ಬೆಂಗಳೂರು: ಗೃಹ ಸಚಿವ ಸ್ಥಾನಕ್ಕೆ ಡಾ.ಜಿ. ಪರಮೇಶ್ವರ್ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದೆ.
ಪರಮೇಶ್ವರ್ ನೀಡಿರುವ ರಾಜೀನಾಮೆ ಅಂಗೀಕರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲ ವಜೂಭಾಯ್ ವಾಲಾರಿಗೆ ಶಿಫಾರಸು ಮಾಡಿದ್ದಾರೆ. ಇದಕ್ಕೆ ಕೂಡ್ಲೇ ಸ್ಪಂದಿಸಿದ ರಾಜ್ಯಪಾಲರು, ಶುಕ್ರವಾರ ಸಂಜೆಯೇ ಪರಮೇಶ್ವರ್ ರಾಜೀನಾಮೆ ಅಂಗೀಕರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ್ ಅವರನ್ನು ಮುಂದುವರಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಸಚಿವ ಸ್ಥಾನ ತೊರೆಯುವಂತೆ ಸೂಚಿಸಿತ್ತು.
ಹೀಗಾಗಿ ಇದೇ ತಿಂಗಳ 1 ರಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದ ಪರಮೇಶ್ವರ್, ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಆದ್ರೆ, ವಿಧಾನಮಂಡಲ ಅಧಿವೇಶನ ಮುಗಿಯುವವರೆಗೆ ಗೃಹಮಂತ್ರಿ ಸ್ಥಾನದಲ್ಲಿ ಮಂದುವರಿಯುವಂತೆ ಸಿಎಂ ಸೂಚಿಸಿದ್ದರು. ಇದೀಗ ಪರಮೇಶ್ವರ್ ರಿಂದ ತೆರವಾಗುವ ಸ್ಥಾನಕ್ಕಾಗಿ ಕಾಂಗ್ರೆಸ್‍ನಲ್ಲಿ ಭಾರೀ ಪೈಪೋಟಿ ಏರ್ಪಟ್ಟಿದೆ.