ಮೈಸೂರು: ಪತಿಯೊಬ್ಬ ವರದಕ್ಷಿಣೆಗಾಗಿ ತನ್ನ ಪತ್ನಿಯನ್ನೇ ಕೊಲೆಗೈದ ಘಟನೆ ನಗರದ ಜೆ.ಪಿ ನಗರದಲ್ಲಿ ನಡೆದಿದೆ.
ನಂದಿನಿ (25) ಮೃತ ಪತ್ನಿ. ಪತಿ ವಿಜಯ್ (30) ಕೊಲೆ ಆರೋಪಿ. ದಂಪತಿ 2 ವರ್ಷಗಳ ಹಿಂದಷ್ಟೇ ಮದುವೆ ಆಗಿದ್ದರು. ವರದಕ್ಷಿಣೆಗಾಗಿ ವಿಜಯ್ ಹಾಗೂ ಕುಟುಂಬಸ್ಥರು ನಂದಿನಿಗೆ ನಿತ್ಯ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: NSA ಅಜಿತ್ ದೋವಲ್ ನಿವಾಸಕ್ಕೆ ಅಕ್ರಮ ಪ್ರವೇಶ – ವ್ಯಕ್ತಿ ಬಂಧನ
Advertisement
Advertisement
ಆರೋಪಿಯು ನಿನ್ನೆ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಬಳಿಕ ಆಸ್ಪತ್ರೆಗೆ ದಾಖಲಿಸಿದ್ದಾನೆ. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ತ್ರಿವರ್ಣ ಧ್ವಜದ ಬಗ್ಗೆ ಗೌರವ ಇಲ್ಲದ ಸಂಘ ಪರಿವಾರದವರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್
Advertisement
ಆರೋಪಿಯು 11 ತಿಂಗಳ ಮಗು ಕೊಲೆಗೂ ಯತ್ನಿಸಿದ್ದಾನೆ ಎಂದು ನಂದಿನಿ ಕುಟುಂಬಸ್ಥರು ಆರೋಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.