ಬೆಂಗಳೂರು: ಲೋಕಾಯುಕ್ತ (Lokayukta) ಐಜಿಪಿಯಾಗಿ (IGP) ಎ.ಸುಬ್ರಹ್ಮಣ್ಯೇಶ್ವರ ರಾವ್ (A.Subramanyeswara Rao) ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸುಬ್ರಹ್ಮಣ್ಯೇಶ್ವರ ರಾವ್ ಅವರು ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದರು. ಈಗ ಅವರನ್ನು ಲೋಕಾಯುಕ್ತ ಐಜಿಪಿಯಾಗಿ ರಾಜ್ಯ ಸರ್ಕಾರ ವರ್ಗಾಯಿಸಿದೆ. ರಾವ್ ಅವರು ಈ ಹಿಂದೆ ಸಿಬಿಐನಲ್ಲೂ ಕರ್ತವ್ಯ ನಿರ್ವಹಿಸಿದ್ದರು. ಇದನ್ನೂ ಓದಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಬಗ್ಗೆ ಸರ್ಕಾರಕ್ಕೆ, ಸಿಎಂಗೆ ಬದ್ಧತೆಯಿಲ್ಲ: ಡಿ.ಕೆ.ಶಿವಕುಮಾರ್
ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ACB) ಈಚೆಗೆ ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತು. ಆ ಮೂಲಕ ಹಲ್ಲಿಲ್ಲದ ಹುಲಿಯಂತಾಗಿದ್ದ ಲೋಕಾಯುಕ್ತಕ್ಕೆ ಬಲ ನೀಡಿತ್ತು.
ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಹೈಕೋರ್ಟ್ ವರ್ಗಾಯಿಸಲು ಆದೇಶಿಸಿತ್ತು. ಹೈಕೋರ್ಟ್ ಕ್ರಮಕ್ಕೆ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಸೇರಿದಂತೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ನಮ್ಮ ಪಕ್ಷದಲ್ಲಿ ಅಸಮಾಧಾನ ಇರೋದು ನಿಜ- JDS ಎಂಎಲ್‌ಸಿ ಅಚ್ಚರಿ ಹೇಳಿಕೆ