ತುಮಕೂರು: ನಾನು ಸಿಎಂ ಆಗಬೇಕು ಎಂದು ಕೂಗ್ಬೇಡಿ, ಒಳ ಸಂಚು ಶುರುವಾಗುತ್ತದೆ ಎಂದು ಅಭಿಮಾನಿಗಳಿಗೆ ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ ತಾಕೀತು ಮಾಡಿದರು.
ಕಾಂಗ್ರೆಸ್‌ನಲ್ಲಿ ಮತ್ತೆ ದಲಿತ ಸಿಎಂ ವಿಚಾರ ಮುನ್ನೆಲೆಗೆ ಬಂದಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಪಾಲ್ಗೊಂಡಿದ್ದ ಕೊರಟಗೆರೆಯ ಚಿಕ್ಕಗುಂಡಗಲ್ ಗ್ರಾಮದ ಕಾರ್ಯಕ್ರಮದಲ್ಲಿ ನಡೆದಿದೆ.
Advertisement
Advertisement
ಈ ವೇಳೆ ಮಾತನಾಡಿದ ಅವರು, ಸಿಎಂ ವಿಚಾರ ಎತ್ತಿದರೆ ನನಗೆ ಬಹಳ ಕಷ್ಟ ಆಗುತ್ತದೆ. ನೀವು ಇಲ್ಲಿ ಹೇಳೋಕೆ ಪ್ರಾರಂಭಿಸಿದರೆ. ಅಲ್ಲಿ ನನಗೆ ಹೊಡೆತ ಬೀಳೋಕೆ ಶುರುವಾಗುತ್ತದೆ. ನೀವು ಮನಸ್ಸಿನಲ್ಲಿ ಬೇಕಾದರೇ ಹೇಳಿಕೊಳ್ಳಿ ಎಂದ ಅವರು, ನಿಮ್ಮ ಆಶೀರ್ವಾದ ಹಾಗೂ ಪರಮಾತ್ಮನ ಇಚ್ಛೆ ಇದ್ದರೆ ನಾನು ಮುಖ್ಯಮಂತ್ರಿ ಆಗುತ್ತೇನೆ. ಮುಖ್ಯಮಂತ್ರಿ ಸ್ಥಾನ ಯಾರಿಗೆ ನೀಡಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನಿಸುತ್ತಾರೆ ಎಂದರು. ಇದನ್ನೂ ಓದಿ: ಸೋಂಕಿನಿಂದ ಗುಣಮುಖರಾಗಿ 3 ತಿಂಗಳ ನಂತರ ಲಸಿಕೆ, ಬೂಸ್ಟರ್ ಡೋಸ್: ಕೇಂದ್ರ