BellaryDistrictsKarnatakaLatestLeading NewsMain Post

50 ಲಕ್ಷ ರೂ, 1 ಕೆಜಿ ಚಿನ್ನ ಕೊಟ್ಟರೂ ಹಣ ಬೇಕೆಂದ – ಹೈದರಾಬಾದ್ ವೈದ್ಯೆಗೆ ವಂಚನೆ

- ವಿಚ್ಛೇದನ ಪಡೆಯದೇ ಮತ್ತೊಂದು ಮದುವೆಯಾದ

ಬಳ್ಳಾರಿ: ಜಿಲ್ಲೆಯಲ್ಲಿ ಮತ್ತೊಂದು ಹೈಪ್ರೊಫೈಲ್ ವರದಕ್ಷಿಣೆ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಹೈದ್ರಾಬಾದ್ ಮೂಲದ ವೈದ್ಯೆಯನ್ನು ಮದುವೆಯಾಗಿ ಪ್ರತಿನಿತ್ಯ ವರದಕ್ಷಿಣೆ ಕಿರುಕುಳ ನೋಡುತ್ತಿದ್ದ ವ್ಯಕ್ತಿ ಇದೀಗ ಮತ್ತೊಂದು ವಿವಾಹವಾಗಿ ಮಹಿಳೆಗೆ ವಂಚಿಸಿದ್ದಾನೆ.

ಬಳ್ಳಾರಿ ಮೂಲದ ರಘುರಾಮ ರೆಡ್ಡಿ ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡು ಹೈದರಾಬಾದ್ ಮೂಲದ ಡಾಕ್ಟರ್ ಮೌನಿಕಾರಿಗೆ ಅವರನ್ನು 2019ರಲ್ಲಿ ಮದುವೆಯಾಗಿದ್ದನು. ಮದುವೆ ವೇಳೆ ಐವತ್ತು ಲಕ್ಷ ರೂಪಾಯಿ ವರದಕ್ಷಿಣೆ, ಒಂದು ಕೆ.ಜಿ. ಬಂಗಾರವನ್ನು ನೀಡಲಾಗಿತ್ತು. ಆದರೆ ಎರಡು ತಿಂಗಳು ಕೂಡ ಸಂಸಾರ ಮಾಡದ ರಘುರಾಮ ರೆಡ್ಡಿ ಹಣಕ್ಕಾಗಿ ಹೆಂಡತಿಗೆ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದನು. ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾಹು ಇನ್ನಿಲ್ಲ

ಆಸ್ಟ್ರೆಲಿಯಾದಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದ ರಘುರಾಮ ರೆಡ್ಡಿಗೆ ನಿಜವಾಗಿಯೂ ಯಾವುದೇ ಕೆಲಸವಿಲ್ಲರಲಿಲ್ಲ. ಹೀಗಾಗಿ ನಿತ್ಯ ಹಣಕ್ಕಾಗಿ ಪತ್ನಿಯನ್ನು ಪೀಡಿಸುತ್ತಿದ್ದನು. ಈ ಹಿನ್ನಲೆ ಮನೆಯಿಂದ ವೈದ್ಯೆ ಹೊರ ಬಂದಿದ್ದರು. ಆದರೆ ಇದೀಗ ಪತ್ನಿಯಿಂದ ವಿಚ್ಛೇದನ ಪಡೆಯದೇ ಮತ್ತೊಂದು ಮದುವೆಯಾಗಿದ್ದಾನೆ. ಈ ಬಗ್ಗೆ ಪ್ರಶ್ನಿಸಲು ಬಂದ ಮೊದಲ ಹೆಂಡತಿ, ಮತ್ತವರ ಮನೆಯವರ ಮೇಲೆ ಮಾರಾಕಾಸ್ತ್ರಗಳಿಂದ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾನೆ.

ಈ ಬಗ್ಗೆ ವೈದ್ಯೆ ನೀಡಿದ್ದ ದೂರಿನ ಮೇರೆಗೆ ಗಂಡ ರಘುರಾಮ ರೆಡ್ಡಿ, ತಂದೆ ನಾಗೀರೆಡ್ಡಿ, ಸಹೋದರ ಹರೀಶ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರು ಸೇರಿದಂತೆ ಕುಟುಂಬ ಏಳು ಜನರ ಮೇಲೆ ದೂರು ದಾಖಲಾಗಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಅಪಘಾತ – ಇನ್ಸ್‌ಪೆಕ್ಟರ್ ದಂಪತಿಯಿಂದ ಕಿರಿಕ್

Live Tv

Leave a Reply

Your email address will not be published.

Back to top button