ಮೈಸೂರು: ವರದಕ್ಷಿಣೆ (Dowry) ಕಿರುಕುಳ ವಿಚಾರಕ್ಕೆ ಹೆಂಡತಿಯ ಅಣ್ಣನನ್ನೇ (Brother) ಗಂಡ (Husband) ಚುಚ್ಚಿ ಕೊಲೆ ಮಾಡಿದ ಘಟನೆ ಮೈಸೂರಿನ (Mysuru) ಕುವೆಂಪು ನಗರದಲ್ಲಿ (Kuvempu Nagar) ನಡೆದಿದೆ.
ಅಭಿಷೇಕ್ (27) ಕೊಲೆಯಾದ ಅಣ್ಣ. ರವಿಚಂದ್ರ ಕೊಲೆ ಮಾಡಿದ ಆರೋಪಿ. ಬಾವ ಮತ್ತು ಬಾಮೈದ ನಡುವೆ ವರದಕ್ಷಿಣೆ ವಿಚಾರಕ್ಕೆ ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯ ಕಂಡಿದೆ. ರವಿಚಂದ್ರ ಜಿಮ್ ತೆರೆಯಲು 5 ಲಕ್ಷ ಹಣ ಕೇಳಿದ್ದ. ಪ್ರತಿನಿತ್ಯ ಪತ್ನಿ ವಿದ್ಯಾಗೆ ವರದಕ್ಷಿಣೆ ತರುವಂತೆ ರವಿಚಂದ್ರ ಕಿರುಕುಳ ನೀಡುತ್ತಿದ್ದ. ಗಲಾಟೆ ಮಾಡುತ್ತಿದ್ದ ವೇಳೆ ವಿದ್ಯಾ ಅಣ್ಣನಿಗೆ ಕರೆ ಮಾಡಿದ್ದಾಳೆ. ವಿದ್ಯಾ ಅಣ್ಣ ಅಭಿಷೇಕ್ ಮನೆಗೆ ಬರುತ್ತಿದ್ದಂತೆ ಬಾಗಿಲು ಹಾಕಿ ರವಿಚಂದ್ರ ಏಕಾಏಕಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಅಭಿಷೇಕ್ ತಾಯಿ ಭಾಗ್ಯಮ್ಮ, ತಂಗಿಗೂ ಹಲ್ಲೆ ನಡೆಸಿದ್ದಾನೆ. ಇದನ್ನೂ ಓದಿ: ಬಿಜೆಪಿಯ ಸಂವಿಧಾನ ವಿರೋಧಿ ನೀತಿಗಳಿಗೆ ಜನ ಎಚ್ಚರಿಕೆ ನೀಡಿದ್ದಾರೆ: ಹೆಚ್.ಸಿ.ಮಹದೇವಪ್ಪ
ವರದಕ್ಷಿಣೆ ಕೊಟ್ಟು ಪೋಷಕರು 4 ವರ್ಷಗಳ ಹಿಂದೆ ಅದ್ದೂರಿಯಾಗಿ ವಿದ್ಯಾ-ರವಿಚಂದ್ರ ಮದುವೆ ಮಾಡಿದ್ದರು. 6 ತಿಂಗಳ ಬಳಿಕ ಮತ್ತೆ ವರದಕ್ಷಿಣೆ ತರುವಂತೆ ರವಿಚಂದ್ರ ಕಿರುಕುಳ ನೀಡಿದ್ದಾನೆ. ಈ ಹಿನ್ನೆಲೆ ಸಾಕಷ್ಟು ಬಾರಿ ಕುವೆಂಪು ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರೂ ಸ್ಪಂದಿಸಲಿಲ್ಲ ಎಂದು ಆರೋಪಿಸಲಾಗಿದೆ. ಕುವೆಂಪು ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಸಚಿವರ ಮೌಲ್ಯಮಾಪನದ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಎಂ.ಬಿ ಪಾಟೀಲ್