ಓಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದ ನಾಲ್ವರಿಗೆ ಕೊರೊನಾ ಪಾಸಿಟಿವ್: ಸುಧಾಕರ್

Advertisements

ಯಾರು ಕೂಡ ಆತಂಕಕ್ಕೆ ಒಳಗಾಗಬೇಡಿ

ಬೆಂಗಳೂರು: ದಕ್ಷಿಣ ಆಫ್ರಿಕಾ ಮೂಲದ ಒಬ್ಬರಿಗೆ ಮತ್ತು ಬೆಂಗಳೂರಿನ ವೈದ್ಯರೊಬ್ಬರಿಗೆ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದ್ದು ಅವರೊಂದಿಗೆ ಪ್ರಾಥಮಿಕ ಸಂಪರ್ಕಹೊಂದಿದ್ದ ಇತರ 4 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

Advertisements

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಫ್ರಿಕಾ ಮೂಲದಿಂದ ಬಂದವರಿಗೆ ಪ್ರಯಾಣದ ಹಿನ್ನೆಲೆ ಇದ್ದು, ಅವರಲ್ಲಿ ಓಮಿಕ್ರಾನ್ ಪತ್ತೆಯಾಗಿದೆ. ಆದರೆ ಬೆಂಗಳೂರಿನ ವೈದ್ಯರಿಗೆ ಪ್ರಯಾಣ ಹಿನ್ನೆಲೆ ಇಲ್ಲ. ಆದರೂ ಪಾಸಿಟಿವ್ ಬಂದಿದೆ. ಈಗಾಗಲೇ ಇಬ್ಬರು ಓಮಿಕ್ರಾನ್ ಸೋಂಕಿತರು ಮತ್ತು ಅವರ ಸಂಪರ್ಕದಲ್ಲಿದ್ದ 4 ಜನರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ ಅವರೆಲ್ಲರೂ ಕೂಡ ಐಸೋಲೇಟ್ ಆಗಿದ್ದು, ಸೂಕ್ತ ಚಿಕಿತ್ಸೆ ಕೊಡಲಾಗುತ್ತಿದೆ. ಯಾವುದೇ ಸಮಸ್ಯೆ ಇಲ್ಲ. ರೋಗದ ಲಕ್ಷಣಗಳು ಅತಿಯಾಗಿ ಕಾಣಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕೆ ಕಾಲಿಟ್ಟ ಡೆಡ್ಲಿ ವೈರಸ್‌- ಬೆಂಗಳೂರಿನ ಇಬ್ಬರಲ್ಲಿ ಓಮಿಕ್ರಾನ್‌ ಪತ್ತೆ!

Advertisements

ರಾಜ್ಯದಲ್ಲಿ ನಮ್ಮ ಟೆಸ್ಟಿಂಗ್ ಮತ್ತು ಟ್ರೇಸಿಂಗ್ ಹೆಚ್ಚು ಮಾಡಲು ಹೇಳಿದ್ದೇನೆ. ಹೊರ ದೇಶದಿಂದ ಬಂದವರ ಮೇಲೆ ನಿಗಾ ಇಡಲಾಗುತ್ತಿದೆ. ಸಾರ್ವಜನಿಕರು ಮಾಸ್ಕ್‌ಗಳನ್ನು ಕಡ್ಡಾಯವಾಗಿ ಹಾಕಿ, ಲಸಿಕೆ ತೆಗೆದುಕೊಳ್ಳಿ. ಅನಗತ್ಯ ಸಮಾರಂಭ, ಗುಂಪು ಸೇರುವುದನ್ನು ತಡೆಗಟ್ಟಿ. ಯಾರು ಕೂಡ ಆತಂಕಕ್ಕೆ ಒಳಗಾಗಬೇಡಿ. ಈಗಿರುವ ಸೋಂಕಿತರಿಗೆ ಗಂಭೀರ ಸಮಸ್ಯೆ ಇಲ್ಲ. ಡೆಲ್ಟಾ ವೈರಸ್‌ನಂತೆ ಯಾವುದೇ ಸಮಸ್ಯೆ ಕಂಡು ಬಂದಿಲ್ಲ. ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಿ. ಪ್ರತಿದಿನ ಟೆಸ್ಟ್‌ಗಳ ಸಂಖ್ಯೆ ಹೆಚ್ಚಿಸುತ್ತೇವೆ. ಮುಖ್ಯಮಂತ್ರಿಗಳು ನಾಳೆ ಬಂದ ಬಳಿಕ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಪತ್ತೆಯಾದ ಓಮಿಕ್ರಾನ್ ಸೋಂಕಿತರನ್ನು ಐಸೋಲೇಟ್ ಮಾಡಲಾಗಿದೆ: ಅಶ್ವಥ್ ನಾರಾಯಣ್

Advertisements

ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ತಯಾರಿ ನಡೆಸಿದೆ. ಯಾರೂ ಆತಂಕ ಪಡಬೇಡಿ. ಅನಗತ್ಯ ಗೊಂದಲ, ಊಹಪೋಹಕ್ಕೆ ಕಿವಿಗೊಡಬೇಡಿ. ಈಗ ಪಾಸಿಟಿವ್ ಬಂದಿರುವ ವ್ಯಕ್ತಿಯ ವೈಯಕ್ತಿಕ ವಿಚಾರ ನಾವು ರಿವೀಲ್ ಮಾಡುವುದಿಲ್ಲ. ಎರಡು ಡೋಸ್ ಲಸಿಕೆಯನ್ನು ಅವರು ಪಡೆದುಕೊಂಡಿದ್ದರು. ಆದರೂ ಪಾಸಿಟಿವ್ ಬಂದಿದೆ. ಹಾಗಾಗಿ ಸಾರ್ವಜನಿಕರು ಎಚ್ಚರಿಕೆ ವಹಿಸಿ ಎಂದು ಮನವಿ ಮಾಡಿದ್ದಾರೆ.

Advertisements
Exit mobile version