ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (Jayadeva Hospital) ನಿರ್ದೇಶಕರಾಗಿರುವ ಡಾ.ಸಿಎನ್ ಮಂಜುನಾಥ್ (Dr. CN Manjunath) ಅವರ ಸೇವಾವಧಿಯನ್ನು ಮುಂದಿನ 6 ತಿಂಗಳವರೆಗೆ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
Advertisement
ಮಂಜುನಾಥ್ ಅವರ ನಿರ್ದೇಶಕ ಸ್ಥಾನದ ಅವಧಿ ಕಳೆದ ವರ್ಷವೇ ಮುಕ್ತಾಯವಾಗಿತ್ತು. ಬಳಿಕ ಹಿಂದಿನ ಬಿಜೆಪಿ (BJP) ಸರ್ಕಾರ ಅವರನ್ನು 1 ವರ್ಷಗಳ ಕಾಲ ನಿರ್ದೇಶಕರಾಗಿ ಮುಂದುವರಿಸಲು ನಿರ್ಧರಿಸಿತ್ತು. ಇದೀಗ ಮತ್ತೆ ಅವರನ್ನು ಮುಂದಿನ 6 ತಿಂಗಳುಗಳ ಕಾಲ ಸೇವಾವಧಿಯನ್ನು ಮುಂದುವರಿಸಲು ಕಾಂಗ್ರೆಸ್ ಸರ್ಕಾರ (Congress) ತೀರ್ಮಾನಿಸಿದೆ. ಇದನ್ನೂ ಓದಿ: ಎನ್‌ಡಿಎ ಜೊತೆ ಮೈತ್ರಿಗೆ ಜೆಡಿಎಸ್ ರೆಡಿ – ಬಿಜೆಪಿ ಪ್ಲಾನ್ ಏನು?
Advertisement
Advertisement
ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಆಡಳಿತ ಮಂಡಳಿಯ ಸಭೆ ನಡೆಯಿತು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಸಂಸ್ಥೆಯ ನಿರ್ದೇಶಕ ಡಾ.ಸಿಎನ್ ಮಂಜುನಾಥ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋದಿ ವಿರೋಧಿಗಳ ರಣಕಹಳೆ – ಯಾವೆಲ್ಲ ಪಕ್ಷಗಳು ಭಾಗಿ ಆಗುತ್ತಿವೆ?
Advertisement
Web Stories