-ಹಿಂದುಳಿದ ಹಣೆಪಟ್ಟಿ ಹೋಗಲಾಡಿಸುವುದೇ ನನ್ನ ಗುರಿ: ಡಾ.ಅಜಯ್ ಸಿಂಗ್
ಕಲಬುರಗಿ: ಕಣ್ಣಿಗೆ ಕಾಣುವಂತೆ ಬದಲಾವಣೆಯ ಮ್ಯಾಕ್ರೋ ಯೋಜನೆಗಳನ್ನು ಪ್ರದೇಶದಲ್ಲಿ ಅನುಷ್ಠಾನಕ್ಕೆ ತರುವ ಮೂಲಕ ಕಲ್ಯಾಣ ಕರ್ನಾಟಕ (Kalyana Karnataka) ಪ್ರದೇಶಕ್ಕೆ ಅಂಟಿಕೊಂಡಿರುವ ಹಿಂದುಳಿದ ಎಂಬ ಹಣೆಪಟ್ಟಿಯನ್ನು ಹೋಗಲಾಡಿಸುವುದೇ ತಮ್ಮ ಮೊದಲ ಗುರಿ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ (Dr Ajay Singh) ಹೇಳಿದ್ದಾರೆ.
Advertisement
ಸೋಮವಾರ ಮಂಡಳಿ ಕಚೇರಿಯಲ್ಲಿ ನೂತನ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಪ್ರದೇಶದಲ್ಲಿನ ಸಾಕ್ಷರತೆ ಪ್ರಮಾಣ ಹೆಚ್ಚಿಸುವುದು, ಅಪೌಷ್ಟಿಕತೆ ನಿವಾರಣೆ, ತಾಯಿ-ಮಕ್ಕಳ ಮರಣ ಪ್ರಮಾಣ ತಗ್ಗಿಸುವುದರ ಜೊತೆಗೆ ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಸಾಧಿಸುವುದು, ಮೂಲಸೌಕರ್ಯ ಬಲಪಡಿಸುವುದು ತಮ್ಮ ಮೊದಲ ಆದ್ಯತೆಯಾಗಿರಲಿದೆ ಎಂದರು. ಇದನ್ನೂ ಓದಿ: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ NEP ರದ್ದು: ಸಿದ್ದರಾಮಯ್ಯ ಘೋಷಣೆ
Advertisement
Advertisement
ರಾಜ್ಯದ ಈ ಹಿಂದಿನ 175 ತಾಲೂಕುಗಳಲ್ಲಿ 114 ತಾಲೂಕು ಹಿಂದುಳಿದ ತಾಲೂಕುಗಳಾಗಿವೆ. ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇರಿರುವುದು 39 ತಾಲೂಕು ಎಂದು ಡಾ.ಡಿ.ಎಂ.ನಂಜುಂಡಪ್ಪ ಅವರ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಪ್ರದೇಶದ ಪ್ರತಿ ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಟ್ರಾಮಾ ಸೆಂಟರ್ ಸ್ಥಾಪನೆ ಮಾಡಲಾಗುವುದು. ರಾಜ್ಯದ ಸಾಕ್ಷರತೆ ಪ್ರಮಾಣ 75.36% ಇದ್ದರೆ, ಕಲ್ಯಾಣ ಕರ್ನಾಟಕ ಭಾಗದ ಪ್ರಮಾಣ 64% ಇದೆ. ಈ ವ್ಯತ್ಯಾಸವನ್ನು ಸರಿದೂಗಿಸಲು ಪ್ರತಿ ಹೋಬಳಿವಾರು ಪದವಿ ಪೂರ್ವ ಕಾಲೇಜುಗಳನ್ನು ಸ್ಥಾಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ತಮಿಳುನಾಡು ಇಷ್ಟು ತುರ್ತಾಗಿ ಸುಪ್ರೀಂ ಮೊರೆ ಹೋಗುವ ಅಗತ್ಯ ಇರಲಿಲ್ಲ: ಡಿಕೆಶಿ
Advertisement
ಮಂಡಳಿಗೆ ಸರ್ಕಾರ ನೀಡುವ ಅನುದಾನ ಖರ್ಚು ಮಾಡದಿರುವುದು ಮಂಡಳಿಗೆ ದೊಡ್ಡ ಸವಾಲು ಮತ್ತು ಆಪಾದನೆ ಇದೆ. ಇದನ್ನು ತಮ್ಮ ಅವಧಿಯಲ್ಲಿ ಮುಂದುವರೆಯಲು ಬಿಡುವುದಿಲ್ಲ. ಮಂಡಳಿಗೆ ಅಧಿಕಾರಿ, ಸಿಬ್ಬಂದಿ, ಎಂಜಿನಿಯರ್ ಕೊರತೆ ಇರುವುದು ಗಮನಕ್ಕೆ ಬಂದಿದೆ. ಹಣಕಾಸು ಇಲಾಖೆಯ ಅನುಮೋದನೆ ಪಡೆದು ಸಿಬ್ಬಂದಿ ಭರ್ತಿ ಮಾಡಲಾಗುವುದು. ಮುಂದೆ ಅನುದಾನವನ್ನು ಸಹ ಕಾಲಮಿತಿಯಲ್ಲಿ ಖರ್ಚು ಮಾಡಲಾಗುವುದು ಎಂದರು. ಇದನ್ನೂ ಓದಿ: ಚಿರತೆಗೆ 6ರ ಬಾಲಕಿ ಬಲಿ – ತಿರುಮಲ ಬೆಟ್ಟ ಹತ್ತಲು ಹೊಸ ರೂಲ್ಸ್
ಮಂಡಳಿಗೆ ಅಜಯ್ ಸಿಂಗ್ ಸುಪ್ರೀಂ, ವಿವೇಚನಾ ಅನುದಾನ ಹೆಚ್ಚಳ:
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಡಳಿಯ ಅಧ್ಯಕ್ಷರಿಗೆ ಇದ್ದ 96%ರಷ್ಟು ಅನುದಾನ ಹಂಚಿಕೆ ಅಧಿಕಾರವನ್ನು 26%ಕ್ಕೆ ಇಳಿಸಿತ್ತು. ನಮ್ಮ ಸರ್ಕಾರವು ಅಧ್ಯಕ್ಷರ ವಿವೇಚನಾ ನಿಧಿ ಬಳಕೆ 96%ಕ್ಕೆ ಮತ್ತೆ ಹೆಚ್ಚಿಸುವ ಮೂಲಕ ಮಂಡಳಿಗೆ ಬಲ ನೀಡಿದೆ. ಹೀಗಾಗಿ ಡಾ.ಅಜಯ್ ಸಿಂಗ್ ಅವರೇ ಮಂಡಳಿಗೆ ಸುಪ್ರೀಂ ಎಂದು ಹೇಳಿದರು. ಇದನ್ನೂ ಓದಿ: ಸ್ವಾತಂತ್ರ್ಯೋತ್ಸವಕ್ಕೆ ಗುಡ್ ನ್ಯೂಸ್ – ಆ.15 ರಿಂದ ಕೆಜಿ ಟೊಮೆಟೋ 50 ರೂ.ಗೆ ಮಾರಾಟ
ಈ ಸಂದರ್ಭದಲ್ಲಿ ಶಾಸಕರು ಮತ್ತು ಮಂಡಳಿಯ ನೂತನ ಸದಸ್ಯರಾದ ಬಿ.ಆರ್.ಪಾಟೀಲ, ತಿಪ್ಪಣಪ್ಪ ಕಮಕನೂರ, ಅರವಿಂದ ಅರಳಿ ಮತ್ತು ವಿಧಾನಸಭೆ ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ ಪಾಟೀಲ ಹುಮನಾಬಾದ್, ಅರವಿಂದ ಅರಳಿ, ಮಂಡಳಿ ಕಾರ್ಯದರ್ಶಿ ಅನಿರುದ್ಧ ಪಿ.ಶ್ರವಣ ಸೇರಿದಂತೆ ಅನೇಕ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: 6 ತಿಂಗಳಲ್ಲಿ ಬಿಜೆಪಿಯವರು ಸರ್ಕಾರ ಮಾಡಿ ತೋರಿಸಲಿ: ಪ್ರಿಯಾಂಕ್ ಖರ್ಗೆ ಸವಾಲು
ಇದಕ್ಕೂ ಮುನ್ನ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಾ.ಅಜಯ್ ಸಿಂಗ್ ಅವರಿಗೆ ಮಂಡಳಿ ಕಾರ್ಯದರ್ಶಿ ಅನಿರುದ್ಧ್ ಶ್ರವಣ ಪಿ. ಅವರು ಶಿಷ್ಟಾಚಾರದಂತೆ ನೂತನ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಶುಭ ಕೋರಿದರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮುಖಂಡರು ನೂತನ ಅಧ್ಯಕ್ಷರಿಗೆ ಶುಭ ಕೋರಿದರು. ಇದನ್ನೂ ಓದಿ: ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ – ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ
Web Stories