ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಈಗ ವಿಶ್ವಾದ್ಯಂತ ಸದ್ದು ಮಾಡುತ್ತಿದೆ. ಇಡೀ ಭಾರತ ಚಿತ್ರರಂಗ ಈಗ ಸ್ಯಾಂಡಲ್‍ವುಡ್‍ನತ್ತ ತಿರುಗಿ ನೋಡುತ್ತಿದ್ದು, ಯಶ್ ಹಾಗೂ ಕೆಜಿಎಫ್ ಚಿತ್ರತಂಡಕ್ಕೆ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ.
ಕೆಜಿಎಫ್ ಚಿತ್ರ ಒಟ್ಟು 5 ಭಾಷೆಗಳಲ್ಲಿ ಬಿಡುಗಡೆಯಾಗಿ 5 ಭಾಷೆಯಲ್ಲೂ ಸಾಕಷ್ಟು ಸದ್ದು ಮಾಡುತ್ತಿದೆ. ಬೇರೆ ಚಿತ್ರರಂಗದವರು ಯಶ್ ಹಾಗೂ ಕೆಜಿಎಫ್ ಚಿತ್ರತಂಡಕ್ಕೆ ಮೆಚ್ಚುಗೆಯ ಮಾತನಾಡಿ ಶುಭಾಶಯ ತಿಳಿಸುತ್ತಿದ್ದಾರೆ.
Advertisement
ಕನ್ನಡದ ಸಿನೆಮಾವೊಂದು ಕರ್ನಾಟಕವನ್ನು ದಾಟಿ ದೇಶದುದ್ದಗಲಕ್ಕೂ ಹಾಗೂ ವಿದೇಶದಲ್ಲೂ ಜನಮನವನ್ನು ಗೆಲ್ಲುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ವಿಚಾರ. ನಮ್ಮ ಕನ್ನಡ ಚಿತ್ರರಂಗ ಬೇರಾರಿಗೂ ಕಮ್ಮಿಯಿಲ್ಲ ಎಂದು ಅವುಗಳ ಯಶಸ್ಸಿನ ಮೂಲಕವೇ ಸಾರುವ ಸಮಯ ಬಂದಿದೆ. #KGF ತಂಡಕ್ಕೆ ನನ್ನ ಹೃತ್ಪೂರ್ವಕ ಶುಭಾಶಯಗಳು!
— Dr. G Parameshwara (@DrParameshwara) December 24, 2018
Advertisement
ಡಿಸಿಎಂ ಪರಮೇಶ್ವರ್ ಕೂಡ ಕೆಜಿಎಫ್ ಬಗ್ಗೆ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. “ಕನ್ನಡದ ಸಿನಿಮಾವೊಂದು ಕರ್ನಾಟಕವನ್ನು ದಾಟಿ ದೇಶದ ಉದ್ದಗಲಕ್ಕೂ ಹಾಗೂ ವಿದೇಶದಲ್ಲೂ ಜನಮನವನ್ನು ಗೆಲ್ಲುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ವಿಚಾರ. ನಮ್ಮ ಕನ್ನಡ ಚಿತ್ರರಂಗ ಬೇರಾರಿಗೂ ಕಮ್ಮಿಯಿಲ್ಲ ಎಂದು ಅವುಗಳ ಯಶಸ್ಸಿನ ಮೂಲಕವೇ ಸಾರುವ ಸಮಯ ಬಂದಿದೆ. ಕೆಜಿಎಫ್ ತಂಡಕ್ಕೆ ನನ್ನ ಹೃತ್ಪೂರ್ವಕ ಶುಭಾಶಯಗಳು” ಟ್ವೀಟ್ ಮಾಡಿದ್ದಾರೆ.
Advertisement
ಕೆಜಿಎಫ್ ಸಿನಿಮಾ ಒಟ್ಟು 5 ಭಾಷೆಯಲ್ಲಿ ಶುಕ್ರವಾರ ಬರೋಬ್ಬರಿ 2000ಕ್ಕೂ ಅಧಿಕ ಚಿತ್ರ ಮಂದಿರಗಳಲ್ಲಿ ತೆರೆಕಂಡಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಮೊದಲ ದಿನವೇ ಬರೋಬ್ಬರಿ ಸುಮಾರು 30 ಕೋಟಿ ಹಣವನ್ನು ಬಾಕ್ಸ್ ಆಫೀಸ್‍ನಲ್ಲಿ ತುಂಬಿಸಿಕೊಂಡಿದ್ದು, ಕೇವಲ ಮೂರು ದಿನದಲ್ಲಿ 60 ಕೋಟಿ ಗೂ ಹೆಚ್ಚು ಕಲೆಕ್ಷನ್ ಆಗಿದೆ.
Advertisement
ಕೆಜಿಎಫ್ ಚಿತ್ರಕ್ಕೆ ಶುಭ ಕೋರಿದ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಾ. ಜಿ ಪರಮೆಶ್ವೇರ್ ರವರಿಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ಹಾರೈಕೆ ನಮ್ಮ ಮುಂದಿನ ಪ್ರಯತ್ನಗಳಿಗೆ ಹುಮ್ಮಸ್ಸು ತಂದಿದೆ ಸರ್. https://t.co/j7Ayava8Sq
— Yash (@TheNameIsYash) December 24, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv