ಬೆಂಗಳೂರು: ಚೈತ್ರಾ ಕುಂದಾಪುರ (Chaitra Kundapur) ಮೂರ್ಛೆ ರೋಗ ಇಲ್ಲ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (BMCRI) ಪ್ರಾಂಶುಪಾಲೆ ಆಸೀಮಾ ಬಾನು ಹೇಳಿದ್ದಾರೆ.
ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಯ (Victoria Hospital) ವೈದ್ಯರು ಪರೀಕ್ಷೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಟಿ ಸ್ಕ್ಯಾನ್, ಇಸಿಜಿ ಎಲ್ಲವೂ ನಾರ್ಮಲ್ ಅಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದರು.
ಇಂದು ಬೆಳಗ್ಗೆ ಸಿಸಿಬಿ ಕಚೇರಿಯಿಂದ (CCB Office) ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಚೈತ್ರಾಳ ಬಾಯಲ್ಲಿ ನೊರೆ ಬರುತ್ತಿತ್ತು. ಹೀಗಾಗಿ ಮೂರ್ಛೆ ರೋಗ ಇದ್ದಿರಬಹುದು ಎಂಬ ಶಂಕೆ ಇತ್ತು. ಆದರೆ ಚೈತ್ರಾಳನ್ನು ಪರೀಕ್ಷೆ ಮಾಡಿದ ವೈದ್ಯರು ಆಕೆಗೆ ಮೂರ್ಛೆ ರೋಗ ಇಲ್ಲ ಎಂದು ದೃಢಪಡಿಸಿದ್ದಾರೆ. ಇದನ್ನೂ ಓದಿ: ಚೀನಾದ ರಕ್ಷಣಾ ಸಚಿವ ನಾಪತ್ತೆ
ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಚೈತ್ರಾಳನ್ನು ಸಿಸಿಬಿ ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದು ಕಸ್ಟಡಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ (CCB Office) ವಿಚಾರಣೆಗೆ ಕರೆತಂದಿದ್ದಾರೆ. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಳು.
Web Stories