದ ಸಾವೋ?

ದಾವಣಗೆರೆ/ಬೆಂಗಳೂರು: ಮಾಜಿ ಮಂತ್ರಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ(Renukacharya) ಸಹೋದರ ಎಂ.ಪಿ.ರಮೇಶ್ ಪುತ್ರ ಚಂದ್ರಶೇಖರ್(Chandrashekar) ನಾಪತ್ತೆ ಪ್ರಕರಣ ವಿಷಾದದಲ್ಲಿ ಅಂತ್ಯವಾಗಿದೆ. ಐದು ದಿನದ ಹಿಂದೆ ನಾಪತ್ತೆಯಾಗಿದ್ದ ಚಂದ್ರಶೇಖರ್ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಗುರುವಾರ ಮಧ್ಯಾಹ್ನದವರೆಗೂ ಚಂದ್ರು ಅವರನ್ನು ಅಪಹರಣ ಮಾಡಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ಹೊನ್ನಾಳಿ ಮತ್ತು ನ್ಯಾಮತಿ ಮಾರ್ಗಮಧ್ಯೆ ಬರುವ ಸೊರಟೂರಿನ ತುಂಗಭದ್ರಾ(Tungabhadra Canal) ನದಿಯ ಕಾಲುವೆಯಲ್ಲಿ ಕಾರೊಂದು ಇದೆ ಎಂಬ ಸುದ್ದಿ ಇಡೀ ಪ್ರಕರಣಕ್ಕೆ ಟ್ವಿಸ್ಟ್ ನೀಡಿತು.

ಕಾಲುವೆ ಮೇಲ್ಭಾಗದಲ್ಲಿ ಕಾರೊಂದರ ಬಿಡಿಭಾಗಳು ಪತ್ತೆ ಆಗಿದ್ದವು. ನುರಿತ ಈಜುಪಟುಗಳು ಮತ್ತು ಅಗ್ನಿಶಾಮಕ ಪಡೆ ಸಿಬ್ಬಂದಿ ಕಾರ್ಯಾರಚಣೆ ನಡೆಸಿ, ಕಾರನ್ನು ಮೇಲಕ್ಕೆ ಎತ್ತಿದರು. ಕಾರಿನಲ್ಲಿ ಚಂದ್ರಶೇಖರ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಶವ ಅಂತ ಹೇಳ್ಬೇಡಿ ಚಂದ್ರು ಅಂತ ಕರೆಯಿರಿ- ಗೋಳಾಡಿದ ರೇಣುಕಾಚಾರ್ಯ

ಶಾಸಕ ರೇಣುಕಾಚಾರ್ಯ ಸೇರಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಚಂದ್ರು ನಿನ್ನ ಸಾವಿಗೆ ನಾನೇ ಕಾರಣ. ಚಂದ್ರು ನನ್ನನ್ನು ಕರ್ಕೋಳೋ ಎಂದು ರೇಣುಕಾಚಾರ್ಯ ಗೋಳಾಡಿದ್ದಾರೆ.

ಇದು ಕೊಲೆಯೋ? ಆತ್ಮಹತ್ಯೆಯೋ? ಅಪಘಾತದಿಂದ ಉಂಟಾದ ಸಾವೋ? ಎಂಬುದು ಖಚಿತವಾಗಿಲ್ಲ. ಚಂದ್ರು ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದು ನಿಂತಿದೆ. ಇದೀಗ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಚಂದ್ರಶೇಖರ್ ಸಾವಿನ ನೈಜ ಕಾರಣ ತಿಳಿದುಬರಲಿದೆ.

ಮತ್ತೊಂದು ಕಡೆ ಪೊಲೀಸರ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿದ್ದಾರೆ. ಇದು ಸಹಜ ಸಾವಲ್ಲ. ಕೊಲೆ ನಡೆದಿದೆ ಈ ಬಗ್ಗೆ ತನಿಖೆ ಆಗಬೇಕು ಎಂದು ಶಾಸಕ ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ರೇಣುಕಾಚಾರ್ಯ ಜೊತೆ ಚರ್ಚಿಸಿ ತನಿಖೆ ನಿರ್ಧಾರ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ. ಶುಕ್ರವಾರ ಚಂದ್ರಶೇಖರ್ ಅಂತ್ಯಕ್ರಿಯೆ ಹೊನ್ನಾಳಿಯಲ್ಲಿ ನಡೆಯಲಿದೆ.

ಚಂದ್ರು ಸಾವಿನ ಸುತ್ತ ಅನುಮಾನದ ಹುತ್ತ
ಅನುಮಾನ 1 – ಡ್ರೈವರ್ ಸೀಟ್ ಬೆಲ್ಟ್ ಲಾಕ್ ಆಗಿದ್ರೂ ಹಿಂಬದಿ ಸೀಟ್‍ನಲ್ಲಿ ಮೃತದೇಹ ಸಿಕ್ಕಿದೆ.
ಅನುಮಾನ 2 – ಕ್ರೇಟಾ ಕಾರಿನ ಮುಂಭಾಗದ ಗಾಜು ದೊಡ್ಡದಾಗಿ ಒಡೆದಿರುವುದು. ಯಾರೋ ಕಲ್ಲು ಎತ್ತಿ ಹಾಕಿ ಒಡೆದಂತೆ ಕಾಣುತ್ತಿದೆ.
ಅನುಮಾನ 3 – ಕಾರು ಹಿಂಬದಿ ನಜ್ಜು ಗುಜ್ಜಾಗಿರುವುದು.
ಅನುಮಾನ 4 – ನಾಲೆಯ ತಡೆಗೋಡೆಗೆ ಹೆಚ್ಚು ಹಾನಿ ಆಗದಿರುವುದು.
ಅನುಮಾನ 5 – ಮೃತ ಚಂದ್ರು ಮೊಬೈಲ್ ಟವರ್ ಲೊಕೇಶನ್ ಬೇರೆ ಕಡೆ ಕೊನೆಯಾಗಿರುವುದು.

ಏನಿದು ಪ್ರಕರಣ?
ಅ.30ರ ಭಾನುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು ರಾತ್ರಿ ಊರಿಗೆ ಮರಳಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಸ್ನೇಹಿತರ ಜೊತೆ ಕೊನೆಯದಾಗಿ ಮಾತಾಡಿದ್ದಾನೆ‌. ರಾತ್ರಿ 11:30 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅಲ್ಲಿಂದ ಸಿಗ್ನಲ್ ಪತ್ತೆಯಾಗಿಲ್ಲ. ಶಿವಮೊಗ್ಗದಿಂದ ನ್ಯಾಮತಿ ತಾಲ್ಲೂಕಿನ ಸುರಹೊನ್ನೆಗೆ ಬಂದ  ದೃಶ್ಯ ಸಿಸಿ ಕ್ಯಾಮೆರಾದಲ್ಲಿ  ಲಭ್ಯವಾಗಿದೆ.

Live Tv

Leave a Reply

Your email address will not be published. Required fields are marked *

Back to top button