ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಹಾಗೂ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದಲ್ಲಿ ಅಂಬುಲೆನ್ಸ್ ಸಮಸ್ಯೆಯ ಬಗ್ಗೆ ಟ್ವೀಟ್ ಮೂಲಕ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
Advertisement
ಟ್ವೀಟ್‍ನಲ್ಲಿ ಏನಿದೆ?
ತಾಂತ್ರಿಕ ಸಮಸ್ಯೆಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಹಾಗೂ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: ರಾಜ್ಯದಲ್ಲಿ ಅಂಬುಲೆನ್ಸ್ ಸೇವೆ ವ್ಯತ್ಯಯ – ನಿನ್ನೆ ಸಂಜೆಯಿಂದ ಕರೆ ಸ್ವೀಕರಿಸದ 108
Advertisement
Advertisement
ಸ್ವಯಂಚಾಲಿತ ಕಾಲ್ ಸೆಂಟರ್ ವ್ಯವಸ್ಥೆ ಮೂಲಕ ಕರೆಗಳ ವಿತರಣೆಗೆ ಪರ್ಯಾಯವಾಗಿ ಮ್ಯಾನುವಲ್ ಐಡಿಗಳನ್ನು ಸೃಷ್ಟಿಸಿ ಅಂಬುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತಿದ್ದು, ಇದರೊಂದಿಗೆ 104 ಕಾಲ್ ಸೆಂಟರ್‌ನಲ್ಲಿ 108 ಅಂಬುಲೆನ್ಸ್ ಸೇವೆಗೆ ಓವರ್ ಫೋನ್ ಕಾಲ್ ಸೆಂಟರ್ ಸ್ಥಾಪಿಸಲು ಸಹ ಸೂಚನೆ ನೀಡಲಾಗಿದೆ. 108 ಹಾಗೂ 112 ಕಾಲ್ ಸೆಂಟರ್‌ಗಳಲ್ಲಿ ಅಧಿಕ ಕರೆ ಸ್ವೀಕರಿಸಲು ಅನುಕೂಲವಾಗುವಂತೆ ಪ್ರಸ್ತುತ ಇರುವ ಸಿಬ್ಬಂದಿಗಳ ಜೊತೆಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಅಂಬುಲೆನ್ಸ್ ಡ್ರೈವರ್‌ಗಳಿಗೆ ತಮ್ಮ ಮೊಬೈಲ್ ಮೂಲಕ ಆಸ್ಪತ್ರೆಗಳಿಂದ ನೇರವಾಗಿ ಕರೆಗಳನ್ನು ಸ್ವೀಕರಿಸಲು ಸಹ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಊಹಾಪೋಹಗಳಿಗೆ ಕಿವಿಗೊಡದಂತೆ SMK ನಿವಾಸದಿಂದ ಸಂದೇಶ
Advertisement
ತಾಂತ್ರಿಕ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಸಮರೋಪಾದಿಯಲ್ಲಿ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಪರ್ಯಾಯ ವ್ಯವಸ್ಥೆಗಳ ಮೂಲಕ ಸೇವೆಯಲ್ಲಿ ಉಂಟಾಗಿರುವ ತಾತ್ಕಾಲಿಕ ವ್ಯತ್ಯಯವನ್ನು ಕನಿಷ್ಠ ಮಟ್ಟದಲ್ಲಿಡಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.