ಹೊಸ ವರ್ಷಾಚರಣೆಗೆ ಬ್ರಿಗೇಡ್ ರೋಡ್, ಎಂ.ಜಿ.ರೋಡ್‍ನಲ್ಲಿ ಯಾವುದೇ ನಿರ್ಬಂಧವಿಲ್ಲ: ಪರಮೇಶ್ವರ್

Public TV
1 Min Read
G PARAMESHWAR

ಬೆಂಗಳೂರು: ಹೊಸ ವರ್ಷ ಆಚರಣೆಗೆ ಬ್ರಿಗೇಡ್ ರೋಡ್ ಹಾಗೂ ಎಂ.ಜಿ.ರೋಡ್‍ನಲ್ಲಿ ಯಾವುದೇ ನಿರ್ಬಂಧ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G. Parameshwar) ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ (Vidhana Soudha) ಹೊಸ ವರ್ಷ (New year) ಆಚರಣೆಯ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಹೊಸ ವರ್ಷ ಹಾಗೂ ಕ್ರಿಸ್‍ಮಸ್ (Christmas) ಆಚರಣೆಗೆ ಸ್ವಲ್ಪ ನಿಯಮಗಳನ್ನು ಬದಲಾವಣೆ ಮಾಡಲಾಗುತ್ತದೆ. ಯಾವುದೇ ನಿರ್ಬಂಧ ಇಲ್ಲ. ಜನರು ಕೋವಿಡ್ (Covid-19) ನಿಯಮಗಳನ್ನು ಪಾಲಿಸಬೇಕು. ಆರೋಗ್ಯ ಇಲಾಖೆ ಸೂಚನೆಯಂತೆ 60 ವರ್ಷ ಮೇಲ್ಪಟ್ಟವರು ಮಾಸ್ಕ್ ಹಾಕಬೇಕು. ಮೆಟ್ರೋ ವಿಚಾರದಲ್ಲಿ ಸ್ವಲ್ಪ ಬದಲಾವಣೆಗೆ ಸೂಚಿಸಿದ್ದೇವೆ. ಟ್ರಿನಿಟಿ ಸರ್ಕಲ್‍ನಿಂದಲೂ, ಅನಿಲ್ ಕುಂಬ್ಳೆ ಸರ್ಕಲ್‍ನಿಂದಲೂ ಮೆಟ್ರೋಗೆ ಹೋಗಲು ಅನುಕೂಲ ಕಲ್ಪಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ, ಸಚಿವರು ಜೆಟ್‍ನಲ್ಲಿ, ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ.. ಇದೇನಾ ನಿಮ್ಮ ಸಮಾಜವಾದ?: ಅಶೋಕ್ ಕಿಡಿ

ಹೊಸ ವರ್ಷವನ್ನು ಇಡೀ ರಾಜ್ಯದಲ್ಲಿ ಯುವಕರು ಆಚರಣೆ ಮಾಡುತ್ತಾರೆ. ಬೆಂಗಳೂರಿನಲ್ಲಿ ಎಂ.ಜಿ ರೋಡ್, ಬ್ರಿಗೇಡ್ ರೋಡ್ ಹಾಗೂ ಕಮರ್ಷಿಯಲ್ ಸ್ಟ್ರೀಟ್‍ನಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಜನ ಸೇರಿ ಆಚರಣೆ ಮಾಡುತ್ತಾರೆ. ಅನೇಕ ಸಂದರ್ಭಗಳಲ್ಲಿ ಕೆಲವು ಘಟನೆಗಳು ಸಹ ನಡೆದಿದೆ. ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ನಡೆಯಬಾರದು ಎಂದು ಸೂಚಿಸಲಾಗಿದೆ. ಈ ಬಗ್ಗೆ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲು ಏಜೆನ್ಸಿಗಳಿಗೆ ಸೂಚನೆ ನೀಡಲಾಗಿದೆ. ಇಲಾಖೆಗಳಲ್ಲಿ ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಿ ಸೂಚನೆ ಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.

ಬೇರೆ ಬೇರೆ ದೃಷ್ಟಿ ಇಟ್ಟುಕೊಂಡು ಹೊರಗಿನ ಜನ ತೊಂದರೆ ಮಾಡಬಹುದು, ಈ ಬಗ್ಗೆ ಸಹ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಯಾರು ಅನಾವಶ್ಯಕವಾಗಿ ಟೆಂಟ್‍ಗಳನ್ನು ಹಾಕಿಕೊಂಡು ಲಿಕ್ಕರ್ ಮಾರಾಟ ಮಾಡಬಾರದು ಎಂದು ಇದೇ ವೇಳೆ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರದಲ್ಲಿ ಮಗುವಿಗೆ ಕೊರೊನಾ ಪಾಸಿಟಿವ್

Share This Article