ಕೋಲಾರ: ಪತಿ ಹಾಗೂ ಆತನ ಕುಟುಂಬಸ್ಥರಿಂದ ನಿರಂತರ ವರದಕ್ಷಿಣಿ ಕಿರುಕುಳದಿಂದಾಗಿ (Dowry Harassment) ಬೇಸತ್ತು ಮಹಿಳೆಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕೆಜಿಎಫ್‌ನ ಕಂಗನಲ್ಲೂರು ಗ್ರಾಮದ ಸೌಮ್ಯ (25) ಎಂದು ಗುರುತಿಸಲಾಗಿದೆ. ಭಾನುವಾರ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಯಲ್ಲಿರುವ ತಾಯಿಯ ಮನೆಗೆ ಬಂದಿದ್ದ ಸೌಮ್ಯ, ರಾತ್ರಿ ಮನೆಯಿಂದ ಹೊರ ಬಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಎರಡು ವರ್ಷದ ಹಿಂದೆ ಸುನಿಲ್ ಕುಮಾರ್ ಎಂಬಾತನ ಜೊತೆ ಸೌಮ್ಯ ಮದುವೆಯಾಗಿದ್ದಳು. ಇದನ್ನೂ ಓದಿ: ವರದಕ್ಷಿಣೆ ತರದ್ದಕ್ಕೆ ಗೃಹಿಣಿಯ ಕತ್ತು ಹಿಸುಕಿ ಕೊಲೆ
ಮೃತ ಮಹಿಳೆಯ ಪೋಷಕರು ಆಕೆಯ ಪತಿ ಸುನಿಲ್ ಕುಮಾರ್ ಹಾಗೂ ಕುಟುಂಬಸ್ಥರ ಕಿರುಕುಳದಿಂದ ಸೌಮ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸಿ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಸಂಬಂಧ ಬಂಗಾರಪೇಟೆ ಪೊಲೀಸರು (Police) ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: Hassan | ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ಸರ್ಕಾರಿ ಶಾಲೆ ಶಿಕ್ಷಕ – ಕಾರಣ ನಿಗೂಢ