– ಪಿಎಸ್‌ಐ ನಿತ್ಯಾನಂದಗೌಡ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್
ಚಿಕ್ಕಮಗಳೂರು: ನನ್ನ ಪತಿ ಪೊಲೀಸ್ (Police) ಠಾಣೆಗೆ ನ್ಯಾಯ ಕೇಳಿ ಬರುತ್ತಿದ್ದ ಮಹಿಳೆಯರನ್ನು ಮಂಚಕ್ಕೆ ಕರೆದು ಸಿಕ್ಕಿಬಿದ್ದಿದ್ದಾರೆ. ಅಲ್ಲದೇ ನನಗೆ 50 ಲಕ್ಷ ರೂ. ವರದಕ್ಷಿಣೆ (Dowry) ತರುವಂತೆ ಕಿರುಕುಳ ನೀಡುತ್ತಾರೆ ಎಂದು ಕಳಸ (Kalasa) ಪಿಎಸ್‌ಐ ನಿತ್ಯಾನಂದಗೌಡ (PSI Nithyanandagowda) ವಿರುದ್ಧ ಅವರ ಪತ್ನಿ ಗಂಭೀರ ಆರೋಪ ಮಾಡಿದ್ದಾರೆ.
ನಿತ್ಯಾನಂದಗೌಡರ ತಂಗಿ, ತಂಗಿ ಗಂಡನಿಂದಲೂ ಹಲ್ಲೆ, ಅವಾಚ್ಯ ಶಬ್ಧಗಳ ಬಳಕೆ ಮಾಡಿ ನಿಂದಿಸುತ್ತಾರೆ. ಆತ ಕೆಲಸ ಮಾಡಿರುವ ಠಾಣೆಗಳಿಗೆ ಕಷ್ಟ ಎಂದು ಬರುವ ಹಾಗೂ ಪಾಸ್‌ಪೋರ್ಟ್‌ಗೆ ಬರುವ ಮಹಿಳೆಯರನ್ನ ಮಂಚಕ್ಕೆ ಕರೆಯುತ್ತಾರೆ. ಉಡುಪಿಯ ಕಾಪು ಠಾಣೆಯಲ್ಲಿದ್ದಾಗ ಮುಸ್ಲಿಂ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು. ನಾನು ಅವರ ರೂಂಗೆ ಹೋದಾಗ ಕಾಂಡೋಮ್‌ಗಳು ಪತ್ತೆಯಾಗಿದ್ದವು ಎಂದು ಅವರ ಪತ್ನಿ ಆರೋಪಿಸಿದ್ದಾರೆ.
- Advertisement
- Advertisement
ಮುಸ್ಲಿಮರು ಪಿಎಸ್‌ಐಗೆ ಹೊಡೆಯಲು ಬಂದಾಗ ಎಸ್‌ಪಿ ಅವರನ್ನು ರಕ್ಷಿಸಿದ್ದರು. ಕೋಟಾ ಠಾಣೆಯಲ್ಲೂ ಮಹಿಳೆ ನ್ಯಾಯ ಕೊಡಿಸುತ್ತೇನೆ ಎಂದು ದೈಹಿಕವಾಗಿ ಬಳಸಿಕೊಂಡಿದ್ದಾರೆ. ಬೆಂಗಳೂರಿನಲ್ಲೂ ಮಹಿಳೆ ಒಬ್ಬಳನ್ನು ಮಂಚಕ್ಕೆ ಕರೆದು ಸಿಕ್ಕಿಬಿದ್ದಿದ್ದರು. ಆ ಮಹಿಳೆಗೆ 4 ಲಕ್ಷ ರೂ. ಹಣ ಕೊಟ್ಟು ಬಚಾವ್ ಆಗಿದ್ದಾರೆ ಎಂದು ಆರೋಪಿಸಿಸಲಾಗಿದೆ.
ಈ ಸಂಬಂಧ ಪಿಎಸ್‌ಐ ಪತ್ನಿ ನೀಡಿದ ದೂರಿನ ಅಡಿಯಲ್ಲಿ ಕಳಸ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.